2 ಅರಸುಗಳು 18:25 - ಪರಿಶುದ್ದ ಬೈಬಲ್25 ‘ನಾನು ಯೆಹೋವನ ಚಿತ್ತವಿಲ್ಲದೆ ಜೆರುಸಲೇಮನ್ನು ನಾಶಗೊಳಿಸಲು ಬಂದೆನೆಂದು ನೆನಸುತ್ತೀಯೋ? “ಈ ದೇಶದ ವಿರುದ್ಧವಾಗಿ ನುಗ್ಗಿ ನಾಶಗೊಳಿಸು” ಎಂದು ಯೆಹೋವನೇ ನನಗೆ ಆಜ್ಞಾಪಿಸಿದನು”’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಈ ದೇಶವನ್ನು ಹಾಳುಮಾಡುವುದಕ್ಕೆ ಯೆಹೋವನ ಚಿತ್ತವಿಲ್ಲದೆ ಬಂದೆನೆಂದು ನೆನಸುತ್ತೀಯೋ? ‘ಈ ದೇಶಕ್ಕೆ ಬಂದು, ಇದನ್ನು ಹಾಳುಮಾಡಿಬಿಡು ಎಂದು ಯೆಹೋವನೇ ನನಗೆ ಆಜ್ಞಾಪಿಸಿದ್ದಾನೆ’” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಈ ನಾಡನ್ನು, ಹಾಳುಮಾಡುವುದಕ್ಕೆ ಸರ್ವೇಶ್ವರಸ್ವಾಮಿಯ ಒಪ್ಪಿಗೆಯಿಲ್ಲದೆ ಇಲ್ಲಿಗೆ ನಾನು ಬಂದೆನೆಂದು ನೆನಸುತ್ತೀಯೋ? ‘ಇಲ್ಲಿಗೆ ಬಂದು ಇದನ್ನು ಹಾಳುಮಾಡಿಬಿಡು’ ಎಂದು ಆ ಸರ್ವೇಶ್ವರಸ್ವಾಮಿಯೇ ನನಗೆ ಆಜ್ಞೆ ಮಾಡಿದ್ದಾರೆ, ಎಂಬ ಈ ಮಾತುಗಳು ಅರಸನವು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಈ ದೇಶವನ್ನು ಹಾಳುಮಾಡುವದಕ್ಕೆ ಯೆಹೋವನ ಚಿತ್ತವಿಲ್ಲದೆ ಬಂದೆನೆಂದು ನೆನಸುತ್ತೀಯೋ? ಇಲ್ಲಿಗೆ ಬಂದು ಇದನ್ನು ಹಾಳುಮಾಡಿಬಿಡು ಎಂದು ಯೆಹೋವನೇ ನನಗೆ ಆಜ್ಞಾಪಿಸಿದನು ಅನ್ನುತ್ತಾನೆ ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಈ ಸ್ಥಳವನ್ನು ನಾಶಮಾಡುವುದಕ್ಕೆ ಯೆಹೋವ ದೇವರ ಅಪ್ಪಣೆ ಇಲ್ಲದೆ ಬಂದಿದ್ದೇನೋ? ಈ ದೇಶದ ಮೇಲೆ ಹೋಗಿ ಅದನ್ನು ನಾಶಮಾಡೆಂದು ಯೆಹೋವ ದೇವರೇ ನನಗೆ ಹೇಳಿದರು,’ ” ಎಂದನು. ಅಧ್ಯಾಯವನ್ನು ನೋಡಿ |
ಆದರೆ ನೆಕೋ ಯೋಷೀಯನಿಗೆ ಸಂದೇಶವನ್ನು ಕಳುಹಿಸಿ ಅದರಲ್ಲಿ, “ಅರಸನಾದ ಯೋಷೀಯನೇ, ನಾನು ನಿನಗೆ ವಿರುದ್ಧವಾಗಿ ಬರಲಿಲ್ಲ. ಆದ್ದರಿಂದ ನೀನು ಯುದ್ಧಕ್ಕೆ ಕೈಹಾಕಬೇಡ. ನಾನು ನನ್ನ ವೈರಿಗಳ ಮೇಲೆ ಯುದ್ಧಮಾಡಲು ಬಂದಿದ್ದೇನೆ. ಬೇಗನೆ ಯುದ್ಧಮಾಡಲು ದೇವರು ನನ್ನನ್ನು ಅವಸರಪಡಿಸುತ್ತಿದ್ದಾನೆ. ದೇವರು ನಿನ್ನೊಂದಿಗಿದ್ದಾನೆ. ಆದ್ದರಿಂದ ನನಗೆ ತೊಂದರೆ ಕೊಡಬೇಡ. ನೀನು ನನ್ನ ಮೇಲೆ ಯುದ್ಧ ಮಾಡಿದರೆ ದೇವರು ನಿನ್ನನ್ನು ನಾಶಮಾಡುವನು” ಎಂದು ಹೇಳಿದನು.