2 ಅರಸುಗಳು 19:3 - ಪರಿಶುದ್ದ ಬೈಬಲ್3 ಅವರು ಯೆಶಾಯನಿಗೆ, “ಹಿಜ್ಕೀಯನು ಹೇಳುವುದೇನೆಂದರೆ, ಇಂದು ಮಹಾಕಷ್ಟದ ದಿನವಾಗಿದೆ. ನಾವು ಶಿಕ್ಷೆಯನ್ನೂ ನಿಂದೆಯನ್ನೂ ಅನುಭವಿಸಬೇಕಾಯಿತು. ಇದು ಪ್ರಸವವೇದನೆಯ ದಿನದಂತಿದೆ. ಆದರೆ ಹೆರಲು ಶಕ್ತಿಯೇ ಇಲ್ಲವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವರು ಹಿಜ್ಕೀಯನಿಗೆ, “ಈ ದಿನದಲ್ಲಿ ನಮಗೆ ಮಹಾಕಷ್ಟವು ಸಂಭವಿಸಿರುತ್ತದೆ. ನಾವು ಅಪಮಾನವನ್ನು, ನಿಂದೆಯನ್ನು ಅನುಭವಿಸಬೇಕಾಗಿ ಬಂದಿದೆ. ಹೆರಿಗೆಯ ಕಾಲ ಬಂದಿದೆ; ಆದರೆ ಹೆರುವುದಕ್ಕೆ ಬಲ ಸಾಲದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅವನಿಗೆ ಹೀಗೆಂದು ಹೇಳಿ: ‘ಈ ದಿನ ನಮಗೆ ಮಹಾಸಂಕಟದ ದಿನ, ದಂಡನೆಯ ದಿನ, ನಿಂದೆ ಅವಮಾನದ ದಿನ; ಹೆರಿಗೆಯ ಕಾಲ ಬಂದಿದೆ. ಆದರೆ ಹೆರುವುದಕ್ಕೆ ಶಕ್ತಿಸಾಲದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಈ ದಿವಸದಲ್ಲಿ ನಮಗೆ ಮಹಾಕಷ್ಟವು ಸಂಭವಿಸಿರುತ್ತದೆ; ನಾವು ಶಿಕ್ಷೆಯನ್ನೂ ನಿಂದೆಯನ್ನೂ ಅನುಭವಿಸಬೇಕಾಯಿತು. ಹೆರಿಗೆಯ ಕಾಲ ಬಂದದೆ; ಆದರೆ ಹೆರುವದಕ್ಕೆ ಬಲ ಸಾಲದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಗ ಅವರು ಯೆಶಾಯನಿಗೆ, “ಹಿಜ್ಕೀಯನು ಹೇಳುವುದೇನೆಂದರೆ: ‘ಈ ದಿವಸವು ಕಷ್ಟಕರವಾಗಿಯೂ ಗದರಿಕೆಯಾಗಿಯೂ ಅವಮಾನಕರವಾಗಿಯೂ ಇದೆ. ಏಕೆಂದರೆ ಹೆರಿಗೆಯ ಸಮಯವು ಬಂದಿದೆ ಆದರೆ ಹೆರುವುದಕ್ಕೆ ಶಕ್ತಿಯಿಲ್ಲ. ಅಧ್ಯಾಯವನ್ನು ನೋಡಿ |