Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 18:16 - ಪರಿಶುದ್ದ ಬೈಬಲ್‌

16 ಈ ಸಮಯದಲ್ಲಿ, ಹಿಜ್ಕೀಯನು ಯೆಹೋವನ ಆಲಯದ ಬಾಗಿಲುಗಳಿಗೆ ಮತ್ತು ಕದಗಳಿಗೆ ಹೊದಿಸಿದ್ದ ಬಂಗಾರವನ್ನು ಕತ್ತರಿಸಿಹಾಕಿದನು. ರಾಜನಾದ ಹಿಜ್ಕೀಯನು ಈ ಬಾಗಿಲುಗಳ ಮತ್ತು ಕದಗಳ ಮೇಲೆ ಬಂಗಾರವನ್ನು ಹೊದಿಸಿದ್ದನು. ಹಿಜ್ಕೀಯನು ಈ ಬಂಗಾರವನ್ನು ಅಶ್ಶೂರದ ರಾಜನಿಗೆ ನೀಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅಲ್ಲದೆ ಹಿಜ್ಕೀಯನು ಯೆಹೋವನ ಆಲಯದ ಕದಗಳಿಗೂ, ಕಂಬಗಳಿಗೂ ಹೊದಿಸಿದ್ದ ಬಂಗಾರದ ತಗಡನ್ನೂ ತೆಗೆದು ಅಶ್ಶೂರದ ಅರಸನಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ತಾನು ಸರ್ವೇಶ್ವರನ ಆಲಯದ ಕದಗಳಿಗೂ ಕಂಬಗಳಿಗೂ ಹೊದಿಸಿದ್ದ ಬಂಗಾರದ ತಗಡನ್ನೂ ತೆಗೆದುಕೊಂಡು ಅಸ್ಸೀರಿಯದ ಅರಸನಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ತಾನು ಯೆಹೋವನ ಆಲಯದ ಕದಗಳಿಗೂ ಕಂಬಗಳಿಗೂ ಹೊದಿಸಿದ್ದ ಬಂಗಾರದ ತಗಡನ್ನೂ ತೆಗೆದುಕೊಂಡು ಅಶ್ಶೂರದ ಅರಸನಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಈ ಸಮಯದಲ್ಲಿ ಯೆಹೂದದ ಅರಸನಾದ ಹಿಜ್ಕೀಯನು, ಯೆಹೋವ ದೇವರ ಮಂದಿರದ ಕದಗಳ ಮೇಲೆಯೂ, ಸ್ತಂಭಗಳ ಮೇಲೆಯೂ ತಾನು ಹೊದಿಸಿದ್ದ ಬಂಗಾರವನ್ನೂ ಕತ್ತರಿಸಿ, ಅಸ್ಸೀರಿಯದ ಅರಸನಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 18:16
7 ತಿಳಿವುಗಳ ಹೋಲಿಕೆ  

ಹಿಜ್ಕೀಯನು ದೇವಾಲಯದ ಬಾಗಿಲುಗಳನ್ನು ದುರಸ್ತಿಮಾಡಿ ಭದ್ರಪಡಿಸಿದನು; ತನ್ನ ಆಳ್ವಿಕೆಯ ಮೊದಲನೇ ವರ್ಷದ ಮೊದಲಿನ ತಿಂಗಳಿನಲ್ಲಿಯೇ ದೇವಾಲಯವನ್ನು ಮತ್ತೆ ತೆರೆಯಿಸಿದನು.


ಯೆಹೋಷಾಫಾಟ್, ಯೆಹೋರಾಮ್ ಮತ್ತು ಅಹಜ್ಯರು ಯೆಹೂದದ ರಾಜರಾಗಿದ್ದರು. ಅವರೆಲ್ಲ ಯೆಹೋವಾಷನ ಪೂರ್ವಿಕರು. ಅವರು ಅನೇಕ ವಸ್ತುಗಳನ್ನು ಯೆಹೋವನಿಗೆ ಕೊಟ್ಟಿದ್ದರು. ಅವುಗಳನ್ನೆಲ್ಲ ಆಲಯದಲ್ಲಿ ಇಟ್ಟಿದ್ದರು. ಯೆಹೋವಾಷನೂ ಯೆಹೋವನಿಗೆ ಅನೇಕ ವಸ್ತುಗಳನ್ನು ಕೊಟ್ಟಿದ್ದನು. ಯೆಹೋವಾಷನು ಅವುಗಳ ಜೊತೆಗೆ, ಆಲಯದಲ್ಲಿದ್ದ ಮತ್ತು ತನ್ನ ಮನೆಯಲ್ಲಿದ್ದ ಬಂಗಾರವನ್ನೆಲ್ಲ ತೆಗೆದುಕೊಂಡನು. ನಂತರ ಯೆಹೋವಾಷನು ಆ ಬೆಲೆಬಾಳುವ ವಸ್ತುಗಳನ್ನೆಲ್ಲ ಅರಾಮ್ಯರ ರಾಜನಾದ ಹಜಾಯೇಲನಿಗೆ ಕಳುಹಿಸಿದನು. ಆದ್ದರಿಂದ ಹಜಾಯೇಲನು ಜೆರುಸಲೇಮಿನ ವಿರುದ್ಧ ಯುದ್ಧಮಾಡದೆ ಹೊರಟುಹೋದನು.


ಹಿಜ್ಕೀಯನು ದೇವಾಲಯದಲ್ಲಿದ್ದ ಮತ್ತು ರಾಜನ ಭಂಡಾರದಲ್ಲಿದ್ದ ಬೆಳ್ಳಿಯನ್ನೆಲ್ಲ ನೀಡಿದನು.


ಅಶ್ಶೂರದ ರಾಜ ಜೆರುಸಲೇಮಿನಲ್ಲಿದ್ದ ರಾಜನಾದ ಹಿಜ್ಕೀಯನ ಬಳಿಗೆ ತನ್ನ ಮೂವರು ಮಹಾಸೇನಾಧಿಪತಿಗಳಾದ ತರ್ತಾನ್, ರಬ್ಸಾರೀಸ್, ರಬ್ಷಾಕೆ ಎಂಬವರನ್ನು ಮಹಾಸೈನ್ಯದೊಂದಿಗೆ ಕಳುಹಿಸಿದನು. ಅವರು ಲಾಕೀಷಿನಿಂದ ಜೆರುಸಲೇಮಿಗೆ ಹೋದರು. ಅವರು ಮೇಲಿನ ಕೆರೆಯ ನೀರಿನ ಕೊಳವೆಯ ಬಳಿ ನಿಂತರು. (ಮೇಲಿನ ಕೆರೆಯು ರಸ್ತೆಯ ಮೇಲೆ ದೋಭಿಘಾಟ್ ಬಳಿಯಿತ್ತು.)


ಅವುಗಳನ್ನು ನೋಡಿ ಹಿಜ್ಕೀಯನಿಗೆ ಬಹು ಸಂತೋಷವಾಯಿತು. ಅವನು ಬಾಬಿಲೋನಿನ ದೂತರಿಗೆ ತನ್ನ ಅರಮನೆಯ ಉಗ್ರಾಣದಲ್ಲಿದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನೂ ತಾನು ಕೊಡಿಸಿಟ್ಟಿದ್ದ ಬೆಳ್ಳಿಬಂಗಾರಗಳನ್ನೂ ಸಾಂಬಾರ ಪದಾರ್ಥಗಳನ್ನೂ ಮತ್ತು ಸುಗಂಧದ್ರವ್ಯಗಳನ್ನೂ ತೋರಿಸಿದನು. ಅಲ್ಲದೆ ಯುದ್ಧದಲ್ಲಿ ಉಪಯೋಗಿಸುವ ಖಡ್ಗಗಳನ್ನು, ಗುರಾಣಿಗಳನ್ನು ತೋರಿಸಿದನು; ಅಲ್ಲದೆ ತನ್ನ ರಾಜ್ಯದಲ್ಲಿರುವ ಪ್ರತಿಯೊಂದು ವಿಷಯಗಳನ್ನು ಅವರಿಗೆ ಪ್ರದರ್ಶಿಸಿದನು.


“ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಯೆಹೋವಾಷನು ಮಾಡಿದ ಇತರ ಮಹಾಕಾರ್ಯಗಳ ಬಗ್ಗೆ ಬರೆಯಲಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು