Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 18:32 - ಪರಿಶುದ್ದ ಬೈಬಲ್‌

32 ನಾನು ಬಂದು, ನಿಮ್ಮನ್ನು ಈ ದೇಶಕ್ಕೆ ಸಮಾನವಾದ ಬೇರೊಂದು ದೇಶಕ್ಕೆ ಕರೆದೊಯ್ಯುವವರೆಗೆ ನೀವು ಹೀಗೆ ಮಾಡಬಹುದು. ಆ ದೇಶವು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ, ಆಲೀವ್ ಮರ ಮತ್ತು ಜೇನುತುಪ್ಪ ಮುಂತಾದವುಗಳಿಂದ ಸಮೃದ್ಧಿಯಾಗಿದೆ. ನೀವು ಅಲ್ಲಿ ಸಾಯದೆ ಜೀವಿಸಬಹುದು. ಆದರೆ ಹಿಜ್ಕೀಯನ ಮಾತುಗಳನ್ನು ಕೇಳಬೇಡಿ! ಅವನು ನಿಮ್ಮ ಮನಸ್ಸನ್ನು ಬದಲಾಯಿಸಲು ಪ್ರಯತ್ನಿಸುತ್ತಿದ್ದಾನೆ. “ಯೆಹೋವನು ನಮ್ಮನ್ನು ರಕ್ಷಿಸುತ್ತಾನೆ” ಎಂದು ಅವನು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ ಆಹಾರ, ದ್ರಾಕ್ಷಿತೋಟ, ಎಣ್ಣೆಮರ, ಜೇನುತುಪ್ಪವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು. ನೀವು ಸಾಯುವುದಿಲ್ಲ, ಬದುಕುವಿರಿ. ಯೆಹೋವನು ನಿಮ್ಮನ್ನು ರಕ್ಷಿಸುವನು ಎಂಬ ನಂಬಿಕೆಯನ್ನು ನಿಮ್ಮಲ್ಲಿ ಹುಟ್ಟಿಸುವುದಕ್ಕೆ ಪ್ರಯತ್ನಿಸುವ ಹಿಜ್ಕೀಯನಿಗೆ ಕಿವಿಗೊಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಸ್ವಲ್ಪಕಾಲವಾದ ನಂತರ ನಾನು ಬಂದು ನಿಮ್ಮನ್ನು ಇನ್ನೊಂದು ನಾಡಿಗೆ ಕರೆದುಕೊಂಡು ಹೋಗುವೆನು. ಅಲ್ಲಿ ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷೀತೋಟ, ಎಣ್ಣೇಮರ, ಜೇನುತುಪ್ಪ ಸಮೃದ್ಧಿಯಾಗಿರುವುವು. ನಿಮ್ಮ ನಾಡಿಗೆ ಸರಿಸಮಾನವಾಗಿರುವುವು; ನೀವು ಸಾಯುವುದಿಲ್ಲ, ಬದುಕುವಿರಿ; ‘ಸರ್ವೇಶ್ವರ ನಮ್ಮನ್ನು ರಕ್ಷಿಸುವರು’ ಎಂಬ ನಂಬಿಕೆಯನ್ನು ಹಿಜ್ಕೀಯನು ನಿಮ್ಮಲ್ಲಿ ಮೂಡಿಸದಂತೆ ಎಚ್ಚರಿಕೆಯಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಸ್ವಲ್ಪ ಕಾಲವಾದನಂತರ ನಾನು ಬಂದು ನಿಮ್ಮನ್ನು ಧಾನ್ಯ ದ್ರಾಕ್ಷಾರಸ ಆಹಾರ ದ್ರಾಕ್ಷೇತೋಟ ಎಣ್ಣೇಮರ ಜೇನುತುಪ್ಪ ಇವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ಕರಕೊಂಡುಹೋಗುವೆನು; ನೀವು ಸಾಯುವದಿಲ್ಲ, ಬದುಕುವಿರಿ. ಯೆಹೋವನು ನಮ್ಮನ್ನು ರಕ್ಷಿಸುವನು ಎಂದು ನಂಬಿಕೆಯನ್ನು ನಿಮ್ಮಲ್ಲಿ ಹುಟ್ಟಿಸುವದಕ್ಕೆ ಪ್ರಯತ್ನಿಸುವ ಹಿಜ್ಕೀಯನಿಗೆ ಕಿವಿಗೊಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಸ್ವಲ್ಪ ಕಾಲವಾದ ನಂತರ ನಾನು ಬಂದು, ನಿಮ್ಮನ್ನು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ, ಎಣ್ಣೆಮರಗಳು, ಜೇನು ಇವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾಗಿರುವ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು. ಜೀವವನ್ನು ಆಯ್ದುಕೊಳ್ಳಿರಿ, ಮರಣವನ್ನಲ್ಲ. “ ‘ಯೆಹೋವ ದೇವರು ನಮ್ಮನ್ನು ರಕ್ಷಿಸುವರು,’ ಎಂದು ಹಿಜ್ಕೀಯನು ನಿಮ್ಮನ್ನು ಪ್ರೇರೇಪಿಸಿ ತಪ್ಪು ಮಾರ್ಗದಲ್ಲಿ ನಡೆಸುವಾಗ, ಅವನ ಮಾತನ್ನು ಕೇಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 18:32
16 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನು ಆ ಭೂಮಿಯನ್ನು ಕಾಯುತ್ತಾನೆ. ಆ ದೇಶವನ್ನು ವರ್ಷದ ಪ್ರಾರಂಭದಿಂದ ಕೊನೆಯ ತನಕ ಪರಿಪಾಲಿಸುತ್ತಾನೆ.


ಈಗ ನಾನು ಇಳಿದುಹೋಗಿ ಈಜಿಪ್ಟಿನವರಿಂದ ನನ್ನ ಜನರನ್ನು ರಕ್ಷಿಸುವೆನು. ನಾನು ಅವರನ್ನು ಆ ದೇಶದಿಂದ ಬಿಡುಗಡೆ ಮಾಡಿ ಒಳ್ಳೆಯದಾದ ಮತ್ತು ವಿಶಾಲವಾದ ದೇಶಕ್ಕೆ ಅವರನ್ನು ನಡೆಸುವೆನು. ಅದು ಸಮೃದ್ಧಿಕರವಾದ ದೇಶ. ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸವಾಗಿರುವ ದೇಶ ಅದಾಗಿದೆ.


ಆ ನಗರದಲ್ಲಿ ಉಳಿದಿದ್ದ ಜನರನ್ನೆಲ್ಲಾ ನೆಬೂಜರದಾನನು ಸೆರೆಹಿಡಿದನು. ರಾಜನಾದ ನೆಬೂಕದ್ನೆಚ್ಚರನಿಗೆ ವಿಧೇಯರಾಗಿರಲು ಕೆಲವು ಜನರು ಒಪ್ಪಿದರು. ಆದರೆ ನೆಬೂಜರದಾನನು ಆ ಜನರನ್ನೆಲ್ಲಾ ಸೆರೆಹಿಡಿದನು. ಅವನು ನಗರದಲ್ಲಿದ್ದ ಪ್ರತಿಯೊಬ್ಬರನ್ನೂ ಕರೆದೊಯ್ದನು.


ಅಶ್ಶೂರದ ರಾಜನು ಇಸ್ರೇಲರನ್ನು, ಸೆರೆಯಾಳುಗಳನ್ನಾಗಿ ಅಶ್ಶೂರಿಗೆ ಒಯ್ದನು. ಅವನು ಅವರನ್ನು ಹಲಹು ಎಂಬ ಪ್ರಾಂತದಲ್ಲಿಯೂ ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತದಲ್ಲಿಯೂ ಮೇದ್ಯರ ನಗರಗಳಲ್ಲಿಯೂ ವಾಸಿಸುವಂತೆ ಮಾಡಿದನು.


ಯೆಹೋವನು ಇಸ್ರೇಲನ್ನು ತನ್ನ ದೃಷ್ಟಿಯಿಂದ ದೂರ ತಳ್ಳುವವರೆಗೆ, ಅವರು ಈ ಪಾಪಗಳನ್ನು ಮಾಡುವುದನ್ನು ನಿಲ್ಲಿಸಲೇ ಇಲ್ಲ. ಇದು ಸಂಭವಿಸುತ್ತದೆಂದು ಯೆಹೋವನು ಹೇಳಿದ್ದನು! ಆತನು ಜನರಿಗೆ ಇದನ್ನು ಮುಂಚೆಯೇ ತಿಳಿಸಲು ತನ್ನ ಪ್ರವಾದಿಗಳನ್ನು ಕಳುಹಿಸಿದ್ದನು. ಆದ್ದರಿಂದಲೇ ಇಸ್ರೇಲರನ್ನು ತಮ್ಮ ದೇಶದಿಂದ ಅಶ್ಶೂರಿಗೆ ಸೆರೆಹಿಡಿದು ಒಯ್ದರು. ಅವರು ಇಂದಿಗೂ ಅಲ್ಲಿಯೇ ಇದ್ದಾರೆ.


ಹೋಶೇಯನು ಇಸ್ರೇಲಿನ ರಾಜನಾಗಿದ್ದ ಒಂಭತ್ತನೆಯ ವರ್ಷದಲ್ಲಿ ಅಶ್ಶೂರದ ರಾಜನು ಸಮಾರ್ಯವನ್ನು ಸ್ವಾಧೀನಪಡಿಸಿಕೊಂಡನು. ಅಶ್ಶೂರದ ರಾಜನು ಇಸ್ರೇಲರನ್ನು ಸೆರೆಯಾಳುಗಳನ್ನಾಗಿ ಒಯ್ದು ಹಲಹು ಪ್ರಾಂತ್ಯದಲ್ಲಿಯೂ ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ್ಯದಲ್ಲಿಯೂ ಮೇದ್ಯರ ನಗರಗಳಲ್ಲಿಯೂ ಇರಿಸಿದನು.


ಅದು ಹಾಲೂ ಜೇನೂ ಹರಿಯುವ ದೇಶ. ಯೆಹೋವನು ನಮ್ಮನ್ನು ಮೆಚ್ಚಿಕೊಂಡರೆ ಆ ದೇಶದೊಳಗೆ ನಮ್ಮನ್ನು ಕರೆದೊಯ್ದು ಅದನ್ನು ನಮ್ಮ ಸ್ವಾಧೀನಕ್ಕೆ ಕೊಡುವನು.


ಅವನು ತನ್ನ ಕತ್ತೆಯನ್ನು ದ್ರಾಕ್ಷೆಬಳ್ಳಿಗೆ ಕಟ್ಟುವನು; ತನ್ನ ಪ್ರಾಯದ ಕತ್ತೆಯನ್ನು ಉತ್ತಮವಾದ ದ್ರಾಕ್ಷೆಬಳ್ಳಿಗೆ ಕಟ್ಟುವನು. ಅವನು ಉತ್ತಮವಾದ ದ್ರಾಕ್ಷಾರಸದಿಂದ ತನ್ನ ಬಟ್ಟೆಗಳನ್ನು ತೊಳೆಯುವನು.


ಯೆಹೂದದ ರಾಜನಾದ ಹಿಜ್ಕೀಯನಿಗೆ ಇದನ್ನು ಹೇಳಿ: “ನೀನು ನಂಬುವ ದೇವರು ನಿನ್ನನ್ನು ಮೋಸಗೊಳಿಸಲು ಅವಕಾಶ ನೀಡಬೇಡ. ಅಶ್ಶೂರದ ರಾಜ ಜೆರುಸಲೇಮನ್ನು ಸೋಲಿಸುವುದಿಲ್ಲ ಎಂಬ ನಿನ್ನ ದೇವರ ಮಾತನ್ನು ನಂಬಬೇಡ.


ಆದರೆ ಯೆಹೋವನೇ, ನೀನೇ ನನ್ನ ಗುರಾಣಿ. ನೀನೇ ನನ್ನ ಗೌರವಕ್ಕೆ ಆಧಾರ. ನನ್ನನ್ನು ಜಯವೀರನನ್ನಾಗಿ ಮಾಡು.


ಆಗ ನಾನು, ಹಬ್ಬದ ಉತ್ಸಾಹದಲ್ಲಿ ಜನಸಮೂಹದೊಡನೆ ಹರ್ಷಿಸುತ್ತಾ ಸ್ತುತಿಗೀತೆಗಳನ್ನು ಹಾಡುತ್ತಾ ಅವರನ್ನು ದೇವಾಲಯಕ್ಕೆ ಮುನ್ನಡೆಸುತ್ತಿದ್ದದ್ದನ್ನು ನೆನಪಿಗೆ ತಂದುಕೊಂಡು ಹೃದಯದಲ್ಲಿ ಕೊರಗುವೆ.


ಹೀಗೆ ನೀವು ಸೇವಿಸುತ್ತಾ ಇದ್ದರೆ ನಾನು ಬಂದು ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ನಿಮ್ಮನ್ನು ಕರೆದೊಯ್ಯವೆನು. ಆ ಹೊಸ ದೇಶದಲ್ಲಿ ನೀವು ಒಳ್ಳೆಯ ಧಾನ್ಯವನ್ನು ಮತ್ತು ಹೊಸ ದ್ರಾಕ್ಷಾರಸವನ್ನು, ರೊಟ್ಟಿಯನ್ನು ಮತ್ತು ದ್ರಾಕ್ಷಿತೋಟಗಳನ್ನು ಹೊಂದುವಿರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು