2 ಅರಸುಗಳು 19:13 - ಪರಿಶುದ್ದ ಬೈಬಲ್13 ಹಮಾತಿನ ರಾಜನು ಎಲ್ಲಿದ್ದಾನೆ? ಅರ್ಪಾದ್‌ನ ರಾಜನೆಲ್ಲಿ? ಸೆಫರ್ವಯಿಮ್ ರಾಜನೆಲ್ಲಿ? ಹೇನ ಮತ್ತು ಇವ್ವಾಗಳ ರಾಜರೆಲ್ಲಿ?” (ಅವರೆಲ್ಲರೂ ಹತರಾದರು!) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರು? ಎಂದು ನಿನಗೆ ತಿಳಿಯದೋ ಎಂದು ಪತ್ರವನ್ನು ದೂತರ ಮೂಲಕ ಕಳುಹಿಸಿದ.’” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ್ ಮತ್ತು ಇವ್ವಾ ಎಂಬ ನಗರಗಳ ಅರಸರ ಗತಿ ಏನಾಯಿತು?” ಎಂದು ಪತ್ರ ಬರೆದು ದೂತರ ಸಮೇತ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರು ಎಂದು ಹೇಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ, ಎಂಬ ಪಟ್ಟಣಗಳ ಅರಸರು ಏನಾದರು ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ,” ಎಂದು ಪತ್ರ ಬರೆದು ದೂತರ ಮುಖಾಂತರ ಕಳುಹಿಸಿದನು. ಅಧ್ಯಾಯವನ್ನು ನೋಡಿ |
ಆದರೆ ಬಾಬಿಲೋನಿನ ಸೈನಿಕರು ಚಿದ್ಕೀಯ ಮತ್ತು ಅವನ ಸೈನಿಕರನ್ನು ಬೆನ್ನಟ್ಟಿದರು. ಕಸ್ದೀಯರ ಸೈನಿಕರು ಜೆರಿಕೊವಿನ ಬಯಲಿನಲ್ಲಿ ಚಿದ್ಕೀಯನನ್ನು ಬಂಧಿಸಿ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಲ್ಲಿಗೆ ತೆಗೆದುಕೊಂಡು ಹೋದರು. ಆಗ ನೆಬೂಕದ್ನೆಚ್ಚರನು ಹಮಾತ್ ಸೀಮೆಯ “ರಿಬ್ಲ”ದಲ್ಲಿದ್ದನು. ಆ ಸ್ಥಳದಲ್ಲಿಯೇ ನೆಬೂಕದ್ನೆಚ್ಚರನು ಚಿದ್ಕೀಯನ ಬಗ್ಗೆ ತನ್ನ ನಿರ್ಣಯವನ್ನು ಪ್ರಕಟಿಸಿದನು.