2 ಅರಸುಗಳು 17:3 - ಪರಿಶುದ್ದ ಬೈಬಲ್3 ಅಶ್ಶೂರದ ರಾಜನಾದ ಶಲ್ಮನೆಸರನು ಹೋಶೇಯನ ವಿರುದ್ಧ ಯುದ್ಧಕ್ಕೆ ಬಂದನು. ಶಲ್ಮನೆಸರನು ಹೋಶೇಯನನ್ನು ಸೋಲಿಸಿದನು. ಆದ್ದರಿಂದ ಹೋಶೇಯನು ಶಲ್ಮನೆಸರನಿಗೆ ಸೇವಕನಾಗಿ ಕಪ್ಪಕಾಣಿಕೆಯನ್ನು ಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅಶ್ಶೂರದ ಅರಸನಾದ ಶಲ್ಮನೆಸರನು ಹೋಶೇಯನಿಗೆ ವಿರುದ್ಧವಾಗಿ ಬಂದಾಗ, ಹೋಶೇಯನು ಅವನಿಗೆ ಅಧೀನನಾಗಿ ಕಪ್ಪಕೊಡುವವನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅಸ್ಸೀರಿಯದ ಅರಸ ಶಲ್ಮನೆಸರನು ಇವನಿಗೆ ವಿರುದ್ಧ ದಂಡೆತ್ತಿ ಬಂದಾಗ ಇವನು ಇವನಿಗೆ ಅಧೀನನಾಗಿ ಕಪ್ಪಕೊಡುವವನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅಶ್ಶೂರದ ಅರಸನಾದ ಶಲ್ಮನೆಸೆರನು ಇವನಿಗೆ ವಿರೋಧವಾಗಿ ಬಂದಾಗ ಇವನು ಅವನಿಗೆ ಅಧೀನನಾಗಿ ಕಪ್ಪಕೊಡುವವನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅಸ್ಸೀರಿಯದ ಅರಸನಾದ ಶಲ್ಮನೆಸೆರನು ಅವನ ವಿರುದ್ಧ ಬಂದದ್ದರಿಂದ, ಹೋಶೇಯನು ಅವನಿಗೆ ಸೇವಕನಾಗಿ ಅವನಿಗೆ ಕಪ್ಪವನ್ನು ಕೊಟ್ಟನು. ಅಧ್ಯಾಯವನ್ನು ನೋಡಿ |
ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನೆಂಬವನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ಪೆಕಹನು ಇಸ್ರೇಲಿನ ರಾಜನಾಗಿದ್ದ ಸಂದರ್ಭದಲ್ಲಿ ಇದು ಸಂಭವಿಸಿತು. ತಿಗ್ಲತ್ಪಿಲೆಸರನು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಪ್ರಾಂತ್ಯಗಳನ್ನೆಲ್ಲ ಸ್ವಾಧೀನಪಡಿಸಿಕೊಂಡನು. ತಿಗ್ಲತ್ಪಿಲೆಸರನು ಈ ಸ್ಥಳಗಳಲ್ಲಿದ್ದ ಜನರನ್ನು ಸೆರೆಯಾಳುಗಳನ್ನಾಗಿಸಿ ಅಶ್ಶೂರಿಗೆ ಕೊಂಡೊಯ್ದನು.
ಹೋಶೇಯನು ಈಜಿಪ್ಟಿನ ರಾಜನಲ್ಲಿಗೆ ಸಂದೇಶಕರನ್ನು ಕಳುಹಿಸಿದ್ದನು. ಈಜಿಪ್ಟಿನ ರಾಜನಿಗೆ ಸೋ ಎಂಬ ಹೆಸರಿತ್ತು. ಹೋಶೇಯನು ಅಶ್ಶೂರದ ರಾಜನಿಗೆ ಪ್ರತಿವರ್ಷ ಕಪ್ಪಕಾಣಿಕಯನ್ನು ಕೊಡುತ್ತಿದ್ದನು, ಆದರೆ ಆ ವರ್ಷ ಕೊಡಲಿಲ್ಲ. ಆದರೆ ಅಶ್ಶೂರದ ರಾಜನಿಗೆ ಹೋಶೇಯನು ತನ್ನ ವಿರುದ್ಧ ಮಾಡಿರುವ ಒಳಸಂಚು ತಿಳಿದುಬಂದಿತು. ಆದ್ದರಿಂದ ಅಶ್ಶೂರದ ರಾಜನು ಹೋಶೇಯನನ್ನು ಬಂಧಿಸಿ, ಸೆರೆಯಲ್ಲಿಟ್ಟನು.
ನಮ್ಮ ದೇವರೇ, ನೀನು ಮಹಾ ದೇವರು, ಭಯಂಕರನೂ ಬಲಿಷ್ಠ ಸೈನಿಕನೂ ಆಗಿರುವ ದೇವರು! ನೀನು ದಯಾಪರನೂ ನಂಬಿಗಸ್ತನೂ ಆಗಿರುವಿ. ನಿನ್ನ ಒಡಂಬಡಿಕೆಯನ್ನು ನೆರವೇರಿಸುವ ದೇವರು. ನಾವು ತುಂಬಾ ಸಂಕಟಗಳನ್ನು ಅನುಭವಿಸಿದೆವು. ನಮ್ಮ ಸಂಕಟಗಳು ನಿನಗೆ ವಿಶೇಷವಾದವುಗಳಾಗಿವೆ. ನಮ್ಮ ಜನರಿಗೆಲ್ಲಾ ತೊಂದರೆಗಳುಂಟಾದವು. ನಮ್ಮ ನಾಯಕರಿಗೂ ರಾಜನಿಗೂ ನಮ್ಮ ಯಾಜಕರಿಗೂ ಪ್ರವಾದಿಗಳಿಗೂ ಅಶ್ಶೂರ್ಯದ ರಾಜನ ಸಮಯದಿಂದ ಈ ದಿವಸದ ತನಕ ಭಯಂಕರ ಕಷ್ಟಗಳು ಬಂದೊದಗಿದವು.