2 ಅರಸುಗಳು 19:10 - ಪರಿಶುದ್ದ ಬೈಬಲ್10 ಯೆಹೂದದ ರಾಜನಾದ ಹಿಜ್ಕೀಯನಿಗೆ ಇದನ್ನು ಹೇಳಿ: “ನೀನು ನಂಬುವ ದೇವರು ನಿನ್ನನ್ನು ಮೋಸಗೊಳಿಸಲು ಅವಕಾಶ ನೀಡಬೇಡ. ಅಶ್ಶೂರದ ರಾಜ ಜೆರುಸಲೇಮನ್ನು ಸೋಲಿಸುವುದಿಲ್ಲ ಎಂಬ ನಿನ್ನ ದೇವರ ಮಾತನ್ನು ನಂಬಬೇಡ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವರ ಮುಖಾಂತರ, “ಯೆಹೂದದ ಅರಸನಾದ ಹಿಜ್ಕೀಯನಿಗೆ, ‘ಯೆರೂಸಲೇಮನ್ನು ಅಶ್ಶೂರದ ಅರಸನಿಗೆ ಒಪ್ಪಿಸುವುದಿಲ್ಲವೆಂದು ನೀನು ನಂಬಿರುವ ನಿನ್ನ ದೇವರು ನಿನ್ನನ್ನು ಮೋಸಗೊಳಿಸದಿರಲಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 “ಜೆರುಸಲೇಮ್ ನನ್ನ ವಶವಾಗುವುದಿಲ್ಲವೆಂದು ನೀನು ನಂಬುವ ದೇವರು ನಿನಗೆ ಹೇಳಿ ನಿನ್ನನ್ನು ಮೋಸಗೊಳಿಸಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅವರ ಮುಖಾಂತರವಾಗಿ ಅವನಿಗೆ - ನೀನು ನಂಬುವ ದೇವರು - ನಾನು ಯೆರೂಸಲೇಮನ್ನು ಅಶ್ಶೂರದ ಅರಸನ ಕೈಗೆ ಒಪ್ಪಿಸುವದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ನೀವು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇನೆಂದರೆ: ನೀನು ನಂಬುವ ದೇವರು, ‘ಯೆರೂಸಲೇಮನ್ನು ಅಸ್ಸೀರಿಯದ ಅರಸನ ಕೈಯಲ್ಲಿ ಒಪ್ಪಿಸುವುದಿಲ್ಲ,’ ಎಂದು ಹೇಳಿ ನಿನ್ನನ್ನು ಮೋಸಗೊಳಿಸಾನು. ಅಧ್ಯಾಯವನ್ನು ನೋಡಿ |
ನಾನು ಬಂದು, ನಿಮ್ಮನ್ನು ಈ ದೇಶಕ್ಕೆ ಸಮಾನವಾದ ಬೇರೊಂದು ದೇಶಕ್ಕೆ ಕರೆದೊಯ್ಯುವವರೆಗೆ ನೀವು ಹೀಗೆ ಮಾಡಬಹುದು. ಆ ದೇಶವು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ, ಆಲೀವ್ ಮರ ಮತ್ತು ಜೇನುತುಪ್ಪ ಮುಂತಾದವುಗಳಿಂದ ಸಮೃದ್ಧಿಯಾಗಿದೆ. ನೀವು ಅಲ್ಲಿ ಸಾಯದೆ ಜೀವಿಸಬಹುದು. ಆದರೆ ಹಿಜ್ಕೀಯನ ಮಾತುಗಳನ್ನು ಕೇಳಬೇಡಿ! ಅವನು ನಿಮ್ಮ ಮನಸ್ಸನ್ನು ಬದಲಾಯಿಸಲು ಪ್ರಯತ್ನಿಸುತ್ತಿದ್ದಾನೆ. “ಯೆಹೋವನು ನಮ್ಮನ್ನು ರಕ್ಷಿಸುತ್ತಾನೆ” ಎಂದು ಅವನು ಹೇಳುತ್ತಾನೆ.