Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:4 - ಪರಿಶುದ್ದ ಬೈಬಲ್‌

4 ಹೋಶೇಯನು ಈಜಿಪ್ಟಿನ ರಾಜನಲ್ಲಿಗೆ ಸಂದೇಶಕರನ್ನು ಕಳುಹಿಸಿದ್ದನು. ಈಜಿಪ್ಟಿನ ರಾಜನಿಗೆ ಸೋ ಎಂಬ ಹೆಸರಿತ್ತು. ಹೋಶೇಯನು ಅಶ್ಶೂರದ ರಾಜನಿಗೆ ಪ್ರತಿವರ್ಷ ಕಪ್ಪಕಾಣಿಕಯನ್ನು ಕೊಡುತ್ತಿದ್ದನು, ಆದರೆ ಆ ವರ್ಷ ಕೊಡಲಿಲ್ಲ. ಆದರೆ ಅಶ್ಶೂರದ ರಾಜನಿಗೆ ಹೋಶೇಯನು ತನ್ನ ವಿರುದ್ಧ ಮಾಡಿರುವ ಒಳಸಂಚು ತಿಳಿದುಬಂದಿತು. ಆದ್ದರಿಂದ ಅಶ್ಶೂರದ ರಾಜನು ಹೋಶೇಯನನ್ನು ಬಂಧಿಸಿ, ಸೆರೆಯಲ್ಲಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಕೆಲವು ವರ್ಷಗಳಾದ ನಂತರ ಅರಸನಾದ ಹೋಶೇಯನು ಪ್ರತಿವರ್ಷವೂ ಕೊಡಬೇಕಾದ ಕಪ್ಪವನ್ನು ಕೊಡದೆಹೋದುದರಿಂದಲೂ, ಐಗುಪ್ತದ ಅರಸನಾದ ಸೋ ಎಂಬುವವನ ಬಳಿಗೆ ರಾಯಭಾರಿಗಳನ್ನು ಕಳುಹಿಸಿದ್ದರಿಂದಲೂ ಅಶ್ಶೂರದ ಅರಸನು ಇವನನ್ನು ದ್ರೋಹಿಯೆಂದು ತಿಳಿದು ಬಂಧಿಸಿ ಸೆರೆಯಲ್ಲಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಕೆಲವು ವರ್ಷಗಳಾದನಂತರ, ಇವನು ಪ್ರತಿ ವರ್ಷವೂ ಕೊಡಬೇಕಾದ ಕಪ್ಪವನ್ನು ಕೊಡದೆಹೋದನು; ಅದು ಮಾತ್ರವಲ್ಲ, ಈಜಿಪ್ಟಿನ ಅರಸನಾದ ಸೋ ಎಂಬವನ ಬಳಿಗೆ ರಾಯಭಾರಿಗಳನ್ನು ಕಳುಹಿಸಿದ್ದನು. ಈ ಕಾರಣ ಅಸ್ಸೀರಿಯದ ಅರಸನು ಇವನನ್ನು ದ್ರೋಹಿಯೆಂದು ತಿಳಿದು, ಬಂಧಿಸಿ ಸೆರೆಯಲ್ಲಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಕೆಲವು ವರುಷಗಳಾದನಂತರ ಇವನು ಪ್ರತಿವರ್ಷವೂ ಕೊಡಬೇಕಾದ ಕಪ್ಪವನ್ನು ಕೊಡದೆ ಹೋದದರಿಂದಲೂ ಐಗುಪ್ತದ ಅರಸನಾದ ಸೋ ಎಂಬವನ ಬಳಿಗೆ ರಾಯಭಾರಿಗಳನ್ನು ಕಳುಹಿಸಿದದರಿಂದಲೂ ಅಶ್ಶೂರದ ಅರಸನು ಇವನನ್ನು ದ್ರೋಹಿಯೆಂದು ತಿಳಿದು ಬಂಧಿಸಿ ಸೆರೆಯಲ್ಲಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ಅಸ್ಸೀರಿಯದ ಅರಸನು ಹೋಶೇಯನಲ್ಲಿ ಒಳಸಂಚನ್ನು ಕಂಡುಹಿಡಿದನು. ಏನೆಂದರೆ, ಹೋಶೇಯನು ಅಸ್ಸೀರಿಯದ ಅರಸನಿಗೆ ವರ್ಷ ವರ್ಷಕ್ಕೂ ಕೊಡುವ ಕಪ್ಪವನ್ನು ಕೊಡದೆ, ಈಜಿಪ್ಟಿನ ಅರಸನಾದ ಸೋ ಎಂಬವನ ಬಳಿಗೆ ದೂತರನ್ನು ಕಳುಹಿಸಿದನು. ಆದ್ದರಿಂದ ಅಸ್ಸೀರಿಯದ ಅರಸನು ಅವನನ್ನು ಕಟ್ಟಿ, ಸೆರೆಮನೆಯಲ್ಲಿ ಬಂಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:4
17 ತಿಳಿವುಗಳ ಹೋಲಿಕೆ  

ಹಿಜ್ಕೀಯನು ನಿಮ್ಮನ್ನು ಮೋಸಪಡಿಸುತ್ತಿದ್ದಾನೆ. ನೀವು ಜೆರುಸಲೇಮಿನಲ್ಲಿಯೇ ಇರುವಂತೆ ಹೇಳಿ ನಿಮಗೆ ಮೋಸಮಾಡುತ್ತಿದ್ದಾನೆ. ಹಾಗೆ ಮಾಡಿದರೆ ನೀವು ಅನ್ನನೀರಿಲ್ಲದೆ ಸಾಯುವಿರಿ. ನಿಮಗೆ ಹಿಜ್ಕೀಯನು, “ನಮ್ಮ ದೇವರಾದ ಯೆಹೋವನು ಅಶ್ಶೂರದ ರಾಜನಿಂದ ಕಾಪಾಡುವನು” ಎಂದು ಹೇಳುತ್ತಾನಲ್ಲಾ?


ಅವರು ಚಿದ್ಕೀಯನ ಮಕ್ಕಳನ್ನು ಅವನ ಎದುರಿನಲ್ಲಿಯೇ ಕೊಂದುಹಾಕಿದರು. ನಂತರ ಅವರು ಚಿದ್ಕೀಯನ ಕಣ್ಣುಗಳನ್ನು ಕಿತ್ತುಹಾಕಿದರು. ಅವರು ಅವನನ್ನು ಸರಪಣಿಗಳಿಂದ ಬಂಧಿಸಿ, ಬಾಬಿಲೋನಿಗೆ ಕೊಂಡೊಯ್ದರು.


ಯೆಹೋವನ ಕೋಪದಿಂದ ಯೆಹೂದಕ್ಕೆ ಮತ್ತು ಜೆರುಸಲೇಮಿಗೆ ಇವೆಲ್ಲವೂ ಸಂಭವಿಸಿದವು. ಹೀಗೆ ಯೆಹೋವನು ಅವರನ್ನು ತನ್ನಿಂದ ದೂರಸರಿಸಿದನು. ಚಿದ್ಕೀಯನು ಬಾಬಿಲೋನ್ ರಾಜನಿಗೆ ವಿರುದ್ಧವಾಗಿ ದಂಗೆ ಎದ್ದನು.


ಯೆಹೋಯಾಕೀಮನ ಕಾಲದಲ್ಲಿ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಹೂದ ದೇಶಕ್ಕೆ ಬಂದನು. ಯೆಹೋಯಾಕೀಮನು ಮೂರು ವರ್ಷಗಳವರೆಗೆ ನೆಬೂಕದ್ನೆಚ್ಚರನ ಸೇವೆಮಾಡಿದನು. ನಂತರ ಯೆಹೋಯಾಕೀಮನು ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ದಂಗೆ ಎದ್ದು ಅವನ ಆಳ್ವಿಕೆಯಿಂದ ದೂರವಾದನು.


ನೀನು ಮುರಿದುಬಿದ್ದಿರುವ ದಂಟನ್ನು ಊರುಗೋಲೆಂದು ನಂಬಿ ಭರವಸೆಯಿಟ್ಟಿರುವೆ! ಈಜಿಪ್ಟ್ ಊರುಗೋಲಾಗಿದೆ. ಒಬ್ಬ ಮನುಷ್ಯನು ಈ ಊರುಗೋಲಿನ ಮೇಲೆ ಭರವಸೆಯಿಟ್ಟರೆ ಅದು ಮುರಿದು ಬೀಳುತ್ತದೆ ಮತ್ತು ಅವನ ಕೈಯನ್ನೇ ಚುಚ್ಚಿ ಅವನಿಗೆ ನೋವನ್ನು ಉಂಟುಮಾಡುತ್ತದೆ! ಈಜಿಪ್ಟಿನ ರಾಜನು ತನ್ನನ್ನು ನಂಬಿದ ಜನರೆಲ್ಲರಿಗೂ ಇದೇ ರೀತಿಯಲ್ಲಿದ್ದಾನೆ.


“ಯೆಹೋವನು ನಿಮ್ಮನ್ನೂ ನಿಮ್ಮ ಅರಸನನ್ನೂ ನೀವು ಅರಿಯದ ದೇಶಕ್ಕೆ ಅಟ್ಟಿಬಿಡುವನು. ನೀವಾಗಲಿ ನಿಮ್ಮ ಪೂರ್ವಿಕರಾಗಲಿ ಆ ದೇಶವನ್ನು ಎಂದೂ ನೋಡಲಿಲ್ಲ. ಅಲ್ಲಿ ಮರ, ಕಲ್ಲುಗಳಿಂದ ಮಾಡಿದ ಸುಳ್ಳುದೇವರನ್ನು ಆರಾಧಿಸುವಿರಿ.


ಅಶ್ಶೂರದ ರಾಜನಾದ ಶಲ್ಮನೆಸರನು ಹೋಶೇಯನ ವಿರುದ್ಧ ಯುದ್ಧಕ್ಕೆ ಬಂದನು. ಶಲ್ಮನೆಸರನು ಹೋಶೇಯನನ್ನು ಸೋಲಿಸಿದನು. ಆದ್ದರಿಂದ ಹೋಶೇಯನು ಶಲ್ಮನೆಸರನಿಗೆ ಸೇವಕನಾಗಿ ಕಪ್ಪಕಾಣಿಕೆಯನ್ನು ಕೊಟ್ಟನು.


ನಂತರ ಅಶ್ಶೂರದ ರಾಜನು ಇಸ್ರೇಲಿನಲ್ಲೆಲ್ಲಾ ಸಂಚರಿಸಿ ಸಮಾರ್ಯಕ್ಕೆ ಬಂದನು. ಅವನು ಸಮಾರ್ಯವನ್ನು ಮೂರು ವರ್ಷ ಮುತ್ತಿಗೆ ಹಾಕಿದನು.


ಅವರು ವಾಗ್ದಾನ ಮಾಡುತ್ತಾರೆ. ಆದರೆ ಅದು ಕೇವಲ ಸುಳ್ಳು, ಅವರು ಕೊಟ್ಟ ಮಾತನ್ನು ನಡಿಸುವದಿಲ್ಲ. ಬೇರೆ ದೇಶಗಳವರೊಂದಿಗೆ ಅವರು ಒಪ್ಪಂದ ಮಾಡುತ್ತಾರೆ. ದೇವರು ಆ ಒಪ್ಪಂದವನ್ನು ಒಪ್ಪುವುದಿಲ್ಲ. ಅವರ ನ್ಯಾಯಾಧೀಶರು ಉತ್ತ ಹೊಲದಲ್ಲಿ ಬೆಳೆಯುವ ವಿಷದ ಹಣಜಿಯಂತಿದ್ದಾರೆ.


ನಿನ್ನ ಅರಸನೆಲ್ಲಿ? ನಿನ್ನ ಯಾವ ಪಟ್ಟಣದಲ್ಲಿಯಾಗಲಿ ಅವನು ನಿನ್ನನ್ನು ರಕ್ಷಿಸಲಾರ. ನಿನ್ನ ನ್ಯಾಯಾಧೀಶರುಗಳೆಲ್ಲಿ? ನೀನು, ‘ನಮಗೆ ರಾಜನನ್ನೂ ನಾಯಕರನ್ನೂ ಕೊಡು’ ಎಂದು ಕೇಳಿಕೊಂಡೆ.


ಜನಾಂಗಗಳ ಮಧ್ಯೆ ಇರುವ ತನ್ನ ಪ್ರಿಯತಮರ ಕಡೆಗೆ ಇಸ್ರೇಲು ಹೋದನು. ಆದರೆ ನಾನು ಇಸ್ರೇಲರನ್ನು ಒಟ್ಟುಸೇರಿಸುವೆನು. ಆದರೆ ಅದರ ಮೊದಲು ಆ ಬಲಿಷ್ಠ ರಾಜನ ಕೈಯಿಂದ ಅವರ ಸಂಕಟ ಅನುಭವಿಸಬೇಕು.


ಯೆಹೋವನು ಹೇಳುವುದೇನೆಂದರೆ, “ಇಸ್ರೇಲಿಗೆ ವಿರುದ್ಧವಾಗಿ ನಾನು ವಾದ ಮಾಡುತ್ತೇನೆ. ತಾನು ಮಾಡಿದ ಸಂಗತಿಗಳಿಗಾಗಿ ಯಾಕೋಬನು ಶಿಕ್ಷೆ ಅನುಭವಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು