Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 19:26 - ಪರಿಶುದ್ದ ಬೈಬಲ್‌

26 ನಗರಗಳಲ್ಲಿ ವಾಸಿಸುವ ಜನರು ಬಲವಿಲ್ಲದವರಾಗಿ ನಿರಾಶೆಯಿಂದ ಗಲಿಬಿಲಿಗೊಂಡರು. ಜನರು ಹೊಲಗಳಲ್ಲಿನ ಹುಲ್ಲಿನಂತೆಯೂ ಹಸಿರುಗಿಡಗಳಂತೆಯೂ ಮಾಳಿಗೆಯ ಮೇಲೆ ಒಣಗಿ ಹಾಳಾಗುವ ಹುಲ್ಲಿನಂತೆಯೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವುಗಳ ನಿವಾಸಿಗಳು ಬಲವಿಲ್ಲದವರಾಗಿ ಹೆದರಿ ಆಶಾಭಂಗಪಟ್ಟು ಕಳವಳಗೊಂಡರು; ಅವರು ಹೊಲದ ಗಿಡಕ್ಕೂ ಕಾಯಿ ಪಲ್ಯಕ್ಕೂ ಹಸಿರು ಹುಲ್ಲಿಗೂ, ಮನೆಯ ಮೇಲೆ ಬೆಳೆಯುವ ಹಾಗೂ, ಹೊಲದ ಹುಲ್ಲಿನ ಹಾಗೆ ಬೆಳೆಯುವುದಕ್ಕಿಂತ ಮೊದಲೇ ಸುಟ್ಟುಹೋದ ಪೈರಿಗೆ ಸಮಾನರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಬಲವಿಲ್ಲದವರಾದರು ಆ ನಗರವಾಸಿಗಳು ನನ್ನ ನಿಮಿತ್ತವೆ, ಸಮಾನರಾದರು ಹೊಲದ ಸಸಿಗೆ, ಎಳೆಗರಿಕೆಗೆ, ಮಾಳಿಗೆ ಮೇಲಿನ ಹುಲ್ಲಿಗೆ; ಬೆಳೆಯುವುದಕ್ಕೆ ಮೊದಲೆ ತುತ್ತಾದರು ಬಿರುಗಾಳಿಯ ಹೊಡೆತಕ್ಕೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವುಗಳ ನಿವಾಸಿಗಳು ಬಲವಿಲ್ಲದವರಾಗಿ ಆಶಾಭಂಗಪಟ್ಟು ಕಳವಳಗೊಂಡರು; ಅವರು ಹೊಲದ ಕಾಯಿಪಲ್ಯಕ್ಕೂ ಎಳೆಗರಿಕೆಗೂ ಮಾಳಿಗೆಯ ಮೇಲಣ ಹುಲ್ಲಿಗೂ ಹೊಡೆಹಾಯುವದಕ್ಕಿಂತ ಮೊದಲೇ ಒಣಗಿಹೋದ ಪೈರಿಗೂ ಸಮಾನರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆದ್ದರಿಂದ ಅವುಗಳ ನಿವಾಸಿಗಳು ಬಲಹೀನರಾಗಿ ಹೆದರಿ ಆಶಾಭಂಗಹೊಂದಿ ನಾಚಿಕೆಪಟ್ಟರು. ಅವರು ಹೊಲದ ಹುಲ್ಲಿನಂತೆಯೂ, ಹಸಿರು ಸಸಿಗಳಂತೆಯೂ, ಮಾಳಿಗೆಯ ಮೇಲಿನ ಹುಲ್ಲಿನಂತೆಯೂ, ಬೆಳೆಯುವುದಕ್ಕಿಂತ ಮುಂಚೆಯೇ ಬಾಡಿಹೋಗುವ ಪೈರಿನಂತೆಯೂ ಅವರಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 19:26
18 ತಿಳಿವುಗಳ ಹೋಲಿಕೆ  

ಪವಿತ್ರ ಗ್ರಂಥವು ಹೇಳುವುದೇನೆಂದರೆ, “ಜನರೆಲ್ಲರೂ ಹುಲ್ಲಿನಂತಿದ್ದಾರೆ. ಅವರ ವೈಭವವೆಲ್ಲವೂ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿಹೋಗುವುದು, ಹೂವು ಉದುರಿಹೋಗುವುದು,


ಹಾಯ್ಗಡಗಳನ್ನು ವಶಪಡಿಸಿಕೊಂಡಿದ್ದಾರೆ; ಜವುಗು ನೆಲವು ಉರಿಯುತ್ತಿದೆ. ಬಾಬಿಲೋನಿನ ಎಲ್ಲಾ ಸೈನಿಕರು ಅಂಜಿಕೊಂಡಿದ್ದಾರೆ.”


ಬಾಬಿಲೋನಿನ ಸೈನಿಕರು ಕಾದಾಡುವದನ್ನು ನಿಲ್ಲಿಸಿದ್ದಾರೆ. ಅವರು ತಮ್ಮ ಕೋಟೆಗಳಲ್ಲಿದ್ದಾರೆ. ಅವರ ಬಲ ನಷ್ಟವಾಗಿದೆ. ಅವರು ಭಯಪಟ್ಟ ಹೆಂಗಸಿನಂತಾಗಿದ್ದಾರೆ. ಬಾಬಿಲೋನಿನ ಮನೆಗಳು ಉರಿಯುತ್ತಿವೆ. ಅದರ ಬಾಗಿಲಿನ ಅಗುಳಿಗಳು ಮುರಿದುಹೋಗಿವೆ.


ಜೆರುಸಲೇಮಿನ ಜನರೇ, ನಿಮ್ಮ ಮೇಲೆ ಧಾಳಿ ಮಾಡುವ ಬಾಬಿಲೋನಿನ ಎಲ್ಲಾ ಸೈನಿಕರನ್ನು ನೀವು ಸೋಲಿಸಿದರೂ ಅವರ ಗುಡಾರದಲ್ಲಿ ಕೆಲವು ಜನ ಗಾಯಗೊಂಡವರು ಉಳಿದಿರುತ್ತಾರೆ. ಆ ಗಾಯಾಳುಗಳೇ ತಮ್ಮ ಗುಡಾರದಿಂದ ಹೊರಬಂದು ಜೆರುಸಲೇಮನ್ನು ಸುಟ್ಟುಹಾಕುವರು.’”


ಯೆಹೋವನು ಮನೆಯನ್ನು ಕಟ್ಟದಿದ್ದರೆ, ಕಟ್ಟುವವರ ಸಮಯವೆಲ್ಲಾ ವ್ಯರ್ಥ. ಯೆಹೋವನು ಪಟ್ಟಣವನ್ನು ಕಾಯದಿದ್ದರೆ, ಕಾವಲುಗಾರರ ಸಮಯವೆಲ್ಲಾ ವ್ಯರ್ಥ.


ನನ್ನ ಜೀವಮಾನವು ಸಂಜೆಯ ನೆರಳಿನಂತೆ ಕೊನೆಗೊಂಡಿದೆ. ನಾನು ಒಣಗಿ ಸಾಯುತ್ತಿರುವ ಹುಲ್ಲಿನಂತಿದ್ದೇನೆ.


ದುಷ್ಟರು ಹುಲ್ಲಿನಂತೆಯೂ ಕೆಡುಕರು ಹೂವಿನಂತೆಯೂ ಬದುಕಿ ಸಾಯುವರು. ಅವರ ನಿರರ್ಥಕ ಕಾರ್ಯಗಳು ನಿತ್ಯ ನಾಶವಾಗುತ್ತವೆ.


ಹೀಗಿರುವುದರಿಂದ ಯೆಹೋವನಿಗೆ ವಿರುದ್ಧವಾಗಿ ಏಳಬೇಡಿರಿ. ಆ ದೇಶದ ಜನರಿಗೆ ಭಯಪಡಬೇಡಿರಿ. ನಾವು ಅವರನ್ನು ಸೋಲಿಸಬಹುದು. ಅವರಿಗೆ ಯಾವ ಸಂರಕ್ಷಣೆ ಇರುವುದಿಲ್ಲ. ಆದರೆ ನಮ್ಮ ಕಡೆ ಯೆಹೋವನು ಇದ್ದಾನೆ. ಆದ್ದರಿಂದ ಭಯಪಡಬೇಡಿರಿ” ಅಂದರು.


ಆದರೆ ಯೆಹೋವನು ಮೋಶೆಗೆ, “ಯೆಹೋವನ ಶಕ್ತಿಗೆ ಮಿತಿಯಿಲ್ಲ. ನಾನು ಹೇಳುತ್ತಿರುವ ಸಂಗತಿಗಳು ನಡೆಯುವುದನ್ನು ನೀನು ನೋಡುವೆ” ಎಂದು ಹೇಳಿದನು.


ನಾನು ಕತ್ತಲೆಯಲ್ಲಿ (ರಹಸ್ಯವಾಗಿ) ಈ ಸಂಗತಿಗಳನ್ನು ನಿಮಗೆ ಹೇಳುತ್ತಿದ್ದೇನೆ. ಆದರೆ ನೀವು ಈ ಸಂಗತಿಗಳನ್ನು ಬೆಳಕಿನಲ್ಲಿ ಹೇಳಬೇಕೆಂಬುದು ನನ್ನ ಇಷ್ಟ. ನಾನು ಈ ವಿಷಯಗಳನ್ನು ನಿಮಗೆ ಮೆಲ್ಲಗೆ ಹೇಳುತ್ತಿದ್ದೇನೆ. ಆದರೆ ನೀವು ಈ ವಿಷಯಗಳನ್ನು ಜನರಿಗೆಲ್ಲ ಗಟ್ಟಿಯಾಗಿ ಹೇಳಿರಿ.


ಆಮೇಲೆ ಅದೇ ಸಸಿಯ ಮೇಲೆ ಬಿಸಿಗಾಳಿಯಿಂದ ಬತ್ತಿಹೋಗಿದ್ದ ಏಳು ತೆನೆಗಳು ಹುಟ್ಟಿದವು.


ಪ್ರತಿಯೊಬ್ಬರೂ ಭಯಪೀಡಿತರಾಗುವರು. ಯಾತನೆವೇದನೆಗಳು ಅವರನ್ನು ಆಕ್ರಮಿಸುವವು. ಪ್ರಸವವೇದನೆಯಿಂದ ನರಳುವ ಹೆಂಗಸಿನಂತೆ ಅವರ ಹೊಟ್ಟೆಯಲ್ಲಿ ನೋವು ಉಂಟಾಗುವದು; ಅವರ ಮುಖಗಳು ಬೆಂಕಿಯಂತೆ ಕೆಂಪಗಾಗುವವು. ಭಯದ ಮುಖವು ತಮ್ಮ ನೆರೆಯವರಲ್ಲಿಯೂ ಇರುವದನ್ನು ನೋಡಿ ಜನರು ಆಶ್ಚರ್ಯಪಡುವರು.


ಬಳಿಕ ಅದೇ ಗಿಡದಲ್ಲಿ ಮೇಲೆ ಬಿಸಿಗಾಳಿಯಿಂದ ಬತ್ತಿಹೋಗಿದ್ದ ಏಳು ತೆನೆಗಳು ಹುಟ್ಟಿದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು