2 ಅರಸುಗಳು 19:7 - ಪರಿಶುದ್ದ ಬೈಬಲ್7 ನಾನು ಅವನಲ್ಲಿ ಒಂದು ಆತ್ಮವನ್ನಿರಿಸುತ್ತೇನೆ. ಅವನು ಒಂದು ಸುದ್ದಿಯನ್ನು ಕೇಳುತ್ತಾನೆ. ನಂತರ ಅವನು ತನ್ನ ಸ್ವಂತ ದೇಶಕ್ಕೆ ಹಿಂದಿರುಗಿ ಓಡಿಹೋಗುತ್ತಾನೆ. ನಾನು ಅವನನ್ನು ಅವನ ಸ್ವಂತ ದೇಶದಲ್ಲಿ ಖಡ್ಗದಿಂದ ಕೊಲ್ಲಲ್ಪಡುವಂತೆ ಮಾಡುತ್ತೇನೆ’” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆದುದರಿಂದ, ನಾನು ಅವನ ಮೇಲೆ ಭಯದ ಆತ್ಮವನ್ನು ಬರಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ಸ್ವದೇಶಕ್ಕೆ ಹಿಂದಿರುಗಿ ಹೋಗಿ ಅಲ್ಲಿ ಕತ್ತಿಯಿಂದ ನಾಶವಾಗುವಂತೆ ಮಾಡುವೆನು’ ಎಂಬುದಾಗಿ ಯೆಹೋವನು ನಿಮ್ಮ ಯಜಮಾನನಿಗೆ ಹೇಳುತ್ತಾನೆ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅವನ ಮೇಲೆ ಭಯಾತ್ಮನನ್ನು ಬರಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ಸ್ವದೇಶಕ್ಕೆ ಹಿಂದಿರುಗಿ ಅಲ್ಲೇ ಕತ್ತಿಗೆ ತುತ್ತಾಗುವಂತೆ ಮಾಡುವೆನು, ಇದು ಸರ್ವೇಶ್ವರನ ನುಡಿ, ಎಂದು ತಿಳಿಸಿರಿ,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆದದರಿಂದ ನಾನು ಅವನ ಮೇಲೆ [ಭಯದ] ಆತ್ಮವನ್ನು ಬರಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ತಿರುಗಿಕೊಂಡು ಸ್ವದೇಶಕ್ಕೆ ಹೋಗಿ ಅಲ್ಲಿ ಕತ್ತಿಯಿಂದ ಸಂಹೃತನಾಗುವಂತೆ ಮಾಡುವೆನು ಎಂಬದಾಗಿ ಯೆಹೋವನು ನಿಮ್ಮ ಯಜಮಾನನಿಗೆ ಹೇಳುತ್ತಾನೆ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಇಗೋ, ನಾನು ಅವರ ಮೇಲೆ ಆತ್ಮವನ್ನು ಕಳುಹಿಸುವೆನು. ಅವನು ಒಂದು ಸುದ್ದಿಯನ್ನು ಕೇಳಿ ತನ್ನ ದೇಶಕ್ಕೆ ಹಿಂದಿರುಗುವನು. ಇದಲ್ಲದೆ ಅವನು ತನ್ನ ದೇಶದಲ್ಲಿ ಖಡ್ಗಕ್ಕೆ ತುತ್ತಾಗುವಂತೆ ಮಾಡುವೆನು,’ ” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |
ಆತನು ಬಡಜನರಿಗೆ ಅನ್ಯಾಯಮಾಡದೆ ನ್ಯಾಯವಾದ ತೀರ್ಪನ್ನು ಕೊಡುವನು, ದೇಶದ ಬಡಜನರಿಗೋಸ್ಕರವಾಗಿ ಮಾಡುವ ಆಲೋಚನೆಯನ್ನು ಪಕ್ಷಪಾತವಿಲ್ಲದೆ ಮಾಡುವನು. ಆತನು ಜನರಿಗೆ ಶಿಕ್ಷೆ ಕೊಡಬೇಕೆಂದು ತೀರ್ಮಾನಿಸಿದರೆ ಅದನ್ನು ಆಜ್ಞಾಪಿಸಿ ಶಿಕ್ಷಿಸುವನು. ದುಷ್ಟರಿಗೆ ಮರಣದಂಡನೆಯಾಗಬೇಕೆಂದು ಆತನು ತೀರ್ಮಾನಿಸಿದರೆ, ಆತನು ಆಜ್ಞಾಪಿಸಿ ಕೊಲ್ಲಿಸುವನು. ನ್ಯಾಯವೇ ಆತನಿಗೆ ನಡುಕಟ್ಟು, ಒಳ್ಳೆಯತನವೇ ಆತನಿಗೆ ಸೊಂಟಪಟ್ಟಿಯಾಗಿವೆ.