2 ಅರಸುಗಳು 17:39 - ಪರಿಶುದ್ದ ಬೈಬಲ್39 ನೀವು ನಿಮ್ಮ ದೇವರಾದ ಯೆಹೋವನನ್ನು ಮಾತ್ರ ಆರಾಧಿಸಬೇಕು. ಆಗ ಆತನು ನಿಮ್ಮನ್ನು ನಿಮ್ಮ ಶತ್ರುಗಳಿಂದ ರಕ್ಷಿಸುತ್ತಾನೆ” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಆದರೆ, ನಿಮ್ಮ ದೇವರಾದ ಯೆಹೋವನಲ್ಲಿ ನೀವು ಭಯಭಕ್ತಿಯುಳ್ಳವರಾಗಿರಬೇಕು. ಆಗ ಆತನು ನಿಮ್ಮನ್ನು ಎಲ್ಲಾ ಶತ್ರುಗಳ ಕೈಗೆ ಸಿಕ್ಕದಂತೆ ಕಾಪಾಡುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ನಿಮ್ಮ ದೇವರಾಗಿರುವ ಸರ್ವೇಶ್ವರನಾದ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ಆಗ ನಿಮ್ಮನ್ನು ಯಾವ ಶತ್ರುಗಳ ಕೈಗೂ ಸಿಕ್ಕದಂತೆ ತಪ್ಪಿಸುವೆನು,” ಎಂದು ಹೇಳಿ ಅವರೊಡನೆ ಒಡಂಬಡಿಕೆ ಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ನಿಮ್ಮ ದೇವರಾಗಿರುವ ಯೆಹೋವನಾದ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ಆಗ ನಿಮ್ಮನ್ನು ಎಲ್ಲಾ ಶತ್ರುಗಳ ಕೈಗೆ ಸಿಕ್ಕದಂತೆ ತಪ್ಪಿಸುವೆನು ಎಂದು ಹೇಳಿ ಅವರೊಡನೆ ಒಡಂಬಡಿಕೆ ಮಾಡಿಕೊಂಡನು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ನಿಮ್ಮ ದೇವರಾಗಿರುವ ಯೆಹೋವ ದೇವರಿಗೆ ಭಯಪಡಿರಿ. ಆಗ ಅವರು ನಿಮ್ಮನ್ನು ನಿಮ್ಮ ಶತ್ರುಗಳ ಕೈಯೊಳಗಿಂದ ವಿಮೋಚನೆ ಮಾಡುವರು,” ಎಂದು ಹೇಳಿದ್ದರು. ಅಧ್ಯಾಯವನ್ನು ನೋಡಿ |
ಸಮುವೇಲನು ಇಸ್ರೇಲರಿಗೆ, “ನೀವು ಯೆಹೋವನ ಬಳಿಗೆ ಪೂರ್ಣಮನಸ್ಸಿನಿಂದ ಮತ್ತೆ ಬರುವುದಾದರೆ ನಿಮ್ಮ ಬಳಿಯಿರುವ ಅನ್ಯದೇವರುಗಳನ್ನು ಎಸೆಯಬೇಕು. ನೀವು ಅಷ್ಟೋರೆತ್ ದೇವತೆಯ ವಿಗ್ರಹಗಳನ್ನು ತ್ಯಜಿಸಬೇಕು. ನೀವು ನಿಮ್ಮನ್ನು ಯೆಹೋವನಿಗೆ ಸಂಪೂರ್ಣವಾಗಿ ಒಪ್ಪಿಸಿಕೊಟ್ಟು ಆತನ ಸೇವೆಯನ್ನು ಮಾತ್ರ ಮಾಡಬೇಕು. ಆಗ ಆತನು ನಿಮ್ಮನ್ನು ಫಿಲಿಷ್ಟಿಯರಿಂದ ರಕ್ಷಿಸುತ್ತಾನೆ” ಎಂದು ಹೇಳಿದನು.