2 ಅರಸುಗಳು 18:8 - ಪರಿಶುದ್ದ ಬೈಬಲ್8 ಹಿಜ್ಕೀಯನು ಗಾಜಾ ಪ್ರಾಂತ್ಯದವರೆಗಿದ್ದ ಮತ್ತು ಅದರ ಸುತ್ತಲಿನ ಪ್ರದೇಶದಲ್ಲಿದ್ದ ಫಿಲಿಷ್ಟಿಯರನ್ನು ಸೋಲಿಸಿದನು. ಅವನು ಫಿಲಿಷ್ಟಿಯರ ಚಿಕ್ಕ ಊರಿನಿಂದಿಡಿದು ದೊಡ್ಡ ನಗರಗಳನ್ನೆಲ್ಲಾ ಸೋಲಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಗಾಜ ಪ್ರಾಂತ್ಯದವರೆಗೆ ವಾಸವಾಗಿದ್ದ ಫಿಲಿಷ್ಟಿಯರನ್ನು ಸೋಲಿಸಿ, ಕಾವಲುಗಾರರ ಗೋಪುರ ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಚಿಕ್ಕಗ್ರಾಮ ಮೊದಲುಗೊಂಡು ಮಹಾನಗರಗಳವರೆಗೂ ಎಲ್ಲಾ ಊರುಗಳನ್ನು ನಾಶಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಗಾಜಪ್ರಾಂತ್ಯದವರೆಗೆ ವಾಸವಾಗಿದ್ದ ಫಿಲಿಷ್ಟಿಯರನ್ನು ಸೋಲಿಸಿ ಕಾವಲುಗಾರರ ಗೋಪುರವಿದ್ದ ಚಿಕ್ಕ ಹಳ್ಳಿ ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಮಹಾನಗರಗಳವರೆಗೂ ಎಲ್ಲಾ ಊರುಗಳನ್ನು ಹಾಳುಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಗಾಜಪ್ರಾಂತದವರೆಗೆ ವಾಸವಾಗಿದ್ದ ಫಿಲಿಷ್ಟಿಯರನ್ನು ಸೋಲಿಸಿ ಕಾವಲುಗಾರರ ಬುರುಜಿರುವ ಚಿಕ್ಕ ಹಳ್ಳಿ ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಮಹಾನಗರಗಳವರೆಗೂ ಎಲ್ಲಾ ಊರುಗಳನ್ನು ಹಾಳುಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅವರು ಕಾವಲು ಗೋಪುರದಿಂದ ಕೋಟೆಯುಳ್ಳ ಪಟ್ಟಣಗಳವರೆಗೂ ಫಿಲಿಷ್ಟಿಯರನ್ನು ಗಾಜಪ್ರಾಂತ್ಯದವರೆಗೆ ಸಂಹರಿಸಿದನು. ಅಧ್ಯಾಯವನ್ನು ನೋಡಿ |
ಮರುಭೂಮಿಯಲ್ಲಿಯೂ ಬುರುಜುಗಳನ್ನು ಕಟ್ಟಿಸಿದನು; ಅನೇಕ ಬಾವಿಗಳನ್ನು ತೋಡಿಸಿದನು. ಅವನಿಗೆ ಬಯಲಿನಲ್ಲಿಯೂ ಬೆಟ್ಟಪ್ರದೇಶಗಳಲ್ಲಿಯೂ ಅಸಂಖ್ಯಾತ ಪಶುಗಳಿದ್ದವು. ಪರ್ವತ ಪ್ರಾಂತ್ಯಗಳಲ್ಲಿ ಮತ್ತು ಬೇರೆ ಸ್ಥಳಗಳಲ್ಲಿ ಹುಲುಸಾದ ಬೆಳೆಯನ್ನು ಬೆಳೆಯಿಸಿದನು. ಬಯಲುಗಳಲ್ಲಿ ಕೆಲಸಮಾಡಲು ಅವನು ರೈತರನ್ನು ಕೂಲಿಗೆ ನೇಮಿಸಿಕೊಂಡನು; ಬೆಟ್ಟಗಳಲ್ಲಿಯೂ ಕಾರ್ಮೆಲಿನಲ್ಲಿಯೂ ಇದ್ದ ತನ್ನ ದ್ರಾಕ್ಷಿತೋಟಗಳನ್ನು ನೋಡಿಕೊಳ್ಳಲು ಕೆಲಸಗಾರರನ್ನು ಕೂಲಿಗೆ ತೆಗೆದುಕೊಂಡನು.
ಯೆಹೂದದ ಅರಸನಾಗಿದ್ದ ಹಿಜ್ಕೀಯನ ಕಾಲದಲ್ಲಿ ಇದು ಆಯಿತು. ಇವರು ಗೆದೋರಿಗೆ ಬಂದು ಹಾಮನ ಸಂತತಿಯವರೊಂದಿಗೆ ಯುದ್ಧಮಾಡಿ ಅವರ ಗುಡಾರಗಳನ್ನು ನಾಶಮಾಡಿದರು. ಅಲ್ಲದೆ ಮೆಗೂನ್ಯರ ವಿರುದ್ಧವಾಗಿ ಯುದ್ಧಮಾಡಿ ಅಲ್ಲಿ ನೆಲೆಸಿದರು. ಇವರು ಮೆಗೂನ್ಯರನ್ನೆಲ್ಲಾ ನಾಶಮಾಡಿದರು. ಇಂದಿನವರೆಗೂ ಮೆಗೂನ್ಯರಲ್ಲಿ ಯಾರೂ ಉಳಿದಿಲ್ಲ. ಹೀಗೆ ಆ ಸ್ಥಳದಲ್ಲಿ ಅವರು ನೆಲೆಸಿದರು; ಯಾಕೆಂದರೆ ಅವರ ಪಶುಗಳಿಗೆ ಅಲ್ಲಿ ಸಾಕಷ್ಟು ಹುಲ್ಲಿತ್ತು.