2 ಅರಸುಗಳು 18:15 - ಪರಿಶುದ್ದ ಬೈಬಲ್15 ಹಿಜ್ಕೀಯನು ದೇವಾಲಯದಲ್ಲಿದ್ದ ಮತ್ತು ರಾಜನ ಭಂಡಾರದಲ್ಲಿದ್ದ ಬೆಳ್ಳಿಯನ್ನೆಲ್ಲ ನೀಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆಗ ಹಿಜ್ಕೀಯನು ಯೆಹೋವನ ಆಲಯದಲ್ಲಿಯೂ, ಅರಸನ ಅರಮನೆಯ ಭಂಡಾರದಲ್ಲಿಯೂ ಸಿಕ್ಕಿದ ಬೆಳ್ಳಿಯನ್ನು ಅವನಿಗೆ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆಗ ಹಿಜ್ಕೀಯನು ಸರ್ವೇಶ್ವರನ ಆಲಯದಲ್ಲಿಯೂ ಅರಮನೆಯ ಭಂಡಾರದಲ್ಲಿಯೂ ಸಿಕ್ಕಿದ ಬೆಳ್ಳಿಯನ್ನೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆಗ ಹಿಜ್ಕೀಯನು ಯೆಹೋವನ ಆಲಯದಲ್ಲಿಯೂ ಅರಮನೆಯ ಭಂಡಾರದಲ್ಲಿಯೂ ಸಿಕ್ಕಿದ ಬೆಳ್ಳಿಯನ್ನೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದ್ದರಿಂದ ಹಿಜ್ಕೀಯನು ಯೆಹೋವ ದೇವರ ಆಲಯದಲ್ಲಿಯೂ, ಅರಸನ ಮನೆಯ ಬೊಕ್ಕಸಗಳಲ್ಲಿಯೂ, ಸಿಕ್ಕಿದ ಸಮಸ್ತ ಬೆಳ್ಳಿಯನ್ನೂ ಕೊಟ್ಟನು. ಅಧ್ಯಾಯವನ್ನು ನೋಡಿ |
ಯೆಹೋಷಾಫಾಟ್, ಯೆಹೋರಾಮ್ ಮತ್ತು ಅಹಜ್ಯರು ಯೆಹೂದದ ರಾಜರಾಗಿದ್ದರು. ಅವರೆಲ್ಲ ಯೆಹೋವಾಷನ ಪೂರ್ವಿಕರು. ಅವರು ಅನೇಕ ವಸ್ತುಗಳನ್ನು ಯೆಹೋವನಿಗೆ ಕೊಟ್ಟಿದ್ದರು. ಅವುಗಳನ್ನೆಲ್ಲ ಆಲಯದಲ್ಲಿ ಇಟ್ಟಿದ್ದರು. ಯೆಹೋವಾಷನೂ ಯೆಹೋವನಿಗೆ ಅನೇಕ ವಸ್ತುಗಳನ್ನು ಕೊಟ್ಟಿದ್ದನು. ಯೆಹೋವಾಷನು ಅವುಗಳ ಜೊತೆಗೆ, ಆಲಯದಲ್ಲಿದ್ದ ಮತ್ತು ತನ್ನ ಮನೆಯಲ್ಲಿದ್ದ ಬಂಗಾರವನ್ನೆಲ್ಲ ತೆಗೆದುಕೊಂಡನು. ನಂತರ ಯೆಹೋವಾಷನು ಆ ಬೆಲೆಬಾಳುವ ವಸ್ತುಗಳನ್ನೆಲ್ಲ ಅರಾಮ್ಯರ ರಾಜನಾದ ಹಜಾಯೇಲನಿಗೆ ಕಳುಹಿಸಿದನು. ಆದ್ದರಿಂದ ಹಜಾಯೇಲನು ಜೆರುಸಲೇಮಿನ ವಿರುದ್ಧ ಯುದ್ಧಮಾಡದೆ ಹೊರಟುಹೋದನು.
ಅವುಗಳನ್ನು ನೋಡಿ ಹಿಜ್ಕೀಯನಿಗೆ ಬಹು ಸಂತೋಷವಾಯಿತು. ಅವನು ಬಾಬಿಲೋನಿನ ದೂತರಿಗೆ ತನ್ನ ಅರಮನೆಯ ಉಗ್ರಾಣದಲ್ಲಿದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನೂ ತಾನು ಕೊಡಿಸಿಟ್ಟಿದ್ದ ಬೆಳ್ಳಿಬಂಗಾರಗಳನ್ನೂ ಸಾಂಬಾರ ಪದಾರ್ಥಗಳನ್ನೂ ಮತ್ತು ಸುಗಂಧದ್ರವ್ಯಗಳನ್ನೂ ತೋರಿಸಿದನು. ಅಲ್ಲದೆ ಯುದ್ಧದಲ್ಲಿ ಉಪಯೋಗಿಸುವ ಖಡ್ಗಗಳನ್ನು, ಗುರಾಣಿಗಳನ್ನು ತೋರಿಸಿದನು; ಅಲ್ಲದೆ ತನ್ನ ರಾಜ್ಯದಲ್ಲಿರುವ ಪ್ರತಿಯೊಂದು ವಿಷಯಗಳನ್ನು ಅವರಿಗೆ ಪ್ರದರ್ಶಿಸಿದನು.