2 ಅರಸುಗಳು 19:23 - ಪರಿಶುದ್ದ ಬೈಬಲ್23 ನೀನು ಯೆಹೋವನನ್ನು ನಿಂದಿಸಲು ನಿನ್ನ ಸಂದೇಶಕರನ್ನು ಬಳಸಿದೆ, ‘ನಾನು ನನ್ನ ಅನೇಕ ರಥಗಳೊಂದಿಗೆ ಉನ್ನತಗಿರಿಗಳಿಗೆ ಬಂದೆನು. ನಾನು ಲೆಬನೋನಿನ ದುರ್ಗಮ ಸ್ಥಳಗಳಿಗೆ ಹೋದೆನು. ನಾನು ಲೆಬನೋನಿನ ಎತ್ತರವಾದ ದೇವದಾರು ಮರಗಳನ್ನೂ ಲೆಬನೋನಿನ ಉತ್ತಮ ತುರಾಯಿಮರಗಳನ್ನೂ ಕಡಿದುರುಳಿಸಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನೀನು ನಿನ್ನ ದೂತರ ಮುಖಾಂತರವಾಗಿ ಕರ್ತನನ್ನು ನಿಂದಿಸಿ, ರಥಸಮೂಹದೊಡನೆ ಪರ್ವತಶಿಖರಗಳನ್ನು ಹತ್ತಿದ್ದೇನೆ. ಲೆಬನೋನಿನ ದುರ್ಗಮಸ್ಥಳಗಳಿಗೆ ಹೋಗಿದ್ದೇನೆ. ಅದರ ಎತ್ತರವಾದ ದೇವದಾರುವೃಕ್ಷಗಳನ್ನೂ ಶ್ರೇಷ್ಠವಾದ ತುರಾಯಿಮರಗಳನ್ನೂ ಕಡಿದುಬಿಟ್ಟಿದ್ದೇನೆ. ಅಲ್ಲಿನ ಬಹು ದೂರ ನಿವಾಸಸ್ಥಳಗಳನ್ನೂ, ಉದ್ಯಾನವನಗಳನ್ನೂ ಪ್ರವೇಶಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ನೀನು ನಿನ್ನ ದೂತರ ಮೂಲಕ ಸರ್ವೇಶ್ವರನನ್ನು ನಿಂದಿಸಿರುವೆ, ಅಲ್ಲದೆ ಈ ಮಾತುಗಳನ್ನಾಡಿ ಜಂಬಕೊಚ್ಚಿಕೊಂಡಿರುವೆ: ‘ಹತ್ತಿದ್ದೇನೆ ಗಿರಿಶಿಖರಗಳನ್ನು ರಥಸಮೂಹದೊಡನೆ ಸೇರಿದ್ದೇನೆ ಲೆಬನೋನಿನ ದುರ್ಗಮ ಸ್ಥಳಗಳನ್ನೇ! ಕಡಿದಿದ್ದೇನೆ ಅದರ ಎತ್ತರವಾದ ದೇವದಾರು ವೃಕ್ಷಗಳನ್ನೇ ಕತ್ತರಿಸಿದ್ದೇನೆ ಅದರ ಶ್ರೇಷ್ಠವಾದ ತುರಾಯಿ ಮರಗಳನ್ನೇ ಒಳಹೊಕ್ಕಿದ್ದೇನೆ ಅಲ್ಲಿನ ದೂರದ ನಿವಾಸಸ್ಥಳಗಳನ್ನೇ, ಶಿಖರವನ್ನೇ, ಪ್ರವೇಶಿಸಿದ್ದೇನೆ ದಟ್ಟವಾದ ಆ ಕಾಡು ಮೇಡುಗಳನ್ನೇ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನೀನು ನಿನ್ನ ದೂತರ ಮುಖಾಂತರವಾಗಿ ಕರ್ತನನ್ನು ನಿಂದಿಸಿ - ನನ್ನ ರಥಸಮೂಹದೊಡನೆ ಪರ್ವತ ಶಿಖರಗಳನ್ನು ಹತ್ತಿದ್ದೇನೆ; ಲೆಬನೋನಿನ ದುರ್ಗಮಸ್ಥಳಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರುವೃಕ್ಷಗಳನ್ನೂ ಶ್ರೇಷ್ಠವಾದ ತುರಾಯಿಮರಗಳನ್ನೂ ಕಡಿದುಬಿಟ್ಟಿದ್ದೇನೆ; ಅಲ್ಲಿನ ಬಹುದೂರ ನಿವಾಸಸ್ಥಳವನ್ನೂ ಉದ್ಯಾನ ವನಗಳನ್ನೂ ಪ್ರವೇಶಿಸಿದ್ದೇನೆ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ನೀನು ನಿನ್ನ ದೂತರ ಮುಖಾಂತರ ಯೆಹೋವ ದೇವರನ್ನು ನಿಂದಿಸಿರುವೆ. ಇದಲ್ಲದೆ ನೀನು ಈ ಮಾತುಗಳನ್ನಾಡಿ ಜಂಬಕೊಚ್ಚಿಕೊಂಡಿದ್ದೀ, “ನಾನು ನನ್ನ ರಥಸಮೂಹದೊಡನೆ ಪರ್ವತಗಳ ಶಿಖರಗಳನ್ನು ಹತ್ತಿದ್ದೇನೆ, ಲೆಬನೋನಿನ ಎತ್ತರಗಳಿಗೆ ಹೋಗಿದ್ದೇನೆ. ಅದರ ಉನ್ನತವಾದ ದೇವದಾರುಗಳನ್ನೂ, ಅತ್ಯುತ್ತಮ ತುರಾಯಿ ಮರಗಳನ್ನೂ ಕಡಿದುಹಾಕಿದ್ದೇನೆ. ಅದರ ಅಂಚಿನ ಗಡಿಸ್ಥಳಗಳಲ್ಲಿಯೂ, ಅದರ ಫಲಭರಿತ ಅಡವಿಯಲ್ಲಿಯೂ ಪ್ರವೇಶಿಸಿದ್ದೇನೆ. ಅಧ್ಯಾಯವನ್ನು ನೋಡಿ |
ಒಬ್ಬನು ಹಕ್ಕಿಯ ಗೂಡಿನಿಂದ ಮೊಟ್ಟೆಗಳನ್ನು ತೆಗೆಯುವಂತೆ ನಾನು ಅವರ ಐಶ್ವರ್ಯವನ್ನು ತೆಗೆದುಕೊಂಡಿರುವೆನು. ಹಕ್ಕಿಯು ತನ್ನ ಗೂಡಿಗೆ ಯಾವ ಭದ್ರತೆಯನ್ನೂ ಮಾಡದೆ ಆಹಾರಕ್ಕಾಗಿ ಹೋಗುವದು, ರೆಕ್ಕೆಯಾಡಿಸಿ, ಬಾಯಿದೆರೆದು, ಕಿಚುಗುಟ್ಟಿ ಮೊಟ್ಟೆಯನ್ನು ಶತ್ರುವಿನಿಂದ ರಕ್ಷಿಸಲು ಅದು ಗೂಡಿನಲ್ಲಿರದು, ಆದ್ದರಿಂದ ಅದರ ಮೊಟ್ಟೆಗಳು ತೆಗೆಯಲ್ಪಡುವವು. ಅದೇ ರೀತಿಯಲ್ಲಿ ನಾನು ಭೂಮಿಯ ಮೇಲಿನ ಜನರನ್ನು ಕೈದಿಗಳನ್ನಾಗಿ ಮಾಡುವಾಗ ನನ್ನನ್ನು ತಡೆಯುವವರು ಇಲ್ಲವೇ ಇಲ್ಲ.”
ಮರುಭೂಮಿಯಲ್ಲಿಯೂ ಬುರುಜುಗಳನ್ನು ಕಟ್ಟಿಸಿದನು; ಅನೇಕ ಬಾವಿಗಳನ್ನು ತೋಡಿಸಿದನು. ಅವನಿಗೆ ಬಯಲಿನಲ್ಲಿಯೂ ಬೆಟ್ಟಪ್ರದೇಶಗಳಲ್ಲಿಯೂ ಅಸಂಖ್ಯಾತ ಪಶುಗಳಿದ್ದವು. ಪರ್ವತ ಪ್ರಾಂತ್ಯಗಳಲ್ಲಿ ಮತ್ತು ಬೇರೆ ಸ್ಥಳಗಳಲ್ಲಿ ಹುಲುಸಾದ ಬೆಳೆಯನ್ನು ಬೆಳೆಯಿಸಿದನು. ಬಯಲುಗಳಲ್ಲಿ ಕೆಲಸಮಾಡಲು ಅವನು ರೈತರನ್ನು ಕೂಲಿಗೆ ನೇಮಿಸಿಕೊಂಡನು; ಬೆಟ್ಟಗಳಲ್ಲಿಯೂ ಕಾರ್ಮೆಲಿನಲ್ಲಿಯೂ ಇದ್ದ ತನ್ನ ದ್ರಾಕ್ಷಿತೋಟಗಳನ್ನು ನೋಡಿಕೊಳ್ಳಲು ಕೆಲಸಗಾರರನ್ನು ಕೂಲಿಗೆ ತೆಗೆದುಕೊಂಡನು.