2 ಅರಸುಗಳು 17:34 - ಪರಿಶುದ್ದ ಬೈಬಲ್34 ಇಂದಿಗೂ ಸಹ ಅವರು ಪೂರ್ವಕಾಲದಲ್ಲಿ ಮಾಡುತ್ತಿದ್ದಂತೆಯೇ ಜೀವಿಸುತ್ತಿದ್ದಾರೆ. ಅವರಿಗೆ ಯೆಹೋವನಲ್ಲಿ ಭಕ್ತಿಯಿಲ್ಲ. ಅವರು ಇಸ್ರೇಲರ ನಿಯಮಗಳಿಗೆ ಮತ್ತು ಆಜ್ಞೆಗಳಿಗೆ ವಿಧೇಯರಾಗುವುದಿಲ್ಲ. ಯೆಹೋವನು ಯಾಕೋಬನ ಸಂತತಿಗೆ ನೀಡಿದ ನಿಯಮಗಳನ್ನು ಮತ್ತು ಆಜ್ಞೆಗಳನ್ನು ಅನುಸರಿಸುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಅವರು ಆ ಕಾಲದಲ್ಲಿ ರೂಢಿಯಾದ ಪದ್ಧತಿಯಂತೆ ಇಂದಿನವರೆಗೂ ನಡೆಯುತ್ತಿದ್ದಾರೆ. ಅವರು ಯೆಹೋವನಲ್ಲಿ ಭಯಭಕ್ತಿಯುಳ್ಳವರಲ್ಲ. ಆತನಿಂದ ಇಸ್ರಾಯೇಲನೆಂಬ ಹೆಸರು ಹೊಂದಿದ ಯಾಕೋಬನ ಸಂತಾನದವರಿಗೆ ಕೊಡಲ್ಪಟ್ಟ ಆಜ್ಞಾವಿಧಿಗಳನ್ನು, ಧರ್ಮನಿಯಮಗಳನ್ನು ಅನುಸರಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಆ ಕಾಲದ ಪದ್ಧತಿಯನ್ನು ಇಂದಿಗೂ ಮುಂದುವರಿಸುತ್ತಿದ್ದಾರೆ. ಸರ್ವೇಶ್ವರನಲ್ಲಿ ಭಯಭಕ್ತಿ ಇಸ್ರಯೇಲರಿಗಿಲ್ಲ; ಅವರಿಂದಲೇ ಇಸ್ರಯೇಲನೆಂಬ ಹೆಸರು ಹೊಂದಿದ ಯಕೋಬನ ಸಂತಾನದವರಿಗೆ ಕೊಡಲಾದ ಆಜ್ಞಾನಿಯಮವಿಧಿ ಧರ್ಮಶಾಸ್ತ್ರಗಳನ್ನು ಅವರು ಅನುಸರಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಅವರು ಆ ಕಾಲದಲ್ಲಿ ರೂಢಿಯಾದ ಪದ್ಧತಿಯಂತೆ ಇಂದಿನವರೆಗೂ ನಡೆಯುತ್ತಾರೆ. ಅವರು ಯೆಹೋವನಲ್ಲಿ ಭಯಭಕ್ತಿಯುಳ್ಳವರಲ್ಲ; ಆತನಿಂದ ಇಸ್ರಾಯೇಲನೆಂಬ ಹೆಸರು ಹೊಂದಿದ ಯಾಕೋಬನ ಸಂತಾನದವರಿಗೆ ಕೊಡಲ್ಪಟ್ಟ ಆಜ್ಞಾನಿಯಮ ವಿಧಿಧರ್ಮಶಾಸ್ತ್ರಗಳನ್ನು ಅನುಸರಿಸುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಈ ದಿವಸದವರೆಗೂ ಅವರು ತಮ್ಮ ಪೂರ್ವದ ಪದ್ಧತಿಯ ಪ್ರಕಾರ ಮಾಡುತ್ತಾರೆ. ಅವರು ಯೆಹೋವ ದೇವರಿಗೆ ಭಯಪಡದೆ, ತಮ್ಮ ಕಟ್ಟಳೆಗಳ ಪ್ರಕಾರವಾಗಿಯೂ, ತಮ್ಮ ನೀತಿಗಳ ಪ್ರಕಾರವಾಗಿಯೂ, ನಿಯಮದ ಪ್ರಕಾರವಾಗಿಯೂ ಯೆಹೋವ ದೇವರು ಇಸ್ರಾಯೇಲೆಂದು ಹೆಸರಿಟ್ಟ ಯಾಕೋಬನ ಮಕ್ಕಳಿಗೆ ಆಜ್ಞಾಪಿಸಿದ ಆಜ್ಞೆಯ ಪ್ರಕಾರವಾಗಿಯೂ ಮಾಡದೆ ಇದ್ದಾರೆ. ಅಧ್ಯಾಯವನ್ನು ನೋಡಿ |