11 ಅಶ್ಶೂರದ ರಾಜನು ಇಸ್ರೇಲರನ್ನು, ಸೆರೆಯಾಳುಗಳನ್ನಾಗಿ ಅಶ್ಶೂರಿಗೆ ಒಯ್ದನು. ಅವನು ಅವರನ್ನು ಹಲಹು ಎಂಬ ಪ್ರಾಂತದಲ್ಲಿಯೂ ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತದಲ್ಲಿಯೂ ಮೇದ್ಯರ ನಗರಗಳಲ್ಲಿಯೂ ವಾಸಿಸುವಂತೆ ಮಾಡಿದನು.
ಇಸ್ರೇಲರ ದೇವರು ಅಶ್ಯೂರದ ರಾಜನಾದ ಪೂಲ್ (ತಿಗ್ಲತ್ಪಿಲೆಸರ್) ಅವರ ಮೇಲೆ ಯುದ್ಧಕ್ಕೆ ಹೋಗುವಂತೆ ಮಾಡಿದನು. ಅವರು ಬಂದು ರೂಬೇನ್, ಗಾದ್ ಮತ್ತು ಮನಸ್ಸೆಯ ಅರ್ಧ ಕುಲದವರೊಂದಿಗೆ ಯುದ್ಧ ಮಾಡಿದರು. ಯುದ್ಧದಲ್ಲಿ ಅವರನ್ನು ಸೋಲಿಸಿ, ಸೆರೆಹಿಡಿದು ಹಲಹ, ಹಾಬೋರ್, ಹಾರ ಮತ್ತು ಗೋಜಾನ್ ನದಿಯ ಸಮೀಪದ ಸ್ಥಳಕ್ಕೆ ಕೈದಿಗಳನ್ನಾಗಿ ಕೊಂಡೊಯ್ದರು. ಅಂದಿನಿಂದ ಇಂದಿನ ತನಕವೂ ಇಸ್ರೇಲರು ಆ ಸ್ಥಳಗಳಲ್ಲಿ ವಾಸಮಾಡುತ್ತಿರುವರು.
ಅವರ ದೇವರುಗಳು ಅವರನ್ನು ರಕ್ಷಿಸಿದರೋ? ಇಲ್ಲ! ನನ್ನ ಪೂರ್ವಿಕರು ಅವರನ್ನು ಸಂಪೂರ್ಣವಾಗಿ ನಾಶಮಾಡಿದರು. ಅವರು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣಗಳ ಜನರನ್ನೂ ತೆಲಸ್ಸಾರ್‌ನಲ್ಲಿ ವಾಸವಾಗಿದ್ದ ಎದೆನಿನ ಜನರನ್ನೂ ನಾಶಮಾಡಿದರು.
ನೀವು ನಿಮ್ಮೊಂದಿಗೆ ಮೊಲೋಖನ (ಸುಳ್ಳುದೇವರ) ಗುಡಾರವನ್ನು ಮತ್ತು ನಿಮ್ಮ ರೇಫಾ ದೇವತೆಯ ನಕ್ಷತ್ರರೂಪವನ್ನು ಹೊತ್ತುಕೊಂಡು ಹೋದಿರಿ. ಆರಾಧಿಸುವುದಕ್ಕಾಗಿ ನೀವು ಮಾಡಿಕೊಂಡ ವಿಗ್ರಹಗಳೇ ಇವು. ಆದ್ದರಿಂದ ನಾನು ನಿಮ್ಮನ್ನು ಬಾಬಿಲೋನಿನ ಆಚೆಗೆ ಕಳುಹಿಸಿಬಿಡುವೆನು.’
ಯೆಹೋವನ ಬಳಿಗೆ ಹೋಗು. ಆಗ ಜೀವಿಸುವೆ. ಯೆಹೋವನ ಬಳಿಗೆ ನೀನು ಹೋಗದಿದ್ದಲ್ಲಿ ಯೋಸೇಫನ ಮನೆತನಕ್ಕೆ ಬೆಂಕಿಯು ಹಿಡಿಯುವುದು. ಆ ಬೆಂಕಿಯು ಯೋಸೇಫನ ಮನೆಯನ್ನು ದಹಿಸುವದು. ಬೇತೇಲಿನಲ್ಲಿ ಅದನ್ನು ಯಾರೂ ನಂದಿಸಲಾರರು.
ಯಾಕೆಂದರೆ ಆ ಮಗನು ಅಪ್ಪಾ, ಅಮ್ಮಾ ಎಂದು ಕರೆಯಲು ತೊಡಗುವ ಮೊದಲೇ ದೇವರು ದಮಸ್ಕ ಮತ್ತು ಸಮಾರ್ಯದ ಎಲ್ಲಾ ಐಶ್ವರ್ಯವನ್ನು ತೆಗೆದು ಅದನ್ನು ಅಶ್ಶೂರದ ಅರಸನಿಗೆ ಕೊಡುವನು” ಎಂದು ಹೇಳಿದನು.
ಇಸ್ರೇಲಿನ ಜನರು ತಮ್ಮ ದೇಶವನ್ನು ತೊರೆದು ಅಲೆದಾಡದೆ ತಮ್ಮ ಪೂರ್ವಿಕರಿಗೆ ಕೊಡಲ್ಪಟ್ಟ ದೇಶದಲ್ಲಿಯೇ ನೆಲೆಸುವಂತೆ ನಾನು ಮಾಡುತ್ತೇನೆ. ನಾನು ನನ್ನ ಸೇವಕನಾದ ಮೋಶೆಯ ಮೂಲಕ ಅವರಿಗೆ ಬೋಧಿಸಿದ ಆಜ್ಞೆಗಳಿಗೆಲ್ಲಾ ಅವರು ವಿಧೇಯರಾಗಿದ್ದರೆ, ನಾನು ಅವರನ್ನು ಅವರ ದೇಶದಲ್ಲಿ ನೆಲೆಗೊಳಿಸುವೆನು.”
ಯೆಹೋವನು, “ನಾನು ಇಸ್ರೇಲರನ್ನು ತೆಗೆದುಹಾಕಿದಂತೆ ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು. ನಾನು ಆರಿಸಿಕೊಂಡ ಜೆರುಸಲೇಮ್ ಪಟ್ಟಣವನ್ನೂ ನನ್ನ ನಾಮ ಮಹತ್ತಿಗಾಗಿ ಸ್ವೀಕರಿಸಿಕೊಂಡ ದೇವಾಲಯವನ್ನೂ ತಿರಸ್ಕರಿಸುವೆನು” ಎಂದು ಹೇಳಿದನು.
ಅಶ್ಶೂರದ ರಾಜನಾದ ಸನ್ಹೇರೀಬನು ತನ್ನ ಸೇನಾದಂಡನಾಯಕನನ್ನು ಒಂದು ದೊಡ್ಡ ಸೈನ್ಯದೊಡನೆ ಜೆರುಸಲೇಮಿನಲ್ಲಿದ್ದ ಅರಸನಾದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಸೇನಾದಂಡನಾಯಕ ತನ್ನ ಸೈನ್ಯದೊಡನೆ ಲಾಕೀಷಿನಿಂದ ಜೆರುಸಲೇಮಿಗೆ ಹೊರಟನು. ಅವರು ಮೇಲಿನ ಕೊಳದ ಬಳಿಯಲ್ಲಿರುವ ನೀರುಕಾಲುವೆಯ ಬಳಿ ನಿಂತರು. ಮೇಲಿನ ಕೊಳವು ಅಗಸರ ಬಯಲಿಗೆ ಹೋಗುವ ಮಾರ್ಗದಲ್ಲಿದೆ.
ಯೆಹೋವನು ಹೇಳುವುದೇನೆಂದರೆ, “ಅನೇಕ ಅಪರಾಧಗಳನ್ನು ಮಾಡಿದ ಇಸ್ರೇಲನ್ನು ನಾನು ಖಂಡಿತವಾಗಿಯೂ ದಂಡಿಸುವೆನು. ಯಾಕೆಂದರೆ ಅವರು ಸ್ವಲ್ಪ ಬೆಳ್ಳಿಗಾಗಿ ಒಳ್ಳೆಯವರನ್ನೂ ಮತ್ತು ನಿರಪರಾಧಿಗಳನ್ನೂ ಮಾರಿದರು; ಒಂದು ಜೊತೆ ಕೆರಗಳ ಕ್ರಯಕ್ಕೆ ಬಡ ಜನರನ್ನು ಮಾರಿದರು.
ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನೆಂಬವನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ಪೆಕಹನು ಇಸ್ರೇಲಿನ ರಾಜನಾಗಿದ್ದ ಸಂದರ್ಭದಲ್ಲಿ ಇದು ಸಂಭವಿಸಿತು. ತಿಗ್ಲತ್ಪಿಲೆಸರನು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಪ್ರಾಂತ್ಯಗಳನ್ನೆಲ್ಲ ಸ್ವಾಧೀನಪಡಿಸಿಕೊಂಡನು. ತಿಗ್ಲತ್ಪಿಲೆಸರನು ಈ ಸ್ಥಳಗಳಲ್ಲಿದ್ದ ಜನರನ್ನು ಸೆರೆಯಾಳುಗಳನ್ನಾಗಿಸಿ ಅಶ್ಶೂರಿಗೆ ಕೊಂಡೊಯ್ದನು.
“ನೀನು ನಮ್ಮ ಪೂರ್ವಿಕರ ವಿಷಯದಲ್ಲಿ ತಾಳ್ಮೆಯಿಂದಿದ್ದೆ. ನಿನ್ನ ವಿಷಯದಲ್ಲಿ ತಪ್ಪಾಗಿ ನಡೆದುಕೊಳ್ಳಲು ಅನೇಕ ವರ್ಷಗಳವರೆಗೆ ಅವರನ್ನು ಬಿಟ್ಟುಬಿಟ್ಟೆ. ನೀನು ಅವರನ್ನು ನಿನ್ನ ಆತ್ಮನಿಂದ ಎಚ್ಚರಿಸಿದೆ; ಅವರನ್ನು ಎಚ್ಚರಿಸಲು ನಿನ್ನ ಪ್ರವಾದಿಗಳನ್ನು ಕಳುಹಿಸಿದೆ. ಆದರೆ ನಮ್ಮ ಪೂರ್ವಿಕರು ಕಿವಿಗೊಡಲಿಲ್ಲ. ಆದ್ದರಿಂದ ಪರರಾಜ್ಯದ ಜನರಿಗೆ ಅವರನ್ನು ಒಪ್ಪಿಸಿದೆ.