2 ಅರಸುಗಳು 18:20 - ಪರಿಶುದ್ದ ಬೈಬಲ್20 “ಯುದ್ಧದಲ್ಲಿ ನನಗೆ ಸಹಾಯಮಾಡಲು ನನ್ನಲ್ಲಿ ಬೇಕಾದಷ್ಟು ವಿವೇಕವೂ ಬಲವೂ ಇದೆ” ಎಂದು ನೀನು ಹೇಳುವೆ. ಆದರೆ ನೀನು ಯಾರನ್ನು ನಂಬಿಕೊಂಡು ನನಗೆ ವಿರುದ್ಧವಾಗಿ ದಂಗೆ ಎದ್ದಿರುವೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಬರೀ ಒಂದು ಬಾಯಿ ಮಾತಿನಲ್ಲಿ ಯುದ್ಧಕ್ಕೆ ಬೇಕಾದ ವಿವೇಕವೂ, ಬಲವೂ ಉಂಟೆಂದು ಅಂದುಕೊಳ್ಳುತ್ತಿರುವೆಯೋ? ನೀನು ಯಾರ ಮೇಲೆ ಭರವಸವಿಟ್ಟು ನನಗೆ ವಿರೋಧವಾಗಿ ತಿರುಗಿ ಬಿದ್ದಿರುವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಬರಿ ಬಾಯಿಮಾತೊಂದರಿಂದ ಯುದ್ಧಕ್ಕೆ ಬೇಕಾದ ವಿವೇಕ ಹಾಗು ಶಕ್ತಿ ಉಂಟೆಂದು ಅರಿತುಕೊಂಡಿರುವೆ. ನೀನು ಯಾರನ್ನು ನಂಬಿಕೊಂಡು ನನಗೆ ವಿರೋಧವಾಗಿ ಎದ್ದಿರುವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅವನು - ನಿನ್ನ ಭರವಸಕ್ಕೆ ಯಾವ ಆಧಾರವುಂಟು? ಬರೀ ಒಂದು ಬಾಯಿಮಾತಿನ ಮೇಲೆ ಯುದ್ಧಕ್ಕೆ ಬೇಕಾದ ವಿವೇಕವೂ ಬಲವೂ ಉಂಟೆಂದು ಅಂದುಕೊಳ್ಳುತ್ತೀ; ನೀನು ಯಾರನ್ನು ನಂಬಿಕೊಂಡು ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದೀ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಯುದ್ಧಕ್ಕೆ ಬೇಕಾದ ಆಲೋಚನೆಯೂ, ಪರಾಕ್ರಮವೂ ಉಂಟೆಂದು ಹೇಳುವ ನಿನ್ನ ಮಾತು ಬರೀ ವ್ಯರ್ಥವಾದ ಮಾತುಗಳೇ, ನೀನು ಯಾರನ್ನು ನಂಬಿಕೊಂಡು ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದೀಯೆ? ಅಧ್ಯಾಯವನ್ನು ನೋಡಿ |