Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 18:28 - ಪರಿಶುದ್ದ ಬೈಬಲ್‌

28 ನಂತರ ಸೇನಾಧಿಪತಿಯು ಯೂದಾಯ ಭಾಷೆಯಲ್ಲಿ ಗಟ್ಟಿಯಾಗಿ, “ಅಶ್ಶೂರದ ಮಹಾರಾಜನ ಈ ಸಂದೇಶವನ್ನು ಕೇಳಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನಂತರ, ರಬ್ಷಾಕೆಯು ಎದ್ದು ನಿಂತು ಯೂದಾಯ ಭಾಷೆಯಲ್ಲಿ, “ಅಶ್ಶೂರದ ಮಹಾರಾಜನ ಮಾತನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಬಳಿಕ ಆ ದಳಪತಿಯು ಆ ಗೋಡೆಯ ಮೇಲೆ ನಿಂತಿದ್ದವರನ್ನು ಉದ್ದೇಶಿಸಿ ಹಿಬ್ರೂ ಭಾಷೆಯಲ್ಲೇ, “ನೀವು ಅಸ್ಸೀರಿಯದ ರಾಜಾಧಿರಾಜನ ಮಾತನ್ನು ಕೇಳಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಗೋಡೆಯ ಮೇಲೆ ನಿಂತವರಿಗೆ ಯೂದಾಯ ಭಾಷೆಯಲ್ಲಿ - ಅಶ್ಶೂರದ ಮಹಾರಾಜನ ಮಾತನ್ನು ಕೇಳಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆಗ ರಬ್ಷಾಕೆ ನಿಂತುಕೊಂಡು ಯೆಹೂದ್ಯರ ಭಾಷೆಯಾದ ಹಿಬ್ರಿಯದಲ್ಲಿ ಗಟ್ಟಿಯಾದ ಶಬ್ದದಿಂದ ಕೂಗಿ ಹೇಳಿದ್ದೇನೆಂದರೆ, “ನೀವು ಅಸ್ಸೀರಿಯದ ಮಹಾರಾಜನ ಮಾತನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 18:28
12 ತಿಳಿವುಗಳ ಹೋಲಿಕೆ  

ನಂತರ ಅನೇಕಾನೇಕ ಜನರ ಮಹಾಶಬ್ದದಂತಿದ್ದ ಧ್ವನಿಯೊಂದು ನನಗೆ ಕೇಳಿಸಿತು. ಅದು ಪ್ರವಾಹದ ನೀರಿನ ಘೋಷದಂತೆಯೂ ಗಟ್ಟಿಯಾದ ಗುಡುಗಿನ ಶಬ್ದದಂತೆಯೂ ಇತ್ತು. ಆ ಜನರು ಹೀಗೆ ಹೇಳುತ್ತಿದ್ದರು: “ಹಲ್ಲೆಲೂಯಾ! ನಮ್ಮ ದೇವರಾದ ಪ್ರಭುವು ಆಳಲಾರಂಭಿಸಿದ್ದಾನೆ. ಆತನು ಸರ್ವಶಕ್ತನಾಗಿದ್ದಾನೆ.


‘ನನ್ನ ಒಡೆಯನಾದ ಯೆಹೋವನು ಹೀಗೆ ಹೇಳಿದ್ದಾನೆ ಎಂದು ಅವರಿಗೆ ತಿಳಿಸು, “‘ಈಜಿಪ್ಟಿನ ರಾಜನಾದ ಫರೋಹನೇ, ನಾನು ನಿನಗೆ ವಿರುದ್ಧವಾಗಿದ್ದೇನೆ. ನೀನು ನೈಲ್ ನದಿಯ ದಡದಲ್ಲಿ ಮಲಗಿರುವ ಪೇರ್ಮೊಸಳೆ, “ಇದು ನಾನು ನಿರ್ಮಿಸಿದ ಹೊಳೆ” ಎಂದು ನೀನು ಹೇಳಿಕೊಳ್ಳುವೆ.


ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ. ಆತನು ಭೂಲೋಕಕ್ಕೆಲ್ಲಾ ಮಹಾರಾಜನಾಗಿದ್ದಾನೆ.


ಅರಸನಾದ ಅರ್ತಷಸ್ತನಿಂದ: ಪರಲೋಕದ ದೇವರ ಕಟ್ಟಳೆಗಳ ಬೋಧಕನೂ ಯಾಜಕನೂ ಆಗಿರುವ ಎಜ್ರನಿಗೆ ವಂದನೆಗಳು.


ಜೆರುಸಲೇಮಿನ ಪೌಳಿಗೋಡೆಯ ಮೇಲಿದ್ದ ಯೆಹೂದದ ಜನರನ್ನುದ್ದೇಶಿಸಿ ಜೆರುಸಲೇಮಿನ ಜನರು ಭಯಪಡಲೆಂದು ಸನ್ಹೇರೀಬನ ಸೇವಕರು ಗಟ್ಟಿಯಾಗಿ ಇಬ್ರಿಯ ಭಾಷೆಯಲ್ಲಿ ಮಾತನಾಡಿದರು. ಜೆರುಸಲೇಮನ್ನು ವಶಪಡಿಸಿಕೊಳ್ಳಲು ಅವರು ಹೀಗೆ ಮಾಡಿದರು.


ಸೇನಾಧಿಪತಿಗಳಲ್ಲಿ ಒಬ್ಬನಾದ ರಬ್ಷಾಕೆಯು ಅವರಿಗೆ, “ಅಶ್ಶೂರದ ಮಹಾರಾಜನು ಹಿಜ್ಕೀಯನಿಗೆ ತಿಳಿಸುವುದೇನೆಂದರೆ: ‘ನಿನ್ನ ನಂಬಿಕೆಗೆ ಆಧಾರವು ಎಲ್ಲಿದೆ?


ಅಶ್ಶೂರದ ರಾಜ ಜೆರುಸಲೇಮಿನಲ್ಲಿದ್ದ ರಾಜನಾದ ಹಿಜ್ಕೀಯನ ಬಳಿಗೆ ತನ್ನ ಮೂವರು ಮಹಾಸೇನಾಧಿಪತಿಗಳಾದ ತರ್ತಾನ್, ರಬ್ಸಾರೀಸ್, ರಬ್ಷಾಕೆ ಎಂಬವರನ್ನು ಮಹಾಸೈನ್ಯದೊಂದಿಗೆ ಕಳುಹಿಸಿದನು. ಅವರು ಲಾಕೀಷಿನಿಂದ ಜೆರುಸಲೇಮಿಗೆ ಹೋದರು. ಅವರು ಮೇಲಿನ ಕೆರೆಯ ನೀರಿನ ಕೊಳವೆಯ ಬಳಿ ನಿಂತರು. (ಮೇಲಿನ ಕೆರೆಯು ರಸ್ತೆಯ ಮೇಲೆ ದೋಭಿಘಾಟ್ ಬಳಿಯಿತ್ತು.)


ಆದರೆ ರಬ್ಷಾಕೆಯು ಅವರಿಗೆ, “ನನ್ನ ಒಡೆಯನು ನನ್ನನ್ನು ಕಳುಹಿಸಿದ್ದು ನಾನು ನಿಮ್ಮೊಂದಿಗೆ ಮತ್ತು ನಿಮ್ಮ ರಾಜನೊಂದಿಗೆ ಮಾತ್ರ ಮಾತಾಡುವುದಕ್ಕಲ್ಲ. ಗೋಡೆಯ ಮೇಲೆ ಕುಳಿತಿರುವ ಇತರ ಜನರೊಂದಿಗೂ ನಾನು ಮಾತನಾಡುತ್ತೇನೆ! ಅವರು ನಿಮ್ಮೊಂದಿಗಿದ್ದರೆ ತಮ್ಮ ಮಲವನ್ನು ತಾವೇ ತಿನ್ನಬೇಕಾಗುತ್ತದೆ ಮತ್ತು ತಮ್ಮ ಮೂತ್ರವನ್ನು ತಾವೇ ಕುಡಿಯಬೇಕಾಗುತ್ತದೆ!” ಎಂದು ಹೇಳಿದನು.


‘ನಿಮ್ಮನ್ನು ಮೂರ್ಖರನ್ನಾಗಿಸಲು ಹಿಜ್ಕೀಯನಿಗೆ ಅವಕಾಶ ಕೊಡಬೇಡಿ! ನನ್ನ ಶಕ್ತಿಯಿಂದ ಅವನು ನಿಮ್ಮನ್ನು ರಕ್ಷಿಸಲಾಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು