2 ಅರಸುಗಳು 18:6 - ಪರಿಶುದ್ದ ಬೈಬಲ್6 ಹಿಜ್ಕೀಯನು ಯೆಹೋವನಿಗೆ ಬಹಳ ನಂಬಿಕೆಯುಳ್ಳವನಾಗಿದ್ದನು. ಅವನು ಯೆಹೋವನನ್ನು ಅನುಸರಿಸುವುದನ್ನು ನಿಲ್ಲಿಸಲೇ ಇಲ್ಲ. ಯೆಹೋವನು ಮೋಶೆಗೆ ನೀಡಿದ ಆಜ್ಞೆಗಳಿಗೆ ಅವನು ವಿಧೇಯನಾಗಿ ಅನುಸರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಇದಲ್ಲದೆ, ಇವನು ಯೆಹೋವನನ್ನೇ ಆಶ್ರಯಿಸಿಕೊಂಡು ಆತನನ್ನು ಬಿಡದೆ ಹಿಂಬಾಲಿಸಿ, ಮೋಶೆಯ ಮುಖಾಂತರವಾಗಿ ಅನುಗ್ರಹಿಸಿದ ಆಜ್ಞೆಗಳನ್ನು ಕೈಕೊಂಡು ನಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಇದಲ್ಲದೆ, ಇವನು ಸರ್ವೇಶ್ವರನನ್ನೇ ಹೊಂದಿಕೊಂಡು ಅವರನ್ನು ಬಿಡದೆ ಅನುಸರಿಸುತ್ತಾ, ಅವರು ಮೋಶೆಯ ಮುಖಾಂತರ ಅನುಗ್ರಹಿಸಿದ ಆಜ್ಞೆಗಳನ್ನು ಕೈಗೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಇದಲ್ಲದೆ ಇವನು ಯೆಹೋವನನ್ನೇ ಹೊಂದಿಕೊಂಡು ಆತನನ್ನು ಬಿಡದೆ ಹಿಂಬಾಲಿಸಿ ಆತನು ಮೋಶೆಯ ಮುಖಾಂತರವಾಗಿ ಅನುಗ್ರಹಿಸಿದ ಆಜ್ಞೆಯನ್ನು ಕೈಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅವನು ಯೆಹೋವ ದೇವರನ್ನು ಹಿಂಬಾಲಿಸುವುದನ್ನು ಬಿಟ್ಟುಬಿಡದೆ, ದೇವರನ್ನೇ ಆತುಕೊಂಡು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಆಜ್ಞೆಗಳನ್ನು ಕೈಗೊಂಡನು. ಅಧ್ಯಾಯವನ್ನು ನೋಡಿ |
ಬಾರ್ನಬನು ಒಳ್ಳೆಯ ಮನುಷ್ಯನಾಗಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು ಮತ್ತು ಪೂರ್ಣನಂಬಿಕೆಯುಳ್ಳವನಾಗಿದ್ದನು. ಬಾರ್ನಬನು ಅಂತಿಯೋಕ್ಯಕ್ಕೆ ಹೋದಾಗ, ದೇವರು ಆ ಜನರನ್ನು ಅಧಿಕವಾಗಿ ಆಶೀರ್ವದಿಸಿರುವುದನ್ನು ಕಂಡನು. ಇದರಿಂದ ಬಾರ್ನಬನಿಗೆ ತುಂಬಾ ಸಂತೋಷವಾಯಿತು. ಅಂತಿಯೋಕ್ಯದಲ್ಲಿದ್ದ ವಿಶ್ವಾಸಿಗಳನ್ನೆಲ್ಲ ಅವನು ಪ್ರೋತ್ಸಾಹಿಸಿದನು. ಅವನು ಅವರಿಗೆ, “ನಿಮ್ಮ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬೇಡಿ. ಪ್ರಭುವಿಗೆ ನಿಮ್ಮ ಪೂರ್ಣಹೃದಯಗಳಿಂದ ಯಾವಾಗಲೂ ವಿಧೇಯರಾಗಿರಿ” ಎಂದು ಹೇಳಿದನು. ಅನೇಕ ಜನರು ಪ್ರಭುವಾದ ಯೇಸುವಿನ ಹಿಂಬಾಲಕರಾದರು.
ಇಸ್ರೇಲ್ ಮತ್ತು ಯೆಹೂದಗಳನ್ನು ಎಚ್ಚರಿಸಲು ಯೆಹೋವನು ಪ್ರತಿಯೊಬ್ಬ ಪ್ರವಾದಿಯನ್ನು ಮತ್ತು ದೇವದರ್ಶಿಯನ್ನು ಬಳಸಿಕೊಂಡನು. ಯೆಹೋವನು, “ನಿಮ್ಮ ಕೆಟ್ಟಕಾರ್ಯಗಳಿಂದ ದೂರವಾಗಿ! ನನ್ನ ಆಜ್ಞೆಗಳಿಗೆ ಮತ್ತು ಧರ್ಮಶಾಸ್ತ್ರಗಳಿಗೆ ವಿಧೇಯತೆಯಿಂದಿರಿ. ನಿಮ್ಮ ಪೂರ್ವಿಕರಿಗೆ ನಾನು ನೀಡಿದ ಕಟ್ಟಳೆಗಳನ್ನೆಲ್ಲಾ ಅನುಸರಿಸಿ. ನಾನು ನನ್ನ ಸೇವಕರಾದ ಪ್ರವಾದಿಗಳ ಮೂಲಕ ಇವುಗಳನ್ನು ನೀಡಿದ್ದೇನೆ” ಎಂದು ಹೇಳಿದ್ದನು.
ನಾನು ನಿಮ್ಮ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಬಗ್ಗೆ ಮಾತನಾಡುತ್ತಿದ್ದೇನೆ. ನಾನು ಈಜಿಪ್ಟಿನಿಂದ ಅವರನ್ನು ಹೊರತಂದಾಗ ನಾನು ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಂಡೆ. ಈಜಿಪ್ಟು ಅನೇಕ ಕಷ್ಟಗಳ ನಾಡಾಗಿತ್ತು. ಅದು ಕಬ್ಬಿಣವನ್ನು ಕರಗಿಸುವ ಉರಿಯುವ ಕುಲುಮೆಯಂತಿತ್ತು. ನಾನು ಅವರಿಗೆ, ‘ನನ್ನ ಆಜ್ಞಾಪಾಲನೆಯನ್ನು ಮಾಡಿರಿ ಮತ್ತು ನಾನು ಹೇಳಿದಂತೆ ಎಲ್ಲವನ್ನು ಮಾಡಿರಿ. ಆಗ ನೀವು ನನ್ನ ಭಕ್ತರಾಗುವಿರಿ. ನಾನು ನಿಮ್ಮ ದೇವರಾಗುವೆನು’ ಎಂದೆ.