2 ಅರಸುಗಳು 19:12 - ಪರಿಶುದ್ದ ಬೈಬಲ್12 ಆ ರಾಜ್ಯಗಳ ದೇವರುಗಳು ತಮ್ಮ ಜನರನ್ನು ರಕ್ಷಿಸಲಾಗಲಿಲ್ಲ. ನನ್ನ ಪೂರ್ವಿಕರು ಅವರನ್ನೆಲ್ಲ ನಾಶಗೊಳಿಸಿದರು. ಅವರು ಗೋಜಾನ್, ಖಾರಾನ್, ರೆಚೆಫ್ ಮತ್ತು ತೆಲಸ್ಸಾರ್‌ನ ಎದೆನಿನ ಜನರನ್ನು ನಾಶಗೊಳಿಸಿದರು! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನನ್ನ ಪೂರ್ವಿಕರು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣಗಳ ಜನರನ್ನೂ ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನೂ ನಾಶಮಾಡುವುದಕ್ಕೆ ಹೋದಾಗ ಅವರ ದೇವತೆಗಳು ಅವರನ್ನು ಕಾಪಾಡಿದವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನನ್ನ ತಂದೆತಾತಂದಿರು ಗೋಜಾನ್, ಖಾರನ್, ರೆಚೆಫ್ ಎಂಬ ನಗರಗಳ ಜನರನ್ನು ಮತ್ತು ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನು ನಾಶಮಾಡಿದರು. ಆಗ ಅವರ ದೇವರುಗಳು ಅವರನ್ನು ರಕ್ಷಿಸಲಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನನ್ನ ತಂದೆ ತಾತಂದಿರು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣಗಳ ಜನರನ್ನೂ ತೆಲಸ್ಸಾರ್ ಪ್ರಾಂತದಲ್ಲಿರುವ ಎದೆನಿನ ಜನರನ್ನೂ ನಾಶಮಾಡುವದಕ್ಕೆ ಹೋದಾಗ ಅವರ ದೇವತೆಗಳು ಅವರನ್ನು ಕಾಪಾಡಿದವೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನನ್ನ ಪಿತೃಗಳು ಹಾಳುಮಾಡಿದ ಗೋಜಾನ್, ಹಾರಾನ್, ರೆಜೆಫ್ ಮುಂತಾದ ದೇವರುಗಳು ಅವರನ್ನು ಬಿಡುಗಡೆ ಮಾಡಲಿಲ್ಲ. ತೆಲ್ ಅಸ್ಸಾರ್ ಎಂಬಲ್ಲಿದ್ದ ಏದೆನಿನ ಜನರನ್ನು ಈ ದೇವರುಗಳು ಅವರನ್ನು ರಕ್ಷಿಸಲು ಸಾಧ್ಯವಾಯಿತೇ? ಅಧ್ಯಾಯವನ್ನು ನೋಡಿ |
ಇಸ್ರೇಲರ ದೇವರು ಅಶ್ಯೂರದ ರಾಜನಾದ ಪೂಲ್ (ತಿಗ್ಲತ್ಪಿಲೆಸರ್) ಅವರ ಮೇಲೆ ಯುದ್ಧಕ್ಕೆ ಹೋಗುವಂತೆ ಮಾಡಿದನು. ಅವರು ಬಂದು ರೂಬೇನ್, ಗಾದ್ ಮತ್ತು ಮನಸ್ಸೆಯ ಅರ್ಧ ಕುಲದವರೊಂದಿಗೆ ಯುದ್ಧ ಮಾಡಿದರು. ಯುದ್ಧದಲ್ಲಿ ಅವರನ್ನು ಸೋಲಿಸಿ, ಸೆರೆಹಿಡಿದು ಹಲಹ, ಹಾಬೋರ್, ಹಾರ ಮತ್ತು ಗೋಜಾನ್ ನದಿಯ ಸಮೀಪದ ಸ್ಥಳಕ್ಕೆ ಕೈದಿಗಳನ್ನಾಗಿ ಕೊಂಡೊಯ್ದರು. ಅಂದಿನಿಂದ ಇಂದಿನ ತನಕವೂ ಇಸ್ರೇಲರು ಆ ಸ್ಥಳಗಳಲ್ಲಿ ವಾಸಮಾಡುತ್ತಿರುವರು.