2 ಅರಸುಗಳು 19:18 - ಪರಿಶುದ್ದ ಬೈಬಲ್18 ಅವರು ಆ ದೇಶಗಳ ದೇವರುಗಳನ್ನು ಬೆಂಕಿಯಲ್ಲಿ ಎಸೆದರು. ಆದರೆ ಅವು ನಿಜವಾದ ದೇವರುಗಳಲ್ಲ. ಅವುಗಳು ಮಾನವರಿಂದ ಮರ ಮತ್ತು ಕಲ್ಲುಗಳಿಂದ ನಿರ್ಮಿತವಾಗಿದ್ದವು. ಆದಕಾರಣವೇ ಅಶ್ಶೂರದ ರಾಜರುಗಳು ಅವುಗಳನ್ನು ನಾಶಗೊಳಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ. ಅವು ದೇವತೆಗಳಲ್ಲ. ಮನುಷ್ಯರು ಕೆತ್ತಿದ ಕಲ್ಲು ಮತ್ತು ಮರಗಳ ಬೊಂಬೆಗಳಷ್ಟೇ. ಆದುದರಿಂದ ಅವುಗಳನ್ನು ಹಾಳುಮಾಡುವುದು ಅವರಿಗೆ ಸಾಧ್ಯವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅವರ ದೇವರುಗಳನ್ನೂ ಬೆಂಕಿಗೆ ಹಾಕಿದ್ದು ನಿಜ. ಅವು ದೇವರುಗಳಲ್ಲ, ಕೇವಲ ಮನುಷ್ಯರು ಕೆತ್ತಿದ ಕಲ್ಲುಮರಗಳ ಬೊಂಬೆಗಳಷ್ಟೆ. ಆದುದರಿಂದಲೇ ಅವು ಅವರಿಂದ ಹಾಳಾದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ. ಅವು ದೇವತೆಗಳಲ್ಲ, ಮನುಷ್ಯರು ಕೆತ್ತಿದ ಕಲ್ಲು ಮರಗಳ ಬೊಂಬೆಗಳಷ್ಟೆ; ಆದದರಿಂದಲೇ ಅವುಗಳನ್ನು ಹಾಳು ಮಾಡುವದು ಅವರಿಗೆ ಸಾಧ್ಯವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅವು ದೇವರುಗಳಲ್ಲ, ಕೇವಲ ಮನುಷ್ಯರು ಕೆತ್ತಿದ ಕಲ್ಲುಮರಗಳಷ್ಟೆ, ಆದ್ದರಿಂದಲೇ ಅವರು ಅವುಗಳನ್ನು ನಾಶಮಾಡಿದ್ದಾರೆ. ಅಧ್ಯಾಯವನ್ನು ನೋಡಿ |