2 ಅರಸುಗಳು 19:17 - ಪರಿಶುದ್ದ ಬೈಬಲ್17 ಯೆಹೋವನೇ, ಅಶ್ಶೂರದ ರಾಜರು ಆ ರಾಜ್ಯಗಳನ್ನೆಲ್ಲ ನಾಶಗೊಳಿಸಿದ್ದು ನಿಜ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಯೆಹೋವನೇ, ಅಶ್ಶೂರದ ಅರಸರು ದೇಶಗಳನ್ನೂ ಜನಾಂಗಗಳನ್ನೂ ಹಾಳುಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಸರ್ವೇಶ್ವರಾ, ಅಸ್ಸೀರಿಯದ ರಾಜರು ಸಕಲ ರಾಷ್ಟ್ರಗಳನ್ನೂ ಹಾಗೂ ಅವರ ನಾಡುಗಳನ್ನೂ ಹಾಳುಮಾಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಯೆಹೋವನೇ, ಅಶ್ಶೂರದ ಅರಸರು ದೇಶಜನಾಂಗಗಳನ್ನು ಹಾಳುಮಾಡಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ಯೆಹೋವ ದೇವರೇ, ಅಸ್ಸೀರಿಯದ ಅರಸರು ಜನಾಂಗಗಳನ್ನೂ ಅವರ ದೇಶಗಳನ್ನೂ ಹಾಳು ಮಾಡಿ, ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ. ಅಧ್ಯಾಯವನ್ನು ನೋಡಿ |
ಇಸ್ರೇಲರ ದೇವರು ಅಶ್ಯೂರದ ರಾಜನಾದ ಪೂಲ್ (ತಿಗ್ಲತ್ಪಿಲೆಸರ್) ಅವರ ಮೇಲೆ ಯುದ್ಧಕ್ಕೆ ಹೋಗುವಂತೆ ಮಾಡಿದನು. ಅವರು ಬಂದು ರೂಬೇನ್, ಗಾದ್ ಮತ್ತು ಮನಸ್ಸೆಯ ಅರ್ಧ ಕುಲದವರೊಂದಿಗೆ ಯುದ್ಧ ಮಾಡಿದರು. ಯುದ್ಧದಲ್ಲಿ ಅವರನ್ನು ಸೋಲಿಸಿ, ಸೆರೆಹಿಡಿದು ಹಲಹ, ಹಾಬೋರ್, ಹಾರ ಮತ್ತು ಗೋಜಾನ್ ನದಿಯ ಸಮೀಪದ ಸ್ಥಳಕ್ಕೆ ಕೈದಿಗಳನ್ನಾಗಿ ಕೊಂಡೊಯ್ದರು. ಅಂದಿನಿಂದ ಇಂದಿನ ತನಕವೂ ಇಸ್ರೇಲರು ಆ ಸ್ಥಳಗಳಲ್ಲಿ ವಾಸಮಾಡುತ್ತಿರುವರು.