22 ಬಹುಶಃ ನೀನು, “ನಾವು ನಮ್ಮ ದೇವರಾದ ಯೆಹೋವನಲ್ಲಿ ಭರವಸೆಯಿಟ್ಟಿದ್ದೇವೆ” ಎಂದು ಹೇಳುವೆ. ಆದರೆ ಹಿಜ್ಕೀಯನು ಯೆಹೋವನ ಉನ್ನತಸ್ಥಳಗಳನ್ನು ಮತ್ತು ಯಜ್ಞವೇದಿಕೆಯನ್ನು ನಾಶಪಡಿಸಿ ಯೆಹೂದಕ್ಕೆ ಮತ್ತು ಜೆರುಸಲೇಮಿಗೆ, “ನೀವು ಜೆರುಸಲೇಮಿನಲ್ಲಿರುವ ಯಜ್ಞವೇದಿಕೆಯ ಸನ್ನಿಧಿಯಲ್ಲಿ ಮಾತ್ರ ಆರಾಧಿಸಬೇಕು” ಎಂದು ಹೇಳಿದನೆಂಬುದು ನನಗೆ ತಿಳಿದಿದೆ.
22 ಒಂದು ವೇಳೆ ನೀವು, ‘ನಮ್ಮ ದೇವರಾದ ಯೆಹೋವನ ಮೇಲೆ ಭರವಸವಿಟ್ಟಿದ್ದೇವೆ’ ಎಂದು ಹೇಳುವುದಾದರೆ ಹಿಜ್ಕೀಯನು, ‘ಯೆರೂಸಲೇಮಿನ ಯಜ್ಞವೇದಿಯ ಮುಂದೆಯೇ ಆರಾಧನೆಮಾಡಬೇಕು’ ಎಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ ಆ ಯೆಹೋವನ ಪೂಜಾಸ್ಥಳಗಳನ್ನೂ, ಎಲ್ಲಾ ಯಜ್ಞವೇದಿಗಳನ್ನೂ ಹಾಳುಮಾಡಿದ್ದಾನಲ್ಲಾ,
22 “ಬಹುಶಃ, ನೀವು ‘ನಮ್ಮ ದೇವರಾದ ಸರ್ವೇಶ್ವರನನ್ನೇ ನಂಬಿಕೊಂಡಿದ್ದೇವೆ,’ ಎಂದು ಹೇಳಬಹುದು. ಜೆರುಸಲೇಮಿನ ಬಲಿಪೀಠದ ಮುಂದೆಯೇ ಆರಾಧನೆಮಾಡಬೇಕು ಎಂದು ಯೆಹೂದ್ಯರಿಗೂ ಮತ್ತು ಜೆರುಸಲೇಮಿನವರಿಗೂ ಹಿಜ್ಕೀಯನು ಆಜ್ಞಾಪಿಸಿ ಆ ಸರ್ವೇಶ್ವರ ಸ್ವಾಮಿಯ ಪೂಜಾಸ್ಥಳಗಳನ್ನೂ ಬೇರೆ ಎಲ್ಲಾ ಬಲಿಪೀಠಗಳನ್ನೂ ಹಾಳುಮಾಡಿದನಲ್ಲವೆ?
22 ಬಹುಶಃ ನೀವು, “ನಮ್ಮ ದೇವರಾದ ಯೆಹೋವ ದೇವರನ್ನೇ ನಂಬಿಕೊಂಡಿದ್ದೇವೆ,” ಎಂದು ಹೇಳಬಹುದು. “ಯೆರೂಸಲೇಮಿನ ಬಲಿಪೀಠದ ಮುಂದೆಯೇ ಆರಾಧನೆ ಮಾಡಬೇಕು,” ಎಂದು ಯೆಹೂದ್ಯರಿಗೆ ಮತ್ತು ಯೆರೂಸಲೇಮಿನವರಿಗೆ ಹಿಜ್ಕೀಯನು ಆಜ್ಞಾಪಿಸಿ, ಆ ಯೆಹೋವ ದೇವರ ಪೂಜಾಸ್ಥಳಗಳನ್ನೂ, ಬೇರೆ ಎಲ್ಲಾ ಬಲಿಪೀಠಗಳನ್ನೂ ಹಾಳುಮಾಡಿದನಲ್ಲವೇ?
ಪಸ್ಕಹಬ್ಬದ ಆಚರಣೆಯು ಮುಕ್ತಾಯವಾಯಿತು. ಇಸ್ರೇಲಿನಿಂದ ಜೆರುಸಲೇಮಿಗೆ ಬಂದಿದ್ದವರು ಯೆಹೂದದ ಪಟ್ಟಣಗಳಿಗೆ ಹೋದರು. ಅಲ್ಲಿದ್ದ ಕಲ್ಲಿನ ವಿಗ್ರಹಗಳನ್ನು ಒಡೆದು ನಾಶಮಾಡಿದರು; ಅಶೇರಸ್ತಂಭಗಳನ್ನು ಮತ್ತು ಪೂಜಾಸ್ಥಳಗಳನ್ನು ಕೆಡವಿಹಾಕಿದರು. ಹೀಗೆ ಅವರು ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತ್ಯಗಳಲ್ಲೆಲ್ಲಾ ಸಂಚಾರ ಮಾಡಿದರು. ಆ ಜನರು ಎಫ್ರಾಯೀಮ್ ಮನಸ್ಸೆ ಪ್ರಾಂತ್ಯಗಳಲ್ಲಿಯೂ ಹಾಗೆಯೇ ಮಾಡಿದರು. ವಿಗ್ರಹಗಳನ್ನು ಪೂಜಿಸಲು ಮಾಡಿದ ಎಲ್ಲಾ ವಸ್ತುಗಳನ್ನು ನಾಶಮಾಡಿದರು. ಬಳಿಕ ಆ ಇಸ್ರೇಲರೆಲ್ಲಾ ತಮ್ಮತಮ್ಮ ಮನೆಗಳಿಗೆ ಹಿಂದಿರುಗಿದರು.
ಈಗಲಾದರೋ ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ನೀವು ಅಡ್ಡಬಿದ್ದು ಚಿನ್ನದ ವಿಗ್ರಹವನ್ನು ಪೂಜಿಸಬೇಕು. ನಾನು ಮಾಡಿಸಿದ ಈ ವಿಗ್ರಹವನ್ನು ಪೂಜಿಸಲು ನೀವು ಸಿದ್ಧರಾಗಿದ್ದರೆ ಸರಿ. ನೀವು ಅದನ್ನು ಪೂಜಿಸದಿದ್ದರೆ ತಕ್ಷಣ ನಿಮ್ಮನ್ನು ಉರಿಯುವ ಕೊಂಡದಲ್ಲಿ ಎಸೆಯಲಾಗುವುದು. ಆಗ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವುದು ಯಾವ ದೇವರಿಗೂ ಸಾಧ್ಯವಾಗಲಾರದು” ಎಂದು ಹೇಳಿದನು.
“‘ಒಂದುವೇಳೆ ನೀವು, “ನಾವು ನಮ್ಮ ದೇವರಾದ ಯೆಹೋವನ ಮೇಲೆ ಭರವಸವಿಟ್ಟಿದ್ದೇವೆ” ಎಂದು ಹೇಳಬಹುದು. ಆದರೆ ಜನರು ಯೆಹೋವನನ್ನು ಆರಾಧಿಸುತ್ತಿದ್ದ ವೇದಿಕೆಗಳನ್ನೂ ಎತ್ತರವಾದ ಸ್ಥಳಗಳನ್ನೂ ಹಿಜ್ಕೀಯನು ನಾಶಮಾಡಿದ್ದಾನೆ. ಅಲ್ಲದೆ, ಯೆಹೂದ ಮತ್ತು ಜೆರುಸಲೇಮಿನಲ್ಲಿರುವ ಜನರಿಗೆ, “ನೀವು ಜೆರುಸಲೇಮಿನಲ್ಲಿರುವ ಯಜ್ಞವೇದಿಕೆಯಲ್ಲಿಯೇ ಆರಾಧಿಸಬೇಕು” ಎಂದು ಆಜ್ಞಾಪಿಸಿರುವುದು ನನಗೆ ಗೊತ್ತಿದೆ.
ಹಿಜ್ಕೀಯನು ತಾನೇ ಪೂಜಾಸ್ಥಳಗಳನ್ನೂ ವೇದಿಕೆಗಳನ್ನೂ ತೆಗೆದುಹಾಕಿದ್ದಾನೆ. ಒಂದೇ ಒಂದು ಧೂಪವೇದಿಕೆಯಲ್ಲಿ ಧೂಪಹಾಕಿ ಆರಾಧಿಸಬೇಕೆಂದು ಅವನು ಯೆಹೂದ ಮತ್ತು ಜೆರುಸಲೇಮಿನ ಜನರಾದ ನಿಮಗೆ ಹೇಳುತ್ತಿದ್ದಾನೆ.
‘ಈಗ ನಮ್ಮ ಒಡೆಯನಾದ ಅಶ್ಶೂರದ ರಾಜನೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊ. ನಿನ್ನಲ್ಲಿ ಸವಾರಿಮಾಡಬಲ್ಲ ಸವಾರರು ಇದ್ದರೆ ನಿನಗೆ ಎರಡು ಸಾವಿರ ಕುದುರೆಗಳನ್ನು ಕೊಡುತ್ತೇನೆಂದು ನಾನು ಪ್ರಮಾಣ ಮಾಡುತ್ತೇನೆ.
ಯೆಶಾಯನು ಅವರಿಗೆ, “ನಿಮ್ಮ ಒಡೆಯನಾದ ಹಿಜ್ಕೀಯನಿಗೆ ಈ ಸಂದೇಶವನ್ನು ತಿಳಿಸಿ: ‘ಯೆಹೋವನು ಹೀಗೆನ್ನುತ್ತಾನೆ: ಅಶ್ಶೂರದ ರಾಜನ ಅಧಿಕಾರಿಗಳು ನನ್ನನ್ನು ಅಪಹಾಸ್ಯಮಾಡಲೆಂದು ಹೇಳಿದ ಸಂಗತಿಗಳಿಂದ ನೀವು ಹೆದರಬೇಡಿ.
ನಿಮ್ಮ ದೇವರಾದ ಯೆಹೋವನು ನಿಮ್ಮ ಕುಲದವರ ಪ್ರಾಂತ್ಯಗಳಿಂದ ಒಂದು ವಿಶೇಷ ಸ್ಥಳವನ್ನು ಆರಿಸಿಕೊಂಡು ಅದಕ್ಕೆ ತನ್ನ ಹೆಸರಿಡುವನು. ಅಲ್ಲಿ ಆತನ ಆಲಯ ಕಟ್ಟಲ್ಪಡುವುದು. ಆತನನ್ನು ಆರಾಧಿಸಲು ನೀವು ಅಲ್ಲಿಗೆ ಹೋಗಬೇಕು.
ಆಗ ನಿಮ್ಮ ಯೆಹೋವನು ತನ್ನ ಹೆಸರಿಗಾಗಿ ಒಂದು ಸ್ಥಳವನ್ನು ಆರಿಸಿಕೊಳ್ಳುವನು. ಆ ಸ್ಥಳಕ್ಕೆ ನೀವು ನಿಮ್ಮ ಸರ್ವಾಂಗಹೋಮಗಳನ್ನು ಮತ್ತು ಯಜ್ಞಾದಿಗಳನ್ನು ಸಮರ್ಪಿಸಬೇಕು; ನಿಮ್ಮ ಹರಕೆಯ ಕಾಣಿಕೆಗಳನ್ನು, ಚೊಚ್ಚಲ ಪಶುಗಳನ್ನು, ದಶಾಂಶವನ್ನು ಸಲ್ಲಿಸಬೇಕು.
ಯೆಹೋವನು ತನ್ನ ವಿಶೇಷವಾದ ಸ್ಥಳವನ್ನು ನಿಮ್ಮ ಕುಲಗಳವರ ಮಧ್ಯದಿಂದ ಆರಿಸಿಕೊಳ್ಳುವನು. ನಿಮ್ಮ ಸರ್ವಾಂಗಹೋಮಗಳನ್ನು ಮತ್ತು ನಾನು ನಿಮಗೆ ಹೇಳಿದವುಗಳೆಲ್ಲವನ್ನು ಅದೇ ಸ್ಥಳದಲ್ಲಿ ಮಾಡಿರಿ.