2 ಅರಸುಗಳು 19:24 - ಪರಿಶುದ್ದ ಬೈಬಲ್24 ನಾನು ಬಾವಿಗಳನ್ನು ತೋಡಿ ಹೊಸ ಸ್ಥಳಗಳಲ್ಲಿ ನೀರು ಕುಡಿದೆನು. ನಾನು ಈಜಿಪ್ಟಿನ ನದಿಗಳನ್ನು ಬತ್ತಿಸಿದ್ದೇನೆ; ಆ ದೇಶದ ಮೇಲೆಲ್ಲಾ ನಡೆದಾಡಿದ್ದೇನೆ’ ಎಂದು ನೀನು ಹೇಳಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ನಾನು ಅನ್ಯದೇಶದಲ್ಲಿ ಬಾವಿಗಳನ್ನು ಅಗೆದು ನೀರು ತೆಗೆದು ಕುಡಿದಿದ್ದೇನೆ! ನನ್ನ ಪಾದಗಳಿಂದ ಐಗುಪ್ತದ ಎಲ್ಲಾ ನದಿಗಳನ್ನು ಬತ್ತಿಸಿದ್ದೇನೆ ಎಂಬುದಾಗಿ ನೀನು ಕೊಚ್ಚಿಕೊಂಡಿದ್ದೀಯಲ್ಲವೇ?” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಪರನಾಡುಗಳಲ್ಲಿ ಬಾವಿ ತೋಡಿ ನೀರು ಕುಡಿದಿದ್ದೇನೆ, ನನ್ನ ಅಂಗಾಲಿನಿಂದಲೇ ಈಜಿಪ್ಟಿನ ನದಿಗಳನ್ನೆಲ್ಲಾ ಬತ್ತಿಸಿದ್ದೇನೆ!’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಪರದೇಶಗಳಲ್ಲಿ ಅಗೆದು ನೀರುತೆಗೆದು ಕುಡಿದಿದ್ದೇನೆ; ನನ್ನ ಪಾದಗಳಿಂದ ಐಗುಪ್ತದ ಎಲ್ಲಾ ಹೊಳೆಗಳನ್ನು ಬತ್ತಿಸಿದ್ದೇನೆ ಎಂಬದಾಗಿ ನೀನು ಕೊಚ್ಚಿಕೊಂಡಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಪರದೇಶಗಳಲ್ಲಿ ನಾನು ಬಾವಿಗಳನ್ನು ಅಗೆದು, ನೀರು ಕುಡಿದಿದ್ದೇನೆ. ನನ್ನ ಅಂಗಾಲುಗಳಿಂದ ಈಜಿಪ್ಟಿನವರ ಎಲ್ಲಾ ನದಿಗಳನ್ನು ಬತ್ತಿಹೋಗುವಂತೆ ಮಾಡಿದ್ದೇನೆ.” ಅಧ್ಯಾಯವನ್ನು ನೋಡಿ |
ನಂತರ ಅವರು ಬೆನ್ಹದದನ ಮತ್ತೊಂದು ಸಂದೇಶದೊಂದಿಗೆ ಹಿಂದಿರುಗಿ ಬಂದರು. ಆ ಸಂದೇಶವು ಹೀಗಿತ್ತು: “ನಾನು ಸಮಾರ್ಯವನ್ನು ಸಂಪೂರ್ಣವಾಗಿ ನಾಶಗೊಳಿಸುತ್ತೇನೆ. ಆ ನಗರದಲ್ಲಿ ಏನನ್ನೂ ಉಳಿಸುವುದಿಲ್ಲವೆಂದು ನಾನು ಪ್ರಮಾಣ ಮಾಡುತ್ತೇನೆ. ನನ್ನ ಜನರು, ಆ ನಗರವನ್ನು ಕಂಡುಹಿಡಿಯಲಾಗದಂತೆ ಮತ್ತು ಮನೆಗೆ ತೆಗೆದುಕೊಂಡು ಹೋಗಲು ಒಂದು ಹಿಡಿ ಧೂಳೂ ಉಳಿಯದಂತೆ ಮಾಡಿಬಿಡುತ್ತಾರೆ. ನಾನು ಇದನ್ನು ಮಾಡದೆ ಹೋದರೆ ದೇವರು ನನ್ನನ್ನು ನಾಶಪಡಿಸಲಿ!”