2 ಅರಸುಗಳು 18:27 - ಪರಿಶುದ್ದ ಬೈಬಲ್27 ಆದರೆ ರಬ್ಷಾಕೆಯು ಅವರಿಗೆ, “ನನ್ನ ಒಡೆಯನು ನನ್ನನ್ನು ಕಳುಹಿಸಿದ್ದು ನಾನು ನಿಮ್ಮೊಂದಿಗೆ ಮತ್ತು ನಿಮ್ಮ ರಾಜನೊಂದಿಗೆ ಮಾತ್ರ ಮಾತಾಡುವುದಕ್ಕಲ್ಲ. ಗೋಡೆಯ ಮೇಲೆ ಕುಳಿತಿರುವ ಇತರ ಜನರೊಂದಿಗೂ ನಾನು ಮಾತನಾಡುತ್ತೇನೆ! ಅವರು ನಿಮ್ಮೊಂದಿಗಿದ್ದರೆ ತಮ್ಮ ಮಲವನ್ನು ತಾವೇ ತಿನ್ನಬೇಕಾಗುತ್ತದೆ ಮತ್ತು ತಮ್ಮ ಮೂತ್ರವನ್ನು ತಾವೇ ಕುಡಿಯಬೇಕಾಗುತ್ತದೆ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅದಕ್ಕೆ ರಬ್ಷಾಕೆಯು, “ನನ್ನ ಯಜಮಾನನು ನಿಮ್ಮ ಸಂಗಡವಾಗಲಿ, ನಿಮ್ಮ ಒಡೆಯನ ಸಂಗಡವಾಗಲಿ ಮಾತನಾಡಬೇಕೆಂದು ನನ್ನನ್ನು ಕಳುಹಿಸಲಿಲ್ಲ. ಈ ಪೌಳಿಗೋಡೆಯ ಮೇಲೆ ಕುಳಿತಿರುವ ಜನರ ಸಂಗಡ ಮಾತನಾಡುವುದಕ್ಕೋಸ್ಕರ ಕಳುಹಿಸಿದ್ದಾನೆ. ಅವರು ನಿಮ್ಮೊಡನೆ ಇದ್ದರೆ ಸ್ವಂತ ಮಲವನ್ನು ತಿಂದು ಸ್ವಂತ ಮೂತ್ರವನ್ನು ಕುಡಿಯಬೇಕಾಗುವುದು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಅದಕ್ಕೆ ರಬ್ಷಾಕೆಯು, “ನನ್ನ ಯಜಮಾನರು, ನಿಮ್ಮ ಸಂಗಡವಾಗಲಿ ಮತ್ತು ನಿಮ್ಮ ಒಡೆಯರ ಸಂಗಡವಾಗಲಿ ಮಾತನಾಡಬೇಕೆಂದು ನನ್ನನ್ನು ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕುಳಿತಿರುವ ಜನರ ಸಂಗಡ ಮಾತನಾಡುವುದಕ್ಕಾಗಿಯೇ ಕಳುಹಿಸಿದ್ದಾರೆ. ಈ ಜನರು ನಿಮ್ಮೊಡನೆ ಇದ್ದರೆ ನಿಮ್ಮ ಹಾಗೆ ಇವರು ಕೂಡ ತಮ್ಮ ಸ್ವಂತ ಮಲಮೂತ್ರವನ್ನು ತಿಂದು ಕುಡಿಯಬೇಕಾಗುತ್ತದೆ,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಅದಕ್ಕೆ ರಬ್ಷಾಕೆಯು - ನನ್ನ ಯಜಮಾನನು ನಿಮ್ಮ ಸಂಗಡವಾಗಲಿ ನಿಮ್ಮ ಒಡೆಯನ ಸಂಗಡವಾಗಲಿ ಮಾತಾಡಬೇಕೆಂದು ನನ್ನನ್ನು ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕೂತಿರುವ ಜನರ ಸಂಗಡ ಮಾತಾಡುವದಕ್ಕೋಸ್ಕರ ಕಳುಹಿಸಿದ್ದಾನೆ. ಅವರು ನಿಮ್ಮೊಡನೆ ಇದ್ದರೆ ಸ್ವಂತ ಮಲವನ್ನು ತಿಂದು ಸ್ವಂತ ಮೂತ್ರವನ್ನು ಕುಡಿಯಬೇಕಾಗುವದು ಎಂದು ಉತ್ತರಕೊಟ್ಟು ಎದ್ದು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆದರೆ ರಬ್ಷಾಕೆಯು ಅವರಿಗೆ, “ನನ್ನ ಯಜಮಾನನು ನಿಮ್ಮ ಸಂಗಡವಾಗಲಿ, ನಿಮ್ಮ ಯಜಮಾನನ ಸಂಗಡವಾಗಲಿ ಮಾತ್ರ ಈ ಮಾತುಗಳನ್ನು ಹೇಳುವುದಕ್ಕೆ ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕುಳಿತ ಜನರ ಸಂಗಡವೂ ಮಾತನಾಡುವುದಕ್ಕಾಗಿ ಕಳುಹಿಸಿದ್ದಾರೆ. ಈ ಜನರು ನಿಮ್ಮ ಸಂಗಡ ಇದ್ದರೆ ನಿಮ್ಮ ಹಾಗೆ ಇವರೂ ಸಹ ತಮ್ಮ ಸ್ವಂತ ಮಲಮೂತ್ರವನ್ನು ತಿಂದು ಕುಡಿಯಬೇಕಾಗುತ್ತದೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |