2 ಅರಸುಗಳು 18:19 - ಪರಿಶುದ್ದ ಬೈಬಲ್19 ಸೇನಾಧಿಪತಿಗಳಲ್ಲಿ ಒಬ್ಬನಾದ ರಬ್ಷಾಕೆಯು ಅವರಿಗೆ, “ಅಶ್ಶೂರದ ಮಹಾರಾಜನು ಹಿಜ್ಕೀಯನಿಗೆ ತಿಳಿಸುವುದೇನೆಂದರೆ: ‘ನಿನ್ನ ನಂಬಿಕೆಗೆ ಆಧಾರವು ಎಲ್ಲಿದೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ರಬ್ಷಾಕೆಯು ಅವರಿಗೆ, ನೀವು ಹೋಗಿ ಹಿಜ್ಕೀಯನಿಗೆ ಮಹಾರಾಜನಾದ ಅಶ್ಶೂರದ ಅರಸನ ಮಾತುಗಳನ್ನು ತಿಳಿಸಿರಿ. ಅವನು, “ನಿನ್ನ ಭರವಸಕ್ಕೆ ಯಾವ ಆಧಾರವುಂಟು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ರಬ್ಷಾಕೆಯು ಅವರಿಗೆ, “ನೀವು ಹೋಗಿ ಅಸ್ಸೀರಿಯದ ಮಹಾರಾಜನ ಈ ಮಾತುಗಳನ್ನು ಹಿಜ್ಕೀಯನಿಗೆ ತಿಳಿಸಿರಿ: ‘ನಿನ್ನ ಭರವಸೆಗೆ ಆಧಾರವಾದರೂ ಏನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ರಬ್ಷಾಕೆಯು ಅವರಿಗೆ - ನೀವು ಹೋಗಿ ಹಿಜ್ಕೀಯನಿಗೆ ಮಹಾರಾಜನಾದ ಅಶ್ಶೂರದ ಅರಸನ ಮಾತುಗಳನ್ನು ತಿಳಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ರಬ್ಷಾಕೆಯು ಅವರಿಗೆ, “ನೀವು ಹಿಜ್ಕೀಯನಿಗೆ ಹೀಗೆ ಹೇಳಬೇಕು: “ ‘ಮಹಾರಾಜನಾದ ಅಸ್ಸೀರಿಯದ ಅರಸನು ಹೇಳುವುದೇನೆಂದರೆ, ಈ ನಿನ್ನ ಭರವಸೆಗೆ ಆಧಾರ ಏನು? ಅಧ್ಯಾಯವನ್ನು ನೋಡಿ |
“‘ಒಂದುವೇಳೆ ನೀವು, “ನಾವು ನಮ್ಮ ದೇವರಾದ ಯೆಹೋವನ ಮೇಲೆ ಭರವಸವಿಟ್ಟಿದ್ದೇವೆ” ಎಂದು ಹೇಳಬಹುದು. ಆದರೆ ಜನರು ಯೆಹೋವನನ್ನು ಆರಾಧಿಸುತ್ತಿದ್ದ ವೇದಿಕೆಗಳನ್ನೂ ಎತ್ತರವಾದ ಸ್ಥಳಗಳನ್ನೂ ಹಿಜ್ಕೀಯನು ನಾಶಮಾಡಿದ್ದಾನೆ. ಅಲ್ಲದೆ, ಯೆಹೂದ ಮತ್ತು ಜೆರುಸಲೇಮಿನಲ್ಲಿರುವ ಜನರಿಗೆ, “ನೀವು ಜೆರುಸಲೇಮಿನಲ್ಲಿರುವ ಯಜ್ಞವೇದಿಕೆಯಲ್ಲಿಯೇ ಆರಾಧಿಸಬೇಕು” ಎಂದು ಆಜ್ಞಾಪಿಸಿರುವುದು ನನಗೆ ಗೊತ್ತಿದೆ.