2 ಅರಸುಗಳು 19:1 - ಪರಿಶುದ್ದ ಬೈಬಲ್1 ರಾಜನಾದ ಹಿಜ್ಕೀಯನು ಅವುಗಳನ್ನೆಲ್ಲ ಕೇಳಿ ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಕಟ್ಟಿಕೊಂಡು ಯೆಹೋವನ ಆಲಯದೊಳಕ್ಕೆ ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅರಸನಾದ ಹಿಜ್ಕೀಯನು ಅದನ್ನು ಕೇಳಿ, ಬಟ್ಟೆಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಕಟ್ಟಿಕೊಂಡು ಯೆಹೋವನ ಆಲಯಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಈ ವರದಿಯನ್ನು ಕೇಳಿದ ಹಿಜ್ಕೀಯನು ಕೋಪದಿಂದ ತನ್ನ ಬಟ್ಟೆಯನ್ನು ಹರಿದುಕೊಂಡು, ಗೋಣಿತಟ್ಟನ್ನು ಕಟ್ಟಿಕೊಂಡು ಸರ್ವೇಶ್ವರನ ಆಲಯಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಹಿಜ್ಕೀಯನು ಅದನ್ನು ಕೇಳಿ ಬಟ್ಟೆಗಳನ್ನು ಹರಿದುಕೊಂಡು ಗೋಣೀತಟ್ಟನ್ನು ಕಟ್ಟಿಕೊಂಡು ಯೆಹೋವನ ಆಲಯಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ, ತನ್ನ ಬಟ್ಟೆಗಳನ್ನು ಹರಿದುಕೊಂಡು, ಗೋಣಿ ತಟ್ಟಿನಿಂದ ತನ್ನನ್ನು ಮುಚ್ಚಿಕೊಂಡು, ಯೆಹೋವ ದೇವರ ಆಲಯಕ್ಕೆ ಹೋದನು. ಅಧ್ಯಾಯವನ್ನು ನೋಡಿ |
ಯೇಸು ಹೇಳಿದ್ದೇನೆಂದರೆ: “ಖೊರಾಜಿನೇ, ನಿನ್ನ ಗತಿಯನ್ನು ಏನು ಹೇಳಲಿ? ಬೆತ್ಸಾಯಿದವೇ, ನಿನ್ನ ಗತಿಯನ್ನು ಏನು ಹೇಳಲಿ! ನಾನು ನಿಮ್ಮಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆನು. ಅದೇ ಅದ್ಭುತಕಾರ್ಯಗಳನ್ನು ಟೈರ್, ಸೀದೋನ್‌ಗಳಲ್ಲಿ ಮಾಡಿದ್ದರೆ, ಅವುಗಳ ಜನರು ಬಹಳ ಕಾಲದ ಹಿಂದೆಯೇ ತಮ್ಮ ಜೀವಿತವನ್ನು ಬದಲಾಯಿಸಿಕೊಳ್ಳುತ್ತಿದ್ದರು; ತಮ್ಮ ಪಾಪಗಳಿಗಾಗಿ ದುಃಖಪಟ್ಟು ಗೋಣಿತಟ್ಟನ್ನು ಕಟ್ಟಿಕೊಳ್ಳುತ್ತಿದ್ದರು; ಮೈಮೇಲೆ ಬೂದಿಯನ್ನು ಹಾಕಿಕೊಳ್ಳುತ್ತಿದ್ದರು.
ಇಸ್ರೇಲಿನ ರಾಜನು ಪತ್ರವನ್ನು ಓದಿದಾಗ, ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು, “ನಾನು ದೇವರೇನು? ಇಲ್ಲ! ಹುಟ್ಟು ಮತ್ತು ಸಾವುಗಳ ಮೇಲೆ ನನಗೆ ಯಾವ ಶಕ್ತಿಯೂ ಇಲ್ಲ. ಹೀಗಿರುವಾಗ ಅರಾಮ್ಯರ ರಾಜನು ಕುಷ್ಠರೋಗಪೀಡಿತನಾದ ಮನುಷ್ಯನನ್ನು ನನ್ನ ಬಳಿಗೆ ಗುಣಪಡಿಸಲು ಏಕೆ ಕಳುಹಿಸಿದನು? ಇದರ ಬಗ್ಗೆ ನೀವೇ ಯೋಚಿಸಿರಿ. ಇದು ಒಂದು ಕುತಂತ್ರವೆಂಬುದು ನಿಮಗೇ ತಿಳಿಯುತ್ತದೆ. ಅರಾಮ್ಯರ ರಾಜನು ಯುದ್ಧವನ್ನು ಆರಂಭಿಸಲು ಪ್ರಯತ್ನಿಸುತ್ತಿದ್ದಾನೆ!” ಎಂದು ಹೇಳಿದನು.