2 ಅರಸುಗಳು 17:6 - ಪರಿಶುದ್ದ ಬೈಬಲ್6 ಹೋಶೇಯನು ಇಸ್ರೇಲಿನ ರಾಜನಾಗಿದ್ದ ಒಂಭತ್ತನೆಯ ವರ್ಷದಲ್ಲಿ ಅಶ್ಶೂರದ ರಾಜನು ಸಮಾರ್ಯವನ್ನು ಸ್ವಾಧೀನಪಡಿಸಿಕೊಂಡನು. ಅಶ್ಶೂರದ ರಾಜನು ಇಸ್ರೇಲರನ್ನು ಸೆರೆಯಾಳುಗಳನ್ನಾಗಿ ಒಯ್ದು ಹಲಹು ಪ್ರಾಂತ್ಯದಲ್ಲಿಯೂ ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ್ಯದಲ್ಲಿಯೂ ಮೇದ್ಯರ ನಗರಗಳಲ್ಲಿಯೂ ಇರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಹೋಶೇಯನ ಆಳ್ವಿಕೆಯ ಒಂಭತ್ತನೆಯ ವರ್ಷದಲ್ಲಿ, ಅಶ್ಶೂರದ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು, ಎಲ್ಲಾ ಇಸ್ರಾಯೇಲರನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ಒಯ್ದನು. ಅವರನ್ನು ಹಲಹು ಪ್ರಾಂತ್ಯದಲ್ಲಿಯೂ, ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ್ಯದಲ್ಲಿಯೂ, ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅದು ಹೋಶೇಯನ ಆಳ್ವಿಕೆಯ ಒಂಬತ್ತನೆಯ ವರ್ಷದಲ್ಲಿ ಅವನ ಸ್ವಾಧೀನವಾಯಿತು. ಅವನು ಎಲ್ಲಾ ಇಸ್ರಯೇಲರನ್ನು ಅಸ್ಸೀರಿಯ ದೇಶಕ್ಕೆ ಒಯ್ದು ಹಲಹು ಎಂಬ ಪ್ರಾಂತ್ಯದಲ್ಲಿ, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತ್ಯದಲ್ಲಿ ಹಾಗು ಮೇದ್ಯರ ಪಟ್ಟಣಗಳಲ್ಲಿ ಇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅದು ಹೋಶೇಯನ ಆಳಿಕೆಯ ಒಂಭತ್ತನೆಯ ವರುಷದಲ್ಲಿ ಅವನ ಸ್ವಾಧೀನವಾಗಲು ಅವನು ಎಲ್ಲಾ ಇಸ್ರಾಯೇಲ್ಯರನ್ನು ಅಶ್ಶೂರ್‍ದೇಶಕ್ಕೆ ಒಯ್ದು ಹಲಹು ಪ್ರಾಂತದಲ್ಲಿಯೂ ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತದಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಹೋಶೇಯನ ಒಂಬತ್ತನೆಯ ವರ್ಷದಲ್ಲಿ ಅಸ್ಸೀರಿಯದ ಅರಸನು ಸಮಾರ್ಯವನ್ನು ವಶಪಡಿಸಿಕೊಂಡನು. ಅವನು ಇಸ್ರಾಯೇಲನ್ನು ಅಸ್ಸೀರಿಯ ದೇಶಕ್ಕೆ ಸೆರೆಯಾಗಿ ಒಯ್ದು ಹಲಹ ಪ್ರಾಂತದಲ್ಲಿಯೂ, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತದಲ್ಲಿಯೂ ಮತ್ತು ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು. ಅಧ್ಯಾಯವನ್ನು ನೋಡಿ |
ಇಸ್ರೇಲರ ದೇವರು ಅಶ್ಯೂರದ ರಾಜನಾದ ಪೂಲ್ (ತಿಗ್ಲತ್ಪಿಲೆಸರ್) ಅವರ ಮೇಲೆ ಯುದ್ಧಕ್ಕೆ ಹೋಗುವಂತೆ ಮಾಡಿದನು. ಅವರು ಬಂದು ರೂಬೇನ್, ಗಾದ್ ಮತ್ತು ಮನಸ್ಸೆಯ ಅರ್ಧ ಕುಲದವರೊಂದಿಗೆ ಯುದ್ಧ ಮಾಡಿದರು. ಯುದ್ಧದಲ್ಲಿ ಅವರನ್ನು ಸೋಲಿಸಿ, ಸೆರೆಹಿಡಿದು ಹಲಹ, ಹಾಬೋರ್, ಹಾರ ಮತ್ತು ಗೋಜಾನ್ ನದಿಯ ಸಮೀಪದ ಸ್ಥಳಕ್ಕೆ ಕೈದಿಗಳನ್ನಾಗಿ ಕೊಂಡೊಯ್ದರು. ಅಂದಿನಿಂದ ಇಂದಿನ ತನಕವೂ ಇಸ್ರೇಲರು ಆ ಸ್ಥಳಗಳಲ್ಲಿ ವಾಸಮಾಡುತ್ತಿರುವರು.
ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನೆಂಬವನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ಪೆಕಹನು ಇಸ್ರೇಲಿನ ರಾಜನಾಗಿದ್ದ ಸಂದರ್ಭದಲ್ಲಿ ಇದು ಸಂಭವಿಸಿತು. ತಿಗ್ಲತ್ಪಿಲೆಸರನು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಪ್ರಾಂತ್ಯಗಳನ್ನೆಲ್ಲ ಸ್ವಾಧೀನಪಡಿಸಿಕೊಂಡನು. ತಿಗ್ಲತ್ಪಿಲೆಸರನು ಈ ಸ್ಥಳಗಳಲ್ಲಿದ್ದ ಜನರನ್ನು ಸೆರೆಯಾಳುಗಳನ್ನಾಗಿಸಿ ಅಶ್ಶೂರಿಗೆ ಕೊಂಡೊಯ್ದನು.
ನಮ್ಮ ದೇವರೇ, ನೀನು ಮಹಾ ದೇವರು, ಭಯಂಕರನೂ ಬಲಿಷ್ಠ ಸೈನಿಕನೂ ಆಗಿರುವ ದೇವರು! ನೀನು ದಯಾಪರನೂ ನಂಬಿಗಸ್ತನೂ ಆಗಿರುವಿ. ನಿನ್ನ ಒಡಂಬಡಿಕೆಯನ್ನು ನೆರವೇರಿಸುವ ದೇವರು. ನಾವು ತುಂಬಾ ಸಂಕಟಗಳನ್ನು ಅನುಭವಿಸಿದೆವು. ನಮ್ಮ ಸಂಕಟಗಳು ನಿನಗೆ ವಿಶೇಷವಾದವುಗಳಾಗಿವೆ. ನಮ್ಮ ಜನರಿಗೆಲ್ಲಾ ತೊಂದರೆಗಳುಂಟಾದವು. ನಮ್ಮ ನಾಯಕರಿಗೂ ರಾಜನಿಗೂ ನಮ್ಮ ಯಾಜಕರಿಗೂ ಪ್ರವಾದಿಗಳಿಗೂ ಅಶ್ಶೂರ್ಯದ ರಾಜನ ಸಮಯದಿಂದ ಈ ದಿವಸದ ತನಕ ಭಯಂಕರ ಕಷ್ಟಗಳು ಬಂದೊದಗಿದವು.