2 ಅರಸುಗಳು 17:27 - ಪರಿಶುದ್ದ ಬೈಬಲ್27 ಆದ್ದರಿಂದ ಅಶ್ಶೂರದ ರಾಜನು, “ನೀವು ಸಮಾರ್ಯದಿಂದ ಕೆಲವು ಯಾಜಕರನ್ನು ಕರೆದೊಯ್ದಿರುವಿರಿ. ನಾನು ಸಮಾರ್ಯದಿಂದ ಸೆರೆಹಿಡಿದು ತಂದಿರುವ ಯಾಜಕರಲ್ಲೊಬ್ಬನನ್ನು ಅಲ್ಲಿಗೆ ಕಳುಹಿಸಿ. ಆ ಯಾಜಕನು ಹೋಗಿ ಅಲ್ಲಿಯೇ ನೆಲೆಸಲಿ. ನಂತರ ಆ ಯಾಜಕನ ಆ ದೇಶದ ದೇವರ ಕಟ್ಟಳೆಗಳನ್ನು ಜನರಿಗೆ ಬೋಧಿಸಲಿ” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆಗ ಅಶ್ಶೂರದ ಅರಸನು ಅವರಿಗೆ, “ಅಲ್ಲಿಂದ ಇಲ್ಲಿಗೆ ಸೆರೆಯವರಾಗಿ ಬಂದಿರುವ ಯಾಜಕರಲ್ಲಿ ಒಬ್ಬನನ್ನು ಅಲ್ಲಿಗೆ ಕಳುಹಿಸಿರಿ. ಅವನು ಹೋಗಿ ಅಲ್ಲಿ ವಾಸವಾಗಿದ್ದು ಆ ದೇಶದ ದೇವರಿಗೆ ನಡೆಯತಕ್ಕ ರೀತಿಯನ್ನು ಅವರಿಗೆ ಕಲಿಸಲಿ” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಆಗ ಅವನು, “ಅಲ್ಲಿಂದ ಇಲ್ಲಿಗೆ ಸೆರೆಯವರಾಗಿ ಬಂದಿರುವ ಯಾಜಕರಲ್ಲೊಬ್ಬನನ್ನು ಅಲ್ಲಿಗೆ ಕಳುಹಿಸಿರಿ. ಅವನು ಹೋಗಿ ಅಲ್ಲಿ ವಾಸವಾಗಿದ್ದು ಆ ನಾಡಿನ ದೇವರಿಗೆ ಸೇವೆಮಾಡುವ ರೀತಿಯನ್ನು ಅವರಿಗೆ ಕಲಿಸಲಿ,” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಆಗ ಅವನು ಅವರಿಗೆ - ಅಲ್ಲಿಂದ ಇಲ್ಲಿಗೆ ಸೆರೆಯವರಾಗಿ ಬಂದಿರುವ ಯಾಜಕರಲ್ಲೊಬ್ಬನನ್ನು ಅಲ್ಲಿಗೆ ಕಳುಹಿಸಿರಿ. ಅವನು ಹೋಗಿ ಅಲ್ಲಿ ವಾಸವಾಗಿದ್ದು ಆ ದೇಶದ ದೇವರಿಗೆ ನಡೆಯತಕ್ಕ ರೀತಿಯನ್ನು ಅವರಿಗೆ ಕಲಿಸಲಿ ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆಗ ಅಸ್ಸೀರಿಯದ ಅರಸನು, “ನೀವು ಅಲ್ಲಿಂದ ತೆಗೆದುಕೊಂಡು ಬಂದ ಯಾಜಕರಲ್ಲಿ ಒಬ್ಬನನ್ನು ಅಲ್ಲಿಗೆ ಕರೆದುಕೊಂಡು ಹೋಗಿರಿ. ಅವನು ಅಲ್ಲಿ ವಾಸವಾಗಿರಲಿ. ಅವನೇ ಅವರಿಗೆ ಆ ದೇಶದ ದೇವರು ಅಪೇಕ್ಷಿಸುವುದನ್ನು ಬೋಧಿಸಲಿ,” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿ |
ಯಜ್ಞವೇದಿಕೆಯ ವಿರುದ್ಧ ಮಾತನಾಡುವಂತೆ ಆ ದೇವಮನುಷ್ಯನಿಗೆ ಯೆಹೋವನು ಆಜ್ಞಾಪಿಸಿದನು. ಆಗ ಅವನು ಹೇಳಿದ್ದೇನೆಂದರೆ: “ಯಜ್ಞವೇದಿಕೆಯೇ, ಯೆಹೋವನು ನಿನಗೆ ಹೀಗೆನ್ನುತ್ತಾನೆ: ‘ದಾವೀದನ ವಂಶದಲ್ಲಿ ಯೋಷೀಯನೆಂಬ ಮಗನು ಹುಟ್ಟುವನು. ಈಗ ಈ ಪೂಜಾಸ್ಥಳಗಳಲ್ಲಿ ಧೂಪಸುಡುತ್ತಿರುವ ಈ ಯಾಜಕರನ್ನು ಅವನು ಹಿಡಿದು ಅವರನ್ನು ನಿನ್ನ ಮೇಲೆಯೇ ಕೊಲ್ಲುವನು; ಈಗ ನಿನ್ನ ಮೇಲೆ ಧೂಪಸುಡುತ್ತಿರುವ ಯಾಜಕರನ್ನು ಅವನು ಹಿಡಿದು ಅವರ ಮೂಳೆಗಳನ್ನು ನಿನ್ನ ಮೇಲೆ ಸುಡುವನು.’”
ಎಜ್ರನೇ, ನಿನ್ನ ದೇವರು ನಿನಗೆ ಕೊಟ್ಟಿರುವ ಜ್ಞಾನಶಕ್ತಿಯನ್ನು ಉಪಯೋಗಿಸಿ ನ್ಯಾಯಾಧೀಶರನ್ನೂ ನ್ಯಾಯಶಾಸ್ತ್ರಿಗಳನ್ನೂ ಆರಿಸಿ ನೇಮಿಸಲು ನಿನಗೆ ಅಧಿಕಾರ ಕೊಟ್ಟಿದ್ದೇನೆ. ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯಗಳಲ್ಲಿ ವಾಸಮಾಡುವ ಜನರಿಗೆಲ್ಲಾ ಅವರು ನ್ಯಾಯತೀರಿಸುವರು. ನಿನ್ನ ದೇವರ ಕಟ್ಟಳೆಗಳನ್ನು ಅರಿತವರಿಗೆಲ್ಲಾ ಅವರು ನ್ಯಾಯತೀರಿಸುವರು. ಯಾರಿಗಾದರೂ ದೇವರ ಕಟ್ಟಳೆ ಗೊತ್ತಿಲ್ಲದಿದ್ದಲ್ಲಿ ಆ ನ್ಯಾಯಶಾಸ್ತ್ರಿಗಳು ಅವರಿಗೆ ಕಲಿಸಬೇಕು.