Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 18:7 - ಪರಿಶುದ್ದ ಬೈಬಲ್‌

7 ಯೆಹೋವನು ಹಿಜ್ಕೀಯನೊಂದಿಗಿದ್ದನು. ಹಿಜ್ಕೀಯನು ತಾನು ಮಾಡಿದ್ದರಲ್ಲೆಲ್ಲಾ ಜಯಗಳಿಸಿದನು. ಹಿಜ್ಕೀಯನು ಅಶ್ಶೂರದ ರಾಜನೊಂದಿಗಿದ್ದ ಸಂಬಂಧವನ್ನು ಕಡಿದುಹಾಕಿದನು. ಅಶ್ಶೂರದ ರಾಜನ ಸೇವೆಯನ್ನು ಹಿಜ್ಕೀಯನು ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನು ಹಿಜ್ಕೀಯನ ಸಂಗಡ ಇದ್ದುದರಿಂದ ಅವನು ಹೋದ ಎಲ್ಲ ಕಡೆ ಅಭಿವೃದ್ಧಿ ಹೊಂದಿದನು. ಇವನು ಅಶ್ಶೂರದ ಅರಸನಿಗೆ ವಿರುದ್ಧವಾಗಿ ದಂಗೆ ಎದ್ದು ಸ್ವತಂತ್ರನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸರ್ವೇಶ್ವರ ಇವನ ಸಂಗಡ ಇದ್ದುದರಿಂದ ಎಲ್ಲಿಗೆ ಹೋದರೂ ಕೃತಾರ್ಥನಾಗಿ ಬರುತ್ತಿದ್ದನು. ಇವನು ಅಸ್ಸೀರಿಯದ ಅರಸನಿಗೆ ವಿರುದ್ಧ ದಂಗೆಯೆದ್ದು ಸ್ವತಂತ್ರನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನು ಇವನ ಸಂಗಡ ಇದ್ದದರಿಂದ ಎಲ್ಲಿಗೆ ಹೋದರೂ ಕೃತಾರ್ಥನಾಗಿ ಬರುತ್ತಿದ್ದನು. ಇವನು ಅಶ್ಶೂರದ ಅರಸನಿಗೆ ವಿರೋಧವಾಗಿ ತಿರುಗಿಬಿದ್ದು ಸ್ವತಂತ್ರನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರು ಅವನ ಸಂಗಡ ಇದ್ದರು. ಹಿಜ್ಕೀಯನು ಯಾವ ಕಡೆಗೆ ಹೋದರೂ ಅವನಿಗೆ ಸಫಲವಾಯಿತು. ಅವನು ಅಸ್ಸೀರಿಯದ ಅರಸನನ್ನು ಸೇವಿಸದೆ, ಅವನ ಮೇಲೆ ತಿರುಗಿಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 18:7
23 ತಿಳಿವುಗಳ ಹೋಲಿಕೆ  

ಅಹಾಜನು ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನ ಬಳಿಗೆ ಸಂದೇಶಕರನ್ನು ಕಳುಹಿಸಿದನು. ಆ ಸಂದೇಶವೇನೆಂದರೆ: “ನಾನು ನಿನ್ನ ಸೇವಕ. ನಾನು ನಿನಗೆ ಮಗನಂತಿದ್ದೇನೆ. ನೀನು ಬಂದು, ಅರಾಮ್ಯರ ರಾಜನಿಂದ ಮತ್ತು ಇಸ್ರೇಲಿನ ರಾಜನಿಂದ ನನ್ನನ್ನು ರಕ್ಷಿಸು. ಅವರು ನನ್ನ ವಿರುದ್ಧ ಯುದ್ಧಕ್ಕೆ ಬಂದಿದ್ದಾರೆ.”


ಹೀಗಿರುವಲ್ಲಿ ಇದರ ಬಗ್ಗೆ ನಾವು ಏನು ಹೇಳೋಣ? ದೇವರು ನಮ್ಮೊಂದಿಗೆ ಇರುವಾಗ, ನಮ್ಮನ್ನು ಯಾರೂ ಸೋಲಿಸಲಾರರು.


ದೇವರೊಬ್ಬನೇ ನಮ್ಮನ್ನು ಬಲಗೊಳಿಸಬಲ್ಲನು. ಆತನೊಬ್ಬನೇ ನಮ್ಮ ಶತ್ರುಗಳನ್ನು ಸೋಲಿಸಬಲ್ಲನು!


ನಾನು ನಿಮಗೆ ಆಜ್ಞಾಪಿಸಿದವುಗಳಿಗೆಲ್ಲಾ ವಿಧೇಯರಾಗುವಂತೆ ಜನರಿಗೆ ಉಪದೇಶಿಸಿ, ಲೋಕಾಂತ್ಯದವರೆಗೂ ಸದಾಕಾಲ ನಾನು ನಿಮ್ಮೊಂದಿಗಿರುತ್ತೇನೆ” ಎಂದು ಹೇಳಿದನು.


ಅವನು ನೀರಿನ ಕಾಲುವೆಗಳ ಬಳಿಯಲ್ಲಿ ಹುಲುಸಾಗಿ ಬೆಳೆದಿರುವ ಮರದಂತಿರುವನು. ಆ ಮರವು ತಕ್ಕಕಾಲದಲ್ಲಿ ಫಲಿಸುವುದು; ಬಾಡದ ಎಲೆಗಳಿಂದ ಯಾವಾಗಲೂ ತುಂಬಿರುವುದು; ಅಂತೆಯೇ ಅವನ ಕಾರ್ಯಗಳೆಲ್ಲಾ ಸಫಲವಾಗುವವು.


ಹಿಜ್ಕೀಯನು ಗೀಹೋನ್ ಬುಗ್ಗೆಯನ್ನು ತಡೆದು ಆ ನೀರು ಪಶ್ಚಿಮದ ಕಡೆಯಲ್ಲಿದ್ದ ದಾವೀದ ನಗರಕ್ಕೆ ನೇರವಾಗಿ ಇಳಿದು ಬರುವಂತೆ ಮಾಡಿದನು. ಅವನು ಕೈಹಾಕಿದ ಕಾರ್ಯಗಳೆಲ್ಲವೂ ಸಫಲವಾದವು.


ಹಿಜ್ಕೀಯನು ತಾನು ಪ್ರಾರಂಭಿಸಿದ ಪ್ರತಿಯೊಂದು ಕಾರ್ಯಗಳನ್ನೂ ದೇವಾಲಯದ ಕಾರ್ಯಗಳನ್ನೂ ದೇವರ ಕಟ್ಟಳೆಗಳನ್ನೂ ಅನುಸರಿಸುವದನ್ನು ಪೂರ್ಣಹೃದಯದಿಂದ ಮಾಡಿ ಯಶಸ್ವಿಯಾದನು.


ಯೆಹೋವನು ದಾವೀದನ ಜೊತೆಗಿದ್ದನು. ಆದ್ದರಿಂದ ದಾವೀದನು ಎಲ್ಲದರಲ್ಲೂ ಯಶ್ವಸಿಯಾದನು.


ಅದೇನೆಂದರೆ: “ಕನ್ನಿಕೆಯೊಬ್ಬಳು ಗರ್ಭಿಣಿಯಾಗಿ ಒಬ್ಬ ಮಗನಿಗೆ ಜನ್ಮ ಕೊಡುತ್ತಾಳೆ. ಆತನಿಗೆ ಇಮ್ಮಾನುವೇಲ್ ಎಂಬ ಹೆಸರನ್ನು ಇಡುವರು.” (ಇಮ್ಮಾನುವೇಲ್ ಎಂದರೆ “ದೇವರು ನಮ್ಮ ಸಂಗಡ ಇದ್ದಾನೆ” ಎಂದರ್ಥ.)


ಸೇನಾಧೀಶ್ವರನಾದ ಯೆಹೋವನು ನಮ್ಮೊಂದಿಗಿದ್ದಾನೆ. ಯಾಕೋಬನ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ.


“ಯುದ್ಧದಲ್ಲಿ ನನಗೆ ಸಹಾಯಮಾಡಲು ನನ್ನಲ್ಲಿ ಬೇಕಾದಷ್ಟು ವಿವೇಕವೂ ಬಲವೂ ಇದೆ” ಎಂದು ನೀನು ಹೇಳುವೆ. ಆದರೆ ನೀನು ಯಾರನ್ನು ನಂಬಿಕೊಂಡು ನನಗೆ ವಿರುದ್ಧವಾಗಿ ದಂಗೆ ಎದ್ದಿರುವೆ?


ಸೌಲನು ದಾವೀದನನ್ನು ಬೇರೆಬೇರೆ ಯುದ್ಧಗಳಲ್ಲಿ ಹೋರಾಡಲು ಕಳುಹಿಸಿದನು. ದಾವೀದನು ಆ ಯುದ್ಧಗಳಲ್ಲೆಲ್ಲಾ ಯಶ್ವಸಿಯಾದನು. ಆದ್ದರಿಂದ ಸೌಲನು ದಾವೀದನನ್ನು ಸೈನ್ಯಾಧಿಪತಿಯನ್ನಾಗಿ ನೇಮಿಸಿದನು. ಇದು ಸೌಲನ ಅಧಿಕಾರಿಗಳಿಗೂ ಇತರರಿಗೂ ಸಂತಸವನ್ನು ಉಂಟುಮಾಡಿತು!


ಬಳಿಕ ದಾವೀದನು ದಮಸ್ಕದ ಅರಾಮ್ ದೇಶದಲ್ಲಿ ಕಾವಲುದಂಡನ್ನು ಇರಿಸಿದನು. ಅರಾಮ್ಯರು ದಾವೀದನ ಸೇವಕರಾದರು ಮತ್ತು ಅವನಿಗೆ ಕಾಣಿಕೆಗಳನ್ನು ತಂದರು. ದಾವೀದನು ಹೋದ ಸ್ಥಳಗಳಲ್ಲೆಲ್ಲ ಯೆಹೋವನು ಜಯವನ್ನು ಉಂಟುಮಾಡಿದನು.


ಆಮೇಲೆ ಅಬೀಮೆಲೆಕನು ಮತ್ತು ಫೀಕೋಲನು ಅಬ್ರಹಾಮನೊಡನೆ ಮಾತಾಡಿದರು. ಫೀಕೋಲನು ಅಬೀಮೆಲೆಕನ ಸೈನ್ಯಾಧಿಕಾರಿಯಾಗಿದ್ದನು. ಅಬೀಮೆಲೆಕನು ಅಬ್ರಹಾಮನಿಗೆ, “ನೀನು ಮಾಡುವ ಪ್ರತಿಯೊಂದರಲ್ಲೂ ದೇವರು ನಿನ್ನೊಡನೆ ಇದ್ದಾನೆ.


ದಾವೀದನು ಎದೋಮಿನ ಎಲ್ಲಾ ಕಡೆಯಲ್ಲೂ ಕಾವಲುದಂಡನ್ನು ಇರಿಸಿದನು. ಎದೋಮಿನ ಜನರೆಲ್ಲರೂ ದಾವೀದನ ಸೇವಕರಾದರು. ದಾವೀದನು ಹೋದ ಕಡೆಗಳಲ್ಲೆಲ್ಲಾ ಯೆಹೋವನು ಜಯವನ್ನು ಉಂಟುಮಾಡಿದನು.


ಆಗ ಯೆಹೂದದ ರಾಜನಾದ ಹಿಜ್ಕೀಯನು ಲಾಕೀಷಿನಲ್ಲಿದ್ದ ಅಶ್ಶೂರದ ರಾಜನಿಗೆ ಒಂದು ಸಂದೇಶವನ್ನು ಕಳುಹಿಸಿದನು. ಹಿಜ್ಕೀಯನು, “ನಾನು ತಪ್ಪು ಮಾಡಿದ್ದೇನೆ. ನನ್ನನ್ನು ಒಬ್ಬಂಟಿಗನನ್ನಾಗಿ ಬಿಡು. ನಂತರ ನೀನು ಅಪೇಕ್ಷಿಸಿದ್ದನ್ನೆಲ್ಲಾ ಕೊಡುತ್ತೇನೆ” ಎಂದು ಹೇಳಿದನು. ಆಗ ಅಶ್ಶೂರದ ರಾಜನು ಯೆಹೂದದ ರಾಜನಾದ ಹಿಜ್ಕೀಯನಿಗೆ ಸುಮಾರು ಹನ್ನೊಂದು ಟನ್ ಬೆಳ್ಳಿಯನ್ನು ಮತ್ತು ಒಂದು ಟನ್ ಚಿನ್ನವನ್ನು ಕೊಡುವಂತೆ ಹೇಳಿದನು.


ಜೆರುಸಲೇಮೇ, ನೀನು ಐಶ್ವರ್ಯವಂತಳಾಗಿರುವೆ. ನೀನು ದೇವರ ವಿಷಯವಾದ ಜ್ಞಾನ, ತಿಳುವಳಿಕೆ ಮತ್ತು ರಕ್ಷಣೆಗಳಿಂದ ಐಶ್ವರ್ಯವಂತಳಾಗಿರುವೆ. ಯೆಹೋವನ ಮೇಲೆ ನಿನಗಿರುವ ಗೌರವವೇ ನಿನ್ನ ಭಂಡಾರವಾಗಿದೆ. ನೀನು ಹೀಗೆಯೇ ಮುಂದುವರಿಯುವೆ.


ನೀನು ನಿನ್ನ ಶಕ್ತಿಯಲ್ಲಿಯೂ ಯುದ್ಧದ ತಂತ್ರೋಪಾಯಗಳ ಮೇಲೆಯೂ ಭರವಸವಿಟ್ಟಿದ್ದರೆ ಅವು ಕೇವಲ ನಿಷ್ಪ್ರಯೋಜಕವಾಗಿವೆ; ಕೇವಲ ಬಡಾಯಿ ಕೊಚ್ಚಿಕೊಳ್ಳುತ್ತಿರುವೆ? ನೀನು ನನ್ನ ವಿರುದ್ಧ ದಂಗೆ ಏಳಬೇಕಾದರೆ ಯಾರ ಮೇಲೆ ಭರವಸವಿಟ್ಟಿರುವೆ?


ಯೆಹೂದ್ಯರು ಯುದ್ಧಮಾಡುವಾಗ ಯೆಹೋವನು ಅವರ ಸಂಗಡ ಇದ್ದುದರಿಂದ ಅವರು ಬೆಟ್ಟಪ್ರದೇಶವನ್ನೆಲ್ಲಾ ಸ್ವಾಧೀನಪಡಿಸಿಕೊಂಡರು. ಆದರೆ ಕಣಿವೆಯಲ್ಲಿ ವಾಸ ಮಾಡುತ್ತಿದ್ದ ಜನರಲ್ಲಿ ಕಬ್ಬಿಣದ ರಥಗಳಿದ್ದದರಿಂದ ಯೆಹೂದ್ಯರು ಅವರನ್ನು ಸೋಲಿಸಲಾಗಲಿಲ್ಲ.


ಅಶ್ಶೂರದ ರಾಜನಾದ ಶಲ್ಮನೆಸರನು ಹೋಶೇಯನ ವಿರುದ್ಧ ಯುದ್ಧಕ್ಕೆ ಬಂದನು. ಶಲ್ಮನೆಸರನು ಹೋಶೇಯನನ್ನು ಸೋಲಿಸಿದನು. ಆದ್ದರಿಂದ ಹೋಶೇಯನು ಶಲ್ಮನೆಸರನಿಗೆ ಸೇವಕನಾಗಿ ಕಪ್ಪಕಾಣಿಕೆಯನ್ನು ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು