Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 19:36 - ಪರಿಶುದ್ದ ಬೈಬಲ್‌

36 ಆಗ ಅಶ್ಶೂರದ ರಾಜನಾದ ಸನ್ಹೇರೀಬನು ತಾನು ವಾಸಿಸುತ್ತಿದ್ದ ನಿನವೆಗೆ ಹಿಂದಿರುಗಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಆಗ ಅಶ್ಶೂರ್ಯರ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಆದ್ದರಿಂದ ಅಸ್ಸೀರಿಯರ ಅರಸನಾದ ಸನ್ಹೇರೀಬನು ಹಿಂದಿರುಗಿದನು. ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲೆ ವಾಸಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಆಗ ಅವರ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನೆವೆಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಆಗ ಅಸ್ಸೀರಿಯದ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 19:36
9 ತಿಳಿವುಗಳ ಹೋಲಿಕೆ  

“ನಿನೆವೆಯು ಮಹಾದೊಡ್ಡ ನಗರ. ಅಲ್ಲಿಯ ಜನರ ಅನೇಕ ತರದ ದುಷ್ಕೃತ್ಯಗಳನ್ನು ನೋಡಿದ್ದೇನೆ. ಆದ್ದರಿಂದ ನೀನು ಆ ನಗರಕ್ಕೆ ಹೋಗಿ ಅಲ್ಲಿಯ ಜನರಿಗೆ ದುಷ್ಟತನವನ್ನು ನಿಲ್ಲಿಸಿರಿ ಎಂದು ಹೇಳು.”


ಅವನು ತಾನು ಬಂದ ದಾರಿಯಲ್ಲೇ ಹಿಂದಕ್ಕೆ ಹೋಗುತ್ತಾನೆ. ಅವನು ಈ ನಗರದೊಳಕ್ಕೆ ಬರುವುದಿಲ್ಲ. ಯೆಹೋವನೇ ಇದನ್ನು ನುಡಿದಿದ್ದಾನೆ.


ನೀನು ನನ್ನ ವಿರುದ್ಧ ದಂಗೆ ಎದ್ದಿರುವೆ. ನಿನ್ನ ಗರ್ವದ ನಿಂದನೆಯನ್ನು ನಾನು ಕೇಳಿರುವೆ. ಆದ್ದರಿಂದ ನಾನು ನಿನ್ನ ಬಾಯಿಗೆ ಕಡಿವಾಣವನ್ನು ಹಾಕಿ ನೀನು ಬಂದ ದಾರಿಯಲ್ಲಿಯೇ ಹಿಂದಿರುಗುವಂತೆ ಮಾಡುತ್ತೇನೆ.”


ನಾನು ಅವನಲ್ಲಿ ಒಂದು ಆತ್ಮವನ್ನಿರಿಸುತ್ತೇನೆ. ಅವನು ಒಂದು ಸುದ್ದಿಯನ್ನು ಕೇಳುತ್ತಾನೆ. ನಂತರ ಅವನು ತನ್ನ ಸ್ವಂತ ದೇಶಕ್ಕೆ ಹಿಂದಿರುಗಿ ಓಡಿಹೋಗುತ್ತಾನೆ. ನಾನು ಅವನನ್ನು ಅವನ ಸ್ವಂತ ದೇಶದಲ್ಲಿ ಖಡ್ಗದಿಂದ ಕೊಲ್ಲಲ್ಪಡುವಂತೆ ಮಾಡುತ್ತೇನೆ’” ಎಂದು ಹೇಳಿದನು.


ನ್ಯಾಯವಿಚಾರಣೆಯ ದಿನದಂದು ನಿನೆವೆ ಪಟ್ಟಣದ ಜನರು ಇಂದು ಜೀವಿಸುತ್ತಿರುವ ನಿಮ್ಮೊಂದಿಗೆ ನಿಂತುಕೊಂಡು ನಿಮ್ಮನ್ನು ಅಪರಾಧಿಗಳೆಂದು ಘೋಷಿಸುವರು. ಏಕೆಂದರೆ ಯೋನನು ಬೋಧಿಸಿದಾಗ ಅವರು ತಮ್ಮ ಜೀವಿತವನ್ನು ಬದಲಾವಣೆ ಮಾಡಿಕೊಂಡರು. ಆದರೆ ನಾನು ನಿಮಗೆ ಹೇಳುವುದೇನೆಂದರೆ ನಾನು ಯೋನನಿಗಿಂತಲೂ ಹೆಚ್ಚಿನವನಾಗಿರುತ್ತೇನೆ.


ನಿನೆವೆಯು ನೀರು ಬತ್ತುತ್ತಿರುವ ಕೊಳದಂತಿದೆ. “ನಿಲ್ಲಿ, ನಿಲ್ಲಿ, ಓಡಿಹೋಗಬೇಡಿ” ಎಂದು ಜನರು ಬೊಬ್ಬಿಡುತ್ತಾರೆ. ಆದರೆ ಅದರಿಂದ ಪ್ರಯೋಜನವಿಲ್ಲ.


ಎಲ್ಕೋಷ್ ಎಂಬ ಊರಿನವನಾದ ನಹೂಮನಿಗೆ ಆದ ದೇವದರ್ಶನದ ಪುಸ್ತಕ. ನಿನೆವೆ ಪಟ್ಟಣದ ವಿಷಯವಾಗಿ ದುಃಖಕರವಾದ ಸಂದೇಶ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು