2 ಅರಸುಗಳು 17:35 - ಪರಿಶುದ್ದ ಬೈಬಲ್35 ಯೆಹೋವನು ಇಸ್ರೇಲಿನ ಜನರೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ, “ನೀವು ಅನ್ಯದೇವತೆಗಳನ್ನು ಪೂಜಿಸಬಾರದು; ನೀವು ಅವುಗಳಿಗೆ ಕೈಮುಗಿಯಬಾರದು; ಅವುಗಳ ಸೇವೆಯನ್ನು ಮಾಡಬಾರದು; ಅವುಗಳಿಗೆ ಯಜ್ಞಗಳನ್ನು ಅರ್ಪಿಸಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಯೆಹೋವನು ಇಸ್ರಾಯೇಲರೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ, “ನೀವು ಅನ್ಯದೇವತೆಗಳಿಗೆ ಭಯಪಡಬಾರದು, ಅವುಗಳಿಗೆ ಕೈಮುಗಿಯಲೂ ಬಾರದು, ಆರಾಧಿಸಲೂಬಾರದು, ಯಜ್ಞವನ್ನರ್ಪಿಸಲೂಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಇಸ್ರಯೇಲರಿಗೆ ಸರ್ವೇಶ್ವರ, “ನೀವು ಅನ್ಯದೇವತೆಗಳನ್ನು ಆರಾಧಿಸಬಾರದು, ಅವುಗಳಿಗೆ ಕೈಮುಗಿಯಲೂಬಾರದು. ಸೇವೆಮಾಡಬಾರದು, ಬಲಿ ಅರ್ಪಿಸಲೂಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಯೆಹೋವನು ಇಸ್ರಾಯೇಲ್ಯರಿಗೆ ನೀವು ಅನ್ಯದೇವತೆಗಳನ್ನು ಆರಾಧಿಸಬಾರದು, ಅವುಗಳಿಗೆ ಕೈಮುಗಿಯಲೂ ಬಾರದು, ಸೇವೆಮಾಡಲೂ ಯಜ್ಞವರ್ಪಿಸಲೂಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಯೆಹೋವ ದೇವರು ಅವರ ಸಂಗಡ ಒಡಂಬಡಿಕೆ ಮಾಡಿ ಅವರಿಗೆ ಆಜ್ಞಾಪಿಸಿ, “ನೀವು ಇತರ ದೇವರುಗಳಿಗೆ ಭಯಪಡದೆ ಅವುಗಳಿಗೆ ಅಡ್ಡಬೀಳದೆ, ಅವುಗಳನ್ನು ಸೇವಿಸದೆ, ಅವುಗಳಿಗೆ ಬಲಿಯನ್ನು ಅರ್ಪಿಸದೆ ಇರಬೇಕು. ಅಧ್ಯಾಯವನ್ನು ನೋಡಿ |
ಯೆಹೋವನು ಅವರ ಪೂರ್ವಿಕರೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಮತ್ತು ಆತನ ನಿಯಮಗಳನ್ನು ಅವರು ಒಪ್ಪಲಿಲ್ಲ. ಅವರು ಯೆಹೋವನ ಎಚ್ಚರಿಕೆಗೆ ಗಮನವನ್ನೂ ನೀಡಲಿಲ್ಲ. ಅವರು ನಿರರ್ಥಕವಾದ ವಿಗ್ರಹಗಳನ್ನು ಅನುಸರಿಸಿ ನಿಷ್ಪ್ರಯೋಜಕರಾದರು, ಅವರು ತಮ್ಮ ಸುತ್ತಮುತ್ತಲಿನ ಜನಾಂಗಗಳನ್ನು ಅನುಸರಿಸಿದರು. ಯೆಹೋವನು ಇಸ್ರೇಲಿನ ಜನರಿಗೆ ಮಾಡಬಾರದೆಂದು ಎಚ್ಚರಿಸಿ ಹೇಳಿದ್ದನ್ನು ಈ ಜನಾಂಗಗಳು ಮಾಡಿದವು.