2 ಅರಸುಗಳು 17:36 - ಪರಿಶುದ್ದ ಬೈಬಲ್36 ಆದರೆ ನೀವು ಯೆಹೋವನನ್ನು ಅನುಸರಿಸಲೇಬೇಕು. ನಿಮ್ಮನ್ನು ಈಜಿಪ್ಟಿನಿಂದ ಹೊರಗೆತಂದ ದೇವರೇ ನಿಮ್ಮ ಯೆಹೋವ. ಯೆಹೋವನು ನಿಮ್ಮನ್ನು ರಕ್ಷಿಸಲು ತನ್ನ ಮಹಾಶಕ್ತಿಯನ್ನು ಬಳಸಿದನು. ನೀವು ಯೆಹೋವನನ್ನು ಗೌರವಿಸಿ ಆರಾಧಿಸಬೇಕು ಮತ್ತು ಆತನಿಗೆ ಯಜ್ಞಗಳನ್ನು ಅರ್ಪಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ನಿಮ್ಮನ್ನು ಮಹಾಶಕ್ತಿ, ಭುಜಬಲಪರಾಕ್ರಮ ಇವುಗಳ ಮೂಲಕವಾಗಿ ಐಗುಪ್ತ ದೇಶದಿಂದ ಕರೆದುಕೊಂಡು ಬಂದ ಯೆಹೋವನಾದ ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನಗೊಬ್ಬನಿಗೇ ಕೈಮುಗಿದು ಯಜ್ಞವರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ನಿಮ್ಮನ್ನು ಮಹಾಶಕ್ತಿ ಹಾಗು ಭುಜಪರಾಕ್ರಮಗಳ ಮೂಲಕ ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದ ಸರ್ವೇಶ್ವರನಾದ ನನ್ನಲ್ಲೇ ಭಯಭಕ್ತಿಯುಳ್ಳವರಾಗಿ ನನಗೊಬ್ಬನಿಗೇ ಕೈಮುಗಿದು ಬಲಿಯರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ನಿಮ್ಮನ್ನು ಮಹಾಶಕ್ತಿ ಭುಜಪರಾಕ್ರಮ ಇವುಗಳ ಮೂಲಕವಾಗಿ ಐಗುಪ್ತದೇಶದಿಂದ ಕರಕೊಂಡುಬಂದ ಯೆಹೋವನಾದ ನನ್ನಲ್ಲಿ ಭಯಭಕ್ತಿಯುಳ್ಳವರಾಗಿ ನನಗೊಬ್ಬನಿಗೇ ಕೈ ಮುಗಿದು ಯಜ್ಞವರ್ಪಿಸಬೇಕು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಆದರೆ ಮಹಾಶಕ್ತಿಯಿಂದಲೂ, ಚಾಚಿದ ಭುಜಪರಾಕ್ರಮದಿಂದಲೂ ಈಜಿಪ್ಟ್ ದೇಶದಿಂದ ನಿಮ್ಮನ್ನು ಬರಮಾಡಿದ ಯೆಹೋವ ದೇವರಿಗೆ ನೀವು ಭಯಪಟ್ಟು, ಅವರೊಬ್ಬರಿಗೇ ಅಡ್ಡಬಿದ್ದು, ಬಲಿ ಅರ್ಪಿಸಿರಿ. ಅಧ್ಯಾಯವನ್ನು ನೋಡಿ |