Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 18:17 - ಪರಿಶುದ್ದ ಬೈಬಲ್‌

17 ಅಶ್ಶೂರದ ರಾಜ ಜೆರುಸಲೇಮಿನಲ್ಲಿದ್ದ ರಾಜನಾದ ಹಿಜ್ಕೀಯನ ಬಳಿಗೆ ತನ್ನ ಮೂವರು ಮಹಾಸೇನಾಧಿಪತಿಗಳಾದ ತರ್ತಾನ್, ರಬ್ಸಾರೀಸ್, ರಬ್ಷಾಕೆ ಎಂಬವರನ್ನು ಮಹಾಸೈನ್ಯದೊಂದಿಗೆ ಕಳುಹಿಸಿದನು. ಅವರು ಲಾಕೀಷಿನಿಂದ ಜೆರುಸಲೇಮಿಗೆ ಹೋದರು. ಅವರು ಮೇಲಿನ ಕೆರೆಯ ನೀರಿನ ಕೊಳವೆಯ ಬಳಿ ನಿಂತರು. (ಮೇಲಿನ ಕೆರೆಯು ರಸ್ತೆಯ ಮೇಲೆ ದೋಭಿಘಾಟ್ ಬಳಿಯಿತ್ತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದರೆ ಅಶ್ಶೂರದ ಅರಸನು ಲಾಕೀಷಿನಿಂದ ಮಹಾಸೈನ್ಯ ಸಹಿತವಾಗಿ ತರ್ತಾನ್, ರಬ್ಸಾರೀಸ್, ರಬ್ಷಾಕೆ ಎಂಬುವವರನ್ನು ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವರು ಗಟ್ಟಾ ಹತ್ತಿ ಯೆರೂಸಲೇಮಿಗೆ ಬಂದು ಅಗಸರ ಹೊಲದ ಮೇಲೆ ಹೋಗುವ ರಾಜಮಾರ್ಗದ ಹತ್ತಿರ ಇರುವ ಕೆರೆಯ ಕಾಲುವೆಯ ಬಳಿಯಲ್ಲಿ ಪಾಳೆಯ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅಸ್ಸೀರಿಯದ ಅರಸನು ಲಾಕೀಷಿನಿಂದ ಮಹಾ ಸೈನ್ಯಸಹಿತರಾದ ತರ್ತಾನ್, ರಬ್ಸಾರೀಸ್, ರಬ್ಷಾಕೆ ಎಂಬವರನ್ನು ಜೆರುಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವರು ದಿಣ್ಣೆ ಹತ್ತಿ ಜೆರುಸಲೇಮಿಗೆ ಬಂದು, ಅಗಸರ ಹೊಲದ ಮೇಲೆ ಹಾದುಹೋಗುವ ರಾಜಮಾರ್ಗದ ಹತ್ತಿರವಿರುವ, ಕೆರೆಯ ಕಾಲುವೆಯ ಬಳಿ, ಪಾಳೆಯ ಮಾಡಿಕೊಂಡು ಅರಸನನ್ನು ಕೂಗಿ ಕರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅಶ್ಶೂರದ ಅರಸನು ಲಾಕೀಷಿನಿಂದ ಮಹಾಸೈನ್ಯ ಸಹಿತರಾದ ತರ್ತಾನ್, ರಬ್ಸಾರೀಸ್, ರಬ್ಷಾಕೆ ಎಂಬವರನ್ನು ಯೆರೂಸಲೇವಿುನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವರು ಗಟ್ಟಾ ಹತ್ತಿ ಯೆರೂಸಲೇವಿುಗೆ ಬಂದು ಮಡಿವಾಳರ ಹೊಲದ ಮೇಲೆ ಹೋಗುವ ರಾಜಮಾರ್ಗದ ಹತ್ತಿರ ಅಲ್ಲಿನ ಕೆರೆಯ ಕಾಲುವೆಯ ಬಳಿಯಲ್ಲಿ ಪಾಳೆಯಮಾಡಿಕೊಂಡು ಅರಸನನ್ನು ಕೂಗಿ ಕರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅಸ್ಸೀರಿಯದ ಅರಸನು ತನ್ನ ಅತಿ ಪ್ರಮುಖ ಅಧಿಕಾರಿಯನ್ನೂ, ಮುಖ್ಯ ನಾಯಕರನ್ನೂ, ಸೈನ್ಯಾಧಿಕಾರಿಯನ್ನೂ ಲಾಕೀಷಿನಿಂದ ದೊಡ್ಡ ಸೈನ್ಯದೊಂದಿಗೆ ರಬ್ಷಾಕೆ ಎಂಬವನನ್ನೂ ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಅವರು ಯೆರೂಸಲೇಮಿಗೆ ಬಂದು ಅಗಸರ ಹೊಲದ ಮಾರ್ಗದಲ್ಲಿ ಮೇಲಿನ ಕೆರೆಯ ಕಾಲುವೆಯ ಸಮೀಪದಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 18:17
11 ತಿಳಿವುಗಳ ಹೋಲಿಕೆ  

ಸರ್ಗೋನ್ ಅಶ್ಶೂರದ ರಾಜನಾಗಿದ್ದನು. ಇವನು ತರ್ತಾನನ್ನು ಅಷ್ಡೋದಿಗೆ ವಿರುದ್ಧವಾಗಿ ಯುದ್ಧಮಾಡಲು ಕಳುಹಿಸಿದನು. ತರ್ತಾನ್ ಎಂಬವನು ಅಷ್ಡೋದ್ ನಗರಕ್ಕೆ ಹೋಗಿ ಅದನ್ನು ವಶಪಡಿಸಿಕೊಂಡನು.


ಆಗ ಯೆಹೋವನು ಯೆಶಾಯನಿಗೆ, “ನೀನೂ ನಿನ್ನ ಮಗನಾದ ಶೆಯಾರ್ ಯಾಶೂಬನೂ ಆಹಾಜನ ಬಳಿಗೆ ಹೋಗಿ ಮಾತನಾಡಬೇಕು. ನೀರು ಮೇಲಿನ ಕೊಳಕ್ಕೆ ಸೇರುವ ಸ್ಥಳಕ್ಕೆ ಹೋಗು. ಇದು ಅಗಸನ ಹೊಲಕ್ಕೆ ಹೋಗುವ ಮಾರ್ಗದಲ್ಲಿದೆ.


“ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಹಿಜ್ಕೀಯನು ಮಾಡಿದ ಇತರ ಎಲ್ಲಾ ಮಹಾಕಾರ್ಯಗಳನ್ನೂ ಅವನು ನಗರಕ್ಕೆ ಕೆರೆಯಿಂದ ಕೊಳವೆಗಳ ಮೂಲಕ ನೀರಿನ ವ್ಯವಸ್ಥೆಮಾಡಿದ್ದನ್ನೂ ಬರೆಯಲಾಗಿದೆ.


ಅಶ್ಶೂರದ ರಾಜನಾದ ಸನ್ಹೇರೀಬನು ತನ್ನ ಸೇನಾದಂಡನಾಯಕನನ್ನು ಒಂದು ದೊಡ್ಡ ಸೈನ್ಯದೊಡನೆ ಜೆರುಸಲೇಮಿನಲ್ಲಿದ್ದ ಅರಸನಾದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಸೇನಾದಂಡನಾಯಕ ತನ್ನ ಸೈನ್ಯದೊಡನೆ ಲಾಕೀಷಿನಿಂದ ಜೆರುಸಲೇಮಿಗೆ ಹೊರಟನು. ಅವರು ಮೇಲಿನ ಕೊಳದ ಬಳಿಯಲ್ಲಿರುವ ನೀರುಕಾಲುವೆಯ ಬಳಿ ನಿಂತರು. ಮೇಲಿನ ಕೊಳವು ಅಗಸರ ಬಯಲಿಗೆ ಹೋಗುವ ಮಾರ್ಗದಲ್ಲಿದೆ.


ಅಶ್ಶೂರದ ಅರಸನಾದ ಸನ್ಹೇರೀಬನು ತನ್ನ ಸಮಸ್ತ ಸೈನ್ಯದೊಡನೆ ಲಾಕೀಷ್ ಪಟ್ಟಣದ ಸಮೀಪದಲ್ಲಿ ಪಾಳೆಯ ಮಾಡಿಕೊಂಡಿದ್ದನು. ಅಲ್ಲಿ ತನ್ನ ಸೇವಕರನ್ನು ಯೆಹೂದದ ಅರಸನಾದ ಹಿಜ್ಕೀಯನ ಬಳಿಗೂ ಮತ್ತು ಜೆರುಸಲೇಮಿನಲ್ಲಿದ್ದ ಎಲ್ಲಾ ಯೆಹೂದದ ಜನರ ಬಳಿಗೂ ಸಂದೇಶದೊಡನೆ ಕಳುಹಿಸಿದನು.


ಜನರು ಜೆರುಸಲೇಮಿನಲ್ಲಿ ಅಮಚ್ಯನ ವಿರುದ್ಧವಾಗಿ ಒಳಸಂಚು ಮಾಡಿದರು. ಅಮಚ್ಯನು ಲಾಕೀಷಿಗೆ ಓಡಿಹೋದನು. ಆದರೆ ಜನರು ಅಮಚ್ಯನ ಹಿಂದೆ ಲಾಕೀಷಿಗೆ ಆಳುಗಳನ್ನು ಕಳುಹಿಸಿದರು. ಅವರು ಲಾಕೀಷಿನಲ್ಲಿ ಅಮಚ್ಯನನ್ನು ಕೊಂದುಹಾಕಿದರು.


ಈ ಸಮಯದಲ್ಲಿ, ಹಿಜ್ಕೀಯನು ಯೆಹೋವನ ಆಲಯದ ಬಾಗಿಲುಗಳಿಗೆ ಮತ್ತು ಕದಗಳಿಗೆ ಹೊದಿಸಿದ್ದ ಬಂಗಾರವನ್ನು ಕತ್ತರಿಸಿಹಾಕಿದನು. ರಾಜನಾದ ಹಿಜ್ಕೀಯನು ಈ ಬಾಗಿಲುಗಳ ಮತ್ತು ಕದಗಳ ಮೇಲೆ ಬಂಗಾರವನ್ನು ಹೊದಿಸಿದ್ದನು. ಹಿಜ್ಕೀಯನು ಈ ಬಂಗಾರವನ್ನು ಅಶ್ಶೂರದ ರಾಜನಿಗೆ ನೀಡಿದನು.


ಯೆಶಾಯನು ಅವರಿಗೆ, “ನಿಮ್ಮ ಒಡೆಯನಾದ ಹಿಜ್ಕೀಯನಿಗೆ ಈ ಸಂದೇಶವನ್ನು ತಿಳಿಸಿ: ‘ಯೆಹೋವನು ಹೀಗೆನ್ನುತ್ತಾನೆ: ಅಶ್ಶೂರದ ರಾಜನ ಅಧಿಕಾರಿಗಳು ನನ್ನನ್ನು ಅಪಹಾಸ್ಯಮಾಡಲೆಂದು ಹೇಳಿದ ಸಂಗತಿಗಳಿಂದ ನೀವು ಹೆದರಬೇಡಿ.


ನೀನು ಯೆಹೋವನನ್ನು ನಿಂದಿಸಲು ನಿನ್ನ ಸಂದೇಶಕರನ್ನು ಬಳಸಿದೆ, ‘ನಾನು ನನ್ನ ಅನೇಕ ರಥಗಳೊಂದಿಗೆ ಉನ್ನತಗಿರಿಗಳಿಗೆ ಬಂದೆನು. ನಾನು ಲೆಬನೋನಿನ ದುರ್ಗಮ ಸ್ಥಳಗಳಿಗೆ ಹೋದೆನು. ನಾನು ಲೆಬನೋನಿನ ಎತ್ತರವಾದ ದೇವದಾರು ಮರಗಳನ್ನೂ ಲೆಬನೋನಿನ ಉತ್ತಮ ತುರಾಯಿಮರಗಳನ್ನೂ ಕಡಿದುರುಳಿಸಿದೆನು.


ಶೀಶಕನು ಯೆಹೂದ ಪ್ರಾಂತ್ಯದ ಪಟ್ಟಣಗಳನ್ನು ವಶಪಡಿಸಿಕೊಂಡು ಜೆರುಸಲೇಮಿನತ್ತ ನಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು