2 ಅರಸುಗಳು 18:10 - ಪರಿಶುದ್ದ ಬೈಬಲ್10 ಮೂರು ವರ್ಷಗಳ ಕೊನೆಯಲ್ಲಿ ಶಲ್ಮನೆಸರನು ಸಮಾರ್ಯವನ್ನು ವಶಪಡಿಸಿಕೊಂಡನು. ಹಿಜ್ಕೀಯನು ಯೆಹೂದದ ರಾಜನಾಗಿದ್ದ ಆರನೆಯ ವರ್ಷದಲ್ಲಿ ಅವನು ಸಮಾರ್ಯವನ್ನು ವಶಪಡಿಸಿಕೊಂಡನು. (ಹೋಶೇಯನು ಇಸ್ರೇಲಿನ ರಾಜನಾಗಿ ಆಳುತ್ತಿದ್ದ ಒಂಭತ್ತನೆಯ ವರ್ಷದಲ್ಲಿ ಇದು ಸಂಭವಿಸಿತು.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಮೂರು ವರ್ಷಗಳ ತರುವಾಯ, ಇಸ್ರಾಯೇಲರ ಅರಸನಾದ ಹೋಶೇಯನ ಆಳ್ವಿಕೆಯ ಒಂಭತ್ತನೆಯ ವರ್ಷದಲ್ಲಿ ಅಂದರೆ ಹಿಜ್ಕೀಯನ ಆಳ್ವಿಕೆಯ ಆರನೆಯ ವರ್ಷದಲ್ಲಿ ಅವನು ಸಮಾರ್ಯವನ್ನು ಸ್ವಾಧೀನಮಾಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಮೂರು ವರ್ಷಗಳವರೆಗೂ ಅದಕ್ಕೆ ಮುತ್ತಿಗೆ ಹಾಕಿದ್ದನು. ಅದು ಅವನಿಗೆ ಇಸ್ರಯೇಲರ ಅರಸನಾದ ಹೋಶೇಯನ ಆಳ್ವಿಕೆಯ ಆರನೆಯ ವರ್ಷದಲ್ಲಿ ಸ್ವಾಧೀನವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಮೂರು ವರುಷಗಳವರೆಗೂ ಅದಕ್ಕೆ ಮುತ್ತಿಗೆಹಾಕಿ ಅದು ತನಗೆ ಇಸ್ರಾಯೇಲ್ಯರ ಅರಸನಾದ ಹೋಶೇಯನ ಆಳಿಕೆಯ ಒಂಭತ್ತನೆಯ ವರುಷದಲ್ಲಿ ಅಂದರೆ ಹಿಜ್ಕೀಯನ ಆಳಿಕೆಯ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಮೂರು ವರ್ಷದ ತರುವಾಯ ಸಮಾರ್ಯವನ್ನು ಅಸ್ಸೀರಿಯದವರು ಸ್ವಾಧೀನಮಾಡಿಕೊಂಡರು. ಇಸ್ರಾಯೇಲಿನ ಅರಸನಾದ ಹೋಶೇಯನ ಒಂಬತ್ತನೆಯ ವರ್ಷವಾದ, ಹಿಜ್ಕೀಯನ ಆರನೆಯ ವರ್ಷದಲ್ಲಿ ಸಮಾರ್ಯವು ಸ್ವಾಧೀನವಾಯಿತು. ಅಧ್ಯಾಯವನ್ನು ನೋಡಿ |
ಯಾಕೆಂದರೆ ನೀವು ಒಮ್ರಿಯ ಆಜ್ಞೆಯನ್ನು ಪರಿಪಾಲಿಸಿದಿರಿ. ಅಹಾಬನ ಮನೆಯವರು ಮಾಡುತ್ತಿದ್ದ ದುಷ್ಕೃತ್ಯಗಳನ್ನು ನೀವು ಮಾಡುತ್ತೀರಿ. ನೀವು ಅವರ ಬೋಧನೆಯನ್ನು ಅನುಸರಿಸುತ್ತೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ಕೆಡವಲ್ಪಟ್ಟ ನಿಮ್ಮ ನಗರವನ್ನು ನೋಡಿದ ಜನರು ಆಶ್ಚರ್ಯದಿಂದ ಸಿಳ್ಳುಹಾಕುವರು. ಆಗ ಬೇರೆ ಜನಾಂಗದವರು ನಿಮ್ಮ ಮೇಲೆ ಹೊರಿಸಿದ ಅವಮಾನವನ್ನು ನೀವು ಸಹಿಸಿಕೊಳ್ಳುವಿರಿ.”