Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 18:30 - ಪರಿಶುದ್ದ ಬೈಬಲ್‌

30 ಯೆಹೋವನನ್ನು ನೀವು ನಂಬುವಂತೆ ಮಾಡಲು ಹಿಜ್ಕೀಯನಿಗೆ ಅವಕಾಶ ನೀಡಬೇಡಿ! ಯೆಹೋವನು ನಮ್ಮನ್ನು ರಕ್ಷಿಸುತ್ತಾನೆ! ಅಶ್ಶೂರದ ರಾಜನು ಈ ನಗರವನ್ನು ಸೋಲಿಸಲಾಗುವುದಿಲ್ಲ!’ ಎಂದು ಹಿಜ್ಕೀಯನು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಹಿಜ್ಕೀಯನು ನಿಮಗೆ, ‘ಯೆಹೋವನ ಮೇಲೆ ಭರವಸದಿಂದಿರಿ; ಆತನು ನಿಮ್ಮನ್ನು ಹೇಗೂ ರಕ್ಷಿಸುವನು. ಈ ಪಟ್ಟಣವು ಅಶ್ಶೂರದ ಅರಸನ ವಶವಾಗುವುದಿಲ್ಲ’ ಎಂಬುದಾಗಿ ಹೇಳಿದರೆ ಅವನ ಮಾತಿಗೆ ಕಿವಿಗೊಡಬೇಡಿರಿ, ಒಪ್ಪಬೇಡಿರಿ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಹಿಜ್ಕೀಯನು ನಿಮಗೆ, ‘ಸರ್ವೇಶ್ವರ ಸ್ವಾಮಿಯಲ್ಲೇ ನಂಬಿಕೆಯಿಡಿ; ಅವರು ನಿಮ್ಮನ್ನು ಹೇಗಾದರೂ ಮಾಡಿ ರಕ್ಷಿಸುವರು; ಈ ಪಟ್ಟಣವು ಅಸ್ಸೀರಿಯದ ರಾಜನ ವಶವಾಗುವುದಿಲ್ಲ,’ ಎಂಬುದಾಗಿ ಹೇಳಿದರೆ ಅವನಿಗೆ ಕಿವಿಗೊಡಬೇಡಿ, ಒಪ್ಪಿಕೊಳ್ಳಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಹಿಜ್ಕೀಯನು ನಿಮಗೆ - ಯೆಹೋವನನ್ನು ನಂಬಿರಿ; ಆತನು ನಮ್ಮನ್ನು ಹೇಗೂ ರಕ್ಷಿಸುವನು; ಈ ಪಟ್ಟಣವು ಅಶ್ಶೂರದ ಅರಸನ ವಶವಾಗುವದಿಲ್ಲ ಎಂಬದಾಗಿ ಹೇಳಿದರೆ ಅವನಿಗೆ ಕಿವಿಗೊಡಬೇಡಿರಿ, ಒಪ್ಪಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಇದಲ್ಲದೆ, ‘ಯೆಹೋವ ದೇವರು ನಮ್ಮನ್ನು ನಿಶ್ಚಯವಾಗಿ ರಕ್ಷಿಸುವರು, ಈ ಪಟ್ಟಣವು ಅಸ್ಸೀರಿಯದ ಅರಸನ ಕೈಯಲ್ಲಿ ಒಪ್ಪಿಸುವುದಿಲ್ಲ,’ ಎಂದು ಹೇಳಿ, ಹಿಜ್ಕೀಯನು ನಿಮಗೆ ಯೆಹೋವ ದೇವರಲ್ಲಿ ಭರವಸೆ ಇಡುವಂತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 18:30
16 ತಿಳಿವುಗಳ ಹೋಲಿಕೆ  

ಜನರು ನೋಡುತ್ತಾ ಅಲ್ಲಿ ನಿಂತಿದ್ದರು. ಯೆಹೂದ್ಯನಾಯಕರು ಯೇಸುವನ್ನು ನೋಡಿ ಗೇಲಿಮಾಡಿದರು. ಅವರು, “ಇವನು ದೇವರಿಂದ ಆರಿಸಲ್ಪಟ್ಟ ಕ್ರಿಸ್ತನಾಗಿದ್ದರೆ ತನ್ನನ್ನು ರಕ್ಷಿಸಿಕೊಳ್ಳಲಿ. ಇವನು ಬೇರೆಯವರನ್ನು ರಕ್ಷಿಸಿದನಲ್ಲವೇ?” ಅಂದರು.


ಇವನು ದೇವರನ್ನು ನಂಬಿದ್ದನು. ಈಗ ದೇವರಿಗೆ ನಿಜವಾಗಿಯೂ ಇವನು ಬೇಕಿದ್ದರೆ, ದೇವರೇ ಇವನನ್ನು ಕಾಪಾಡಲಿ. ‘ನಾನು ದೇವರ ಮಗನು’ ಎಂದು ಇವನೇ ಹೇಳಿಕೊಂಡನಲ್ಲಾ” ಎಂದು ಅವರು ಹೇಳಿದರು.


“ದೇವರು ಅವನನ್ನು ಕೈಬಿಟ್ಟಿದ್ದಾನೆ; ಬೆನ್ನಟ್ಟಿ ಅವನನ್ನು ಹಿಡಿಯಿರಿ; ಅವನಿಗೆ ಸಹಾಯಕರೇ ಇಲ್ಲ” ಎಂದು ಅವರು ಹೇಳಿಕೊಳ್ಳುತ್ತಿದ್ದಾರೆ.


ವೃದ್ಧಾಪ್ಯದಲ್ಲಿ ನನ್ನನ್ನು ತಳ್ಳಿಬಿಡಬೇಡ. ಬಲವು ಕುಂದಿ ಹೋಗುತ್ತಿರುವಾಗ ಕೈಬಿಡಬೇಡ.


ನಾನು ಯೆಹೋವನನ್ನೇ ಆಶ್ರಯಿಸಿಕೊಂಡಿದ್ದೇನೆ. ಹೀಗಿರಲು, “ನಿನ್ನ ಬೆಟ್ಟಕ್ಕೆ ಪಕ್ಷಿಯಂತೆ ಹಾರಿಹೋಗು” ಎಂದು ನೀವು ಹೇಳುವುದೇಕೆ?


ಜನರೇ, ಇನ್ನೆಷ್ಟರವರೆಗೆ ನನ್ನ ಬಗ್ಗೆ ಕೆಟ್ಟದ್ದನ್ನು ಹೇಳುವಿರಿ? ಅಸತ್ಯವನ್ನೇ ಪ್ರೀತಿಸುತ್ತಾ, ನನ್ನ ಮೇಲೆ ಹೊರಿಸಲು ಸುಳ್ಳಪವಾದಗಳಿಗಾಗಿ ಯಾಕೆ ಹುಡುಕುತ್ತಿದ್ದೀರಿ?


ನೀನು ಯಾರನ್ನು ನಿಂದಿಸಿ ಪರಿಹಾಸ್ಯ ಮಾಡಿದೆ? ನೀನು ಯಾರ ವಿರುದ್ಧ ಮಾತನಾಡಿದೆ? ನೀನು ಇಸ್ರೇಲಿನ ಪವಿತ್ರನಿಗೆ ವಿರೋಧಿಯಲ್ಲವೆ! ನೀನು ಅವನಿಗಿಂತ ಉತ್ತಮನಂತೆ ನಟಿಸಿದೆ!


ಯೆಹೂದದ ರಾಜನಾದ ಹಿಜ್ಕೀಯನಿಗೆ ಇದನ್ನು ಹೇಳಿ: “ನೀನು ನಂಬುವ ದೇವರು ನಿನ್ನನ್ನು ಮೋಸಗೊಳಿಸಲು ಅವಕಾಶ ನೀಡಬೇಡ. ಅಶ್ಶೂರದ ರಾಜ ಜೆರುಸಲೇಮನ್ನು ಸೋಲಿಸುವುದಿಲ್ಲ ಎಂಬ ನಿನ್ನ ದೇವರ ಮಾತನ್ನು ನಂಬಬೇಡ.


‘ನಿಮ್ಮನ್ನು ಮೂರ್ಖರನ್ನಾಗಿಸಲು ಹಿಜ್ಕೀಯನಿಗೆ ಅವಕಾಶ ಕೊಡಬೇಡಿ! ನನ್ನ ಶಕ್ತಿಯಿಂದ ಅವನು ನಿಮ್ಮನ್ನು ರಕ್ಷಿಸಲಾಗುವುದಿಲ್ಲ.


ಆದರೆ ಹಿಜ್ಕೀಯನ ಮಾತುಗಳನ್ನು ಕೇಳಬೇಡಿ! ಎಂದು ಹೇಳಿದನು. ಅಶ್ಶೂರದ ರಾಜ ಹೀಗೆ ಹೇಳುತ್ತಾನೆ: “‘ನನ್ನೊಂದಿಗೆ ಶಾಂತಿಒಪ್ಪಂದ ಮಾಡಿಕೊಂಡು ನನ್ನ ಆಶ್ರಯಕ್ಕೆ ಬನ್ನಿರಿ. ನಂತರ ಪ್ರತಿಯೊಬ್ಬರೂ ತನ್ನ ಸ್ವಂತ ದ್ರಾಕ್ಷಿಯನ್ನು ತಿನ್ನಬಹುದು; ತನ್ನ ಸ್ವಂತ ಅಂಜೂರವನ್ನು ತಿನ್ನಬಹುದು; ತನ್ನ ಸ್ವಂತ ಬಾವಿಯಿಂದ ನೀರನ್ನು ಕುಡಿಯಬಹುದು.


ಯೆಶಾಯನು ಅವರಿಗೆ, “ನಿಮ್ಮ ಒಡೆಯನಾದ ಹಿಜ್ಕೀಯನಿಗೆ ಈ ಸಂದೇಶವನ್ನು ತಿಳಿಸಿ: ‘ಯೆಹೋವನು ಹೀಗೆನ್ನುತ್ತಾನೆ: ಅಶ್ಶೂರದ ರಾಜನ ಅಧಿಕಾರಿಗಳು ನನ್ನನ್ನು ಅಪಹಾಸ್ಯಮಾಡಲೆಂದು ಹೇಳಿದ ಸಂಗತಿಗಳಿಂದ ನೀವು ಹೆದರಬೇಡಿ.


ಆದರೆ ಯೆಹೋವನೇ, ನೀನೇ ನನ್ನ ಗುರಾಣಿ. ನೀನೇ ನನ್ನ ಗೌರವಕ್ಕೆ ಆಧಾರ. ನನ್ನನ್ನು ಜಯವೀರನನ್ನಾಗಿ ಮಾಡು.


ಆಗ ನಾನು, ಹಬ್ಬದ ಉತ್ಸಾಹದಲ್ಲಿ ಜನಸಮೂಹದೊಡನೆ ಹರ್ಷಿಸುತ್ತಾ ಸ್ತುತಿಗೀತೆಗಳನ್ನು ಹಾಡುತ್ತಾ ಅವರನ್ನು ದೇವಾಲಯಕ್ಕೆ ಮುನ್ನಡೆಸುತ್ತಿದ್ದದ್ದನ್ನು ನೆನಪಿಗೆ ತಂದುಕೊಂಡು ಹೃದಯದಲ್ಲಿ ಕೊರಗುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು