2 ಅರಸುಗಳು 18:21 - ಪರಿಶುದ್ದ ಬೈಬಲ್21 ನೀನು ಮುರಿದುಬಿದ್ದಿರುವ ದಂಟನ್ನು ಊರುಗೋಲೆಂದು ನಂಬಿ ಭರವಸೆಯಿಟ್ಟಿರುವೆ! ಈಜಿಪ್ಟ್ ಊರುಗೋಲಾಗಿದೆ. ಒಬ್ಬ ಮನುಷ್ಯನು ಈ ಊರುಗೋಲಿನ ಮೇಲೆ ಭರವಸೆಯಿಟ್ಟರೆ ಅದು ಮುರಿದು ಬೀಳುತ್ತದೆ ಮತ್ತು ಅವನ ಕೈಯನ್ನೇ ಚುಚ್ಚಿ ಅವನಿಗೆ ನೋವನ್ನು ಉಂಟುಮಾಡುತ್ತದೆ! ಈಜಿಪ್ಟಿನ ರಾಜನು ತನ್ನನ್ನು ನಂಬಿದ ಜನರೆಲ್ಲರಿಗೂ ಇದೇ ರೀತಿಯಲ್ಲಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಜಜ್ಜಿದ ದಂಟಿಗೆ ಸಮಾನವಾಗಿರುವ ಐಗುಪ್ತದಲ್ಲಿ ಭರವಸವಿಟ್ಟಿರುವೆಯೋ? ಒಬ್ಬನು ಅಂಥ ದಂಟಿನ ಮೇಲೆ ಕೈಯೂರಿಕೊಳ್ಳುವುದಾದರೆ ಅದು ಅವನ ಕೈಯನ್ನು ತಿವಿದು ಒಳಗೆ ಹೋಗುತ್ತದಲ್ಲವೇ; ಐಗುಪ್ತದ ಅರಸನಾದ ಫರೋಹನನಲ್ಲಿ ಭರವಸವಿಟ್ಟವರಿಗೆ ಇದೇ ಗತಿಯಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಮುರಿದ ಜೊಂಡಿಗೆ ಸಮಾನವಾದ ಈಜಿಪ್ಟಿನ ಮೇಲೆ ನಿನಗೆ ಭರವಸೆಯಿದೆಯಷ್ಟೆ. ಅಂಥ ಜೊಂಡನ್ನು ಊರಿಕೊಳ್ಳುವವನ ಕೈಯನ್ನೇ ಚುಚ್ಚಿ ತಿವಿಯುವ ಕೋಲು ಅದು. ಈಜಿಪ್ಟಿನ ರಾಜ ಫರೋಹನಲ್ಲಿ ಭರವಸೆಯಿಟ್ಟವರಿಗೆ ಆಗುವ ಗತಿ ಇದೇ.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಜಜ್ಜಿದ ದಂಟಿಗೆ ಸಮಾನವಾಗಿರುವ ಐಗುಪ್ತದಲ್ಲಿ ಭರವಸವಿಟ್ಟಿರುತ್ತೀಯಷ್ಟೆ. ಒಬ್ಬನು ಅಂಥ ದಂಟಿನ ಮೇಲೆ ಕೈಯೂರಿಕೊಳ್ಳುವದಾದರೆ ಅದು ಅವನ ಕೈಯನ್ನು ತಿವಿದು ಒಳಗೆ ಹೋಗುತ್ತದಲ್ಲವೇ! ಐಗುಪ್ತದ ಅರಸನಾದ ಫರೋಹನಲ್ಲಿ ಭರವಸವಿಟ್ಟವರಿಗೆ ಅದೇ ಗತಿಯಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಇಗೋ, ನೀನು ಜಜ್ಜಿದ ದಂಟಿಗೆ ಸಮಾನವಾಗಿರುವ ಈಜಿಪ್ಟಿನ ಮೇಲೆ ಭರವಸೆ ಇಟ್ಟಿರುವಿಯಷ್ಟೆ, ಅದರ ಮೇಲೆ ಮನುಷ್ಯನು ಊರಿಕೊಂಡರೆ ಅದು ಅವನ ಕೈಯನ್ನೇ ಚುಚ್ಚಿ ಗಾಯ ಮಾಡುವುದು! ಈಜಿಪ್ಟಿನ ಅರಸನಾದ ಫರೋಹನಲ್ಲಿ ಭರವಸೆ ಇಟ್ಟವರೆಲ್ಲರಿಗೂ ಇದೇ ಗತಿಯಾಗುವದು. ಅಧ್ಯಾಯವನ್ನು ನೋಡಿ |
ಹೋಶೇಯನು ಈಜಿಪ್ಟಿನ ರಾಜನಲ್ಲಿಗೆ ಸಂದೇಶಕರನ್ನು ಕಳುಹಿಸಿದ್ದನು. ಈಜಿಪ್ಟಿನ ರಾಜನಿಗೆ ಸೋ ಎಂಬ ಹೆಸರಿತ್ತು. ಹೋಶೇಯನು ಅಶ್ಶೂರದ ರಾಜನಿಗೆ ಪ್ರತಿವರ್ಷ ಕಪ್ಪಕಾಣಿಕಯನ್ನು ಕೊಡುತ್ತಿದ್ದನು, ಆದರೆ ಆ ವರ್ಷ ಕೊಡಲಿಲ್ಲ. ಆದರೆ ಅಶ್ಶೂರದ ರಾಜನಿಗೆ ಹೋಶೇಯನು ತನ್ನ ವಿರುದ್ಧ ಮಾಡಿರುವ ಒಳಸಂಚು ತಿಳಿದುಬಂದಿತು. ಆದ್ದರಿಂದ ಅಶ್ಶೂರದ ರಾಜನು ಹೋಶೇಯನನ್ನು ಬಂಧಿಸಿ, ಸೆರೆಯಲ್ಲಿಟ್ಟನು.
ಈ ಸಂದೇಶವು ಈಜಿಪ್ಟ್ ಜನಾಂಗದ ಬಗ್ಗೆ ಇದೆ. ಈ ಸಂದೇಶವು ಫರೋಹನೆಕೋವಿನ ಸೈನ್ಯದ ಬಗ್ಗೆ ಇದೆ. ಫರೋಹನೆಕೋವು ಈಜಿಪ್ಟಿನ ರಾಜನಾಗಿದ್ದನು. ಅವನ ಸೈನ್ಯವನ್ನು ಕರ್ಕೆಮೀಷ್ ಪಟ್ಟಣದಲ್ಲಿ ಸೋಲಿಸಲಾಯಿತು. ಕರ್ಕೆಮೀಷ್ ಪಟ್ಟಣವು ಯೂಫ್ರೇಟೀಸ್ ನದಿಯ ದಂಡೆಯ ಮೇಲಿದೆ. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಹೂದದಲ್ಲಿ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಫರೋಹನೆಕೋವಿನ ಸೈನ್ಯವನ್ನು ಕರ್ಕೆಮೀಷಿನಲ್ಲಿ ಸೋಲಿಸಿದನು. ಯೆಹೋಯಾಕೀಮನು ರಾಜನಾದ ಯೋಷೀಯನ ಮಗನಾಗಿದ್ದನು. ಈಜಿಪ್ಟಿಗೆ ಯೆಹೋವನ ಸಂದೇಶ ಹೀಗಿತ್ತು: