Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:32 - ಪರಿಶುದ್ದ ಬೈಬಲ್‌

32 ಆದರೆ ಅವರು ಯೆಹೋವನಲ್ಲಿಯೂ ಭಕ್ತಿಯನ್ನಿಟ್ಟಿದ್ದರು. ಅವರು ಉನ್ನತಸ್ಥಳಗಳಿಗೆ ಯಾಜಕರನ್ನು ಜನರಲ್ಲಿಯೇ ಆಯ್ಕೆ ಮಾಡಿಕೊಂಡರು. ಆ ಯಾಜಕರು ಜನರಿಗಾಗಿ ಉನ್ನತಸ್ಥಳಗಳಲ್ಲಿನ ದೇವಾಲಯಗಳಲ್ಲಿ ಯಜ್ಞವನ್ನು ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅವರು ಯೆಹೋವನ ಭಕ್ತರಾಗಿದ್ದರೂ ಮನಸ್ಸಿಗೆ ಬಂದವರನ್ನು ಉನ್ನತ ಪೂಜಾಸ್ಥಳಗಳ ಯಾಜಕರನ್ನಾಗಿ ನೇಮಿಸಿಕೊಂಡು ಅವರ ಮುಖಾಂತರವಾಗಿ ಪೂಜಾಸ್ಥಳದ ಗುಡಿಗಳಲ್ಲಿ ಆರಾಧನೆ ನಡಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಅವರು ಸರ್ವೇಶ್ವರನ ಭಕ್ತರಾಗಿದ್ದರೂ ತಮ್ಮಲ್ಲೆ ಯಾರ್ಯಾರನ್ನೋ ಉನ್ನತ ಪೂಜಾಸ್ಥಳಗಳ ಯಾಜಕರನ್ನಾಗಿ ನೇಮಿಸಿಕೊಂಡು, ಅವರ ಮುಖಾಂತರ ಪೂಜಾಸ್ಥಳದ ಗುಡಿಗಳಲ್ಲಿ ಆರಾಧನೆ ನಡೆಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅವರು ಯೆಹೋವನ ಭಕ್ತರಾಗಿ ಕನಿಷ್ಠಜನರಲ್ಲಿ ಕೆಲವರನ್ನು ಪೂಜಾಸ್ಥಳಗಳ ಯಾಜಕರನ್ನಾಗಿ ನೇವಿುಸಿಕೊಂಡು ಅವರ ಮುಖಾಂತರವಾಗಿ ಪೂಜಾಸ್ಥಳದ ಗುಡಿಗಳಲ್ಲಿ ಆರಾಧನೆ ನಡಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಅವರು ಯೆಹೋವ ದೇವರಿಗೆ ಆರಾಧನೆ ಸಲ್ಲಿಸಿದರು. ಆದರೂ ತಮ್ಮಲ್ಲಿರುವ ಪೂಜಾಸ್ಥಳಗಳ ಯಾಜಕರನ್ನು ನೇಮಿಸಿಕೊಂಡರು. ಇವರು ಪೂಜಾಸ್ಥಳಗಳ ಮೇಲಿರುವ ಮಂದಿರಗಳಲ್ಲಿ ಅವರಿಗೋಸ್ಕರ ಬಲಿಗಳನ್ನು ಅರ್ಪಿಸುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:32
11 ತಿಳಿವುಗಳ ಹೋಲಿಕೆ  

ಯಾರೊಬ್ಬಾಮನು ಎತ್ತರದ ಸ್ಥಳಗಳಲ್ಲಿ ಆಲಯಗಳನ್ನು ನಿರ್ಮಿಸಿದನು. ಅವನು ಇಸ್ರೇಲಿನ ಬೇರೆಬೇರೆ ಕುಲಗಳಿಂದ ಯಾಜಕರನ್ನು ಆರಿಸಿಕೊಂಡನು. (ಅವನು ಲೇವಿಯರ ಕುಲವೊಂದರಿಂದಲೇ ಯಾಜಕರನ್ನು ಆರಿಸಿಕೊಳ್ಳಲಿಲ್ಲ.)


ಆದರೆ ಅವರೆಲ್ಲರೂ ತಮ್ಮ ಸ್ವಂತ ದೇವರುಗಳನ್ನು ನಿರ್ಮಿಸಿ, ಅವುಗಳನ್ನು ಸಮಾರ್ಯದವರು ನಿರ್ಮಿಸಿದ್ದ ಉನ್ನತಸ್ಥಳಗಳಲ್ಲಿನ ಆಲಯಗಳಲ್ಲಿ ಇರಿಸಿದರು. ಅವರು ಎಲ್ಲೆಲ್ಲಿ ವಾಸಿಸುತ್ತಿದ್ದರೋ ಅಲ್ಲೆಲ್ಲಾ ಹೀಗೆಯೇ ಮಾಡಿದರು.


ತಮ್ಮ ಮಾಳಿಗೆಯ ಮೇಲೆ ಹತ್ತಿ ನಕ್ಷತ್ರಗಳನ್ನು ಆರಾಧಿಸುತ್ತಾರೋ ನಾನು ಅವರನ್ನು ನಿರ್ಮೂಲ ಮಾಡುತ್ತೇನೆ. ಜನರು ತಮ್ಮ ಸುಳ್ಳು ಪುರೋಹಿತರನ್ನು ಮರೆತುಬಿಡುವರು. ಕೆಲವರು ತಮ್ಮನ್ನು ನನ್ನ ಆರಾಧಕರೆಂದು ಹೇಳಿಕೊಳ್ಳುವರು. ಆದರೆ ಈಗ ಅವರು ಸುಳ್ಳು ದೇವರಾದ ಮಲ್ಕಾಮನನ್ನು ಆರಾಧಿಸುತ್ತಾರೆ. ಅಂಥವರನ್ನು ಅವರ ಸ್ಥಳಗಳಿಂದ ತೆಗೆದುಹಾಕುವೆನು.


ಯೋಷೀಯನು ಸಮಾರ್ಯದ ನಗರಗಳಲ್ಲಿದ್ದ ಉನ್ನತಸ್ಥಳಗಳ ಆಲಯಗಳನ್ನೆಲ್ಲ ನಾಶಗೊಳಿಸಿದನು. ಇಸ್ರೇಲಿನ ರಾಜರುಗಳು ಈ ಆಲಯಗಳನ್ನು ನಿರ್ಮಿಸಿದ್ದರು. ಇದರಿಂದ ಯೆಹೋವನು ಬಹಳ ಕೋಪಗೊಂಡಿದ್ದನು. ಯೋಷೀಯನು ಬೇತೇಲಿನಲ್ಲಿ ಆರಾಧನೆಯ ಸ್ಥಳಗಳನ್ನು ನಾಶಪಡಿಸಿದಂತೆ ಆ ಆಲಯಗಳನ್ನೂ ನಾಶಗೊಳಿಸಿದನು.


ರಾಜನಾದ ಯಾರೊಬ್ಬಾಮನು ಬದಲಾವಣೆಯಾಗಲಿಲ್ಲ. ಅವನು ಕೆಟ್ಟಕಾರ್ಯಗಳನ್ನು ಮಾಡುತ್ತಲೇ ಇದ್ದನು. ಅವನು ಬೇರೆಬೇರೆ ಕುಲಗಳಿಂದ ಯಾಜಕರನ್ನು ಆರಿಸಿಕೊಳ್ಳುತ್ತಲೇ ಇದ್ದನು. ಆ ಯಾಜಕರು ಎತ್ತರದ ಸ್ಥಳಗಳಲ್ಲಿ ಸೇವೆಯನ್ನು ಮಾಡುತ್ತಿದ್ದರು. ಯಾಜಕನಾಗಬೇಕೆಂದು ಯಾವ ವ್ಯಕ್ತಿಯಾದರೂ ಇಚ್ಛಿಸಿದರೆ, ಯಾಜಕನಾಗಲು ಅವನಿಗೆ ಅವಕಾಶ ಕಲ್ಪಿಸುತ್ತಿದ್ದನು.


ಹೀಗೆ ಪ್ರವಾದಿಯು ಆ ದೇಹವನ್ನು ಸಮಾಧಿ ಮಾಡಿದನು. ನಂತರ ಅವನು ತನ್ನ ಮಕ್ಕಳಿಗೆ, “ನಾನು ಸತ್ತಾಗ, ನನ್ನನ್ನು ಅದೇ ಸ್ಮಶಾನದಲ್ಲಿ ಸಮಾಧಿಮಾಡಿ. ಅವನ ಪಕ್ಕದಲ್ಲೇ ನನ್ನ ಮೂಳೆಗಳನ್ನೂ ಹಾಕಿರಿ.


ಆದರೆ ಅವರು ಯೆಹೋವನನ್ನು ಗೌರವಿಸಲಿಲ್ಲ. ಆದ್ದರಿಂದ ಅವರ ಮೇಲೆ ಆಕ್ರಮಣಮಾಡಲು ಯೆಹೋವನು ಸಿಂಹಗಳನ್ನು ಕಳುಹಿಸಿದನು. ಈ ಸಿಂಹಗಳು ಆ ಜನರಲ್ಲಿ ಕೆಲವರನ್ನು ಕೊಂದುಹಾಕಿದವು.


ಅವರು ಯೆಹೋವನಲ್ಲಿ ಭಕ್ತಿಯಿಟ್ಟಿದ್ದರು, ಆದರೆ ತಮ್ಮ ಸ್ವಂತ ದೇವರುಗಳ ಸೇವೆಯನ್ನೂ ಮಾಡಿದರು. ಅವರು ತಮ್ಮನ್ನು ತೆಗೆದುಕೊಂಡುಬಂದ ದೇಶಗಳಲ್ಲಿ ಮಾಡುತ್ತಿದ್ದಂತೆ ತಮ್ಮ ದೇವರುಗಳ ಸೇವೆಯನ್ನು ಮಾಡಿದರು.


ರಾಜನಾದ ಯಾರೊಬ್ಬಾಮನು ಇಸ್ರೇಲರಿಗೆ ತನ್ನದೇ ಆದ ಹಬ್ಬದ ದಿನವನ್ನು ಆರಿಸಿಕೊಂಡನು. ಅದು ಎಂಟನೆಯ ತಿಂಗಳ ಹದಿನೈದನೆಯ ದಿವಸವಾಗಿತ್ತು. ಆ ಸಮಯದಲ್ಲಿ ಅವನು ತಾನು ನಿರ್ಮಿಸಿದ ಯಜ್ಞವೇದಿಕೆಯ ಮೇಲೆ ಯಜ್ಞಗಳನ್ನು ಮತ್ತು ಧೂಪವನ್ನು ಅರ್ಪಿಸಿದನು. ಇದು ಬೇತೇಲ್ ನಗರದಲ್ಲಿ ನಡೆಯಿತು.


ಅನ್ಯಜನಾಂಗಗಳು ಯೆಹೋವನಲ್ಲಿ ಭಕ್ತಿಯಿಂದಿದ್ದರೂ ತಮ್ಮ ಸ್ವಂತ ವಿಗ್ರಹಗಳನ್ನು ಪೂಜಿಸುತ್ತಿದ್ದರು. ಅವರ ಮಕ್ಕಳು ಮತ್ತು ಮೊಮ್ಮಕ್ಕಳು ತಮ್ಮ ಪೂರ್ವಿಕರು ಮಾಡಿದಂತಹ ಕಾರ್ಯಗಳನ್ನು ಮಾಡುತ್ತಿದ್ದರು. ಅವರು ಇಂದಿಗೂ ಇಂತಹ ಕಾರ್ಯಗಳನ್ನು ಮಾಡುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು