Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 19:9 - ಪರಿಶುದ್ದ ಬೈಬಲ್‌

9 ಇಥಿಯೋಪಿಯದ ರಾಜ ತಿರ್ಹಾಕನ ಬಗ್ಗೆ ಅಶ್ಶೂರದ ರಾಜ ಒಂದು ಗಾಳಿ ಸುದ್ದಿಯನ್ನು ಕೇಳಿದನು. “ತಿರ್ಹಾಕನು ನಿನ್ನ ವಿರುದ್ಧ ಹೋರಾಡಲು ಬಂದಿದ್ದಾನೆ” ಎಂಬುದೇ ಆ ಗಾಳಿಸುದ್ದಿಯಾಗಿತ್ತು. ಆದ್ದರಿಂದ ಅಶ್ಶೂರದ ರಾಜನು ಹಿಜ್ಕೀಯನ ಬಳಿಗೆ ಮತ್ತೆ ಸಂದೇಶಕರನ್ನು ಕಳುಹಿಸಿದನು. ಅಶ್ಶೂರದ ರಾಜನು ಈ ಸಂದೇಶಕರಿಗೆ ಒಂದು ಸಂದೇಶವನ್ನು ನೀಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅಷ್ಟರಲ್ಲಿ ಐಗುಪ್ತದ ಅರಸನೂ ಮತ್ತು ಕೂಷಿನ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಯುದ್ಧಮಾಡಲು ಹೊರಟಿದ್ದಾನೆ ಎಂಬ ಸುದ್ದಿಯನ್ನು ಸನ್ಹೇರೀಬನು ಕೇಳಿದಾಗ, ಯೆಹೂದದ ಅರಸನಾದ ಹಿಜ್ಕೀಯನ ಬಳಿಗೆ ಪುನಃ ದೂತರನ್ನು ಕಳುಹಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅಷ್ಟರಲ್ಲಿ ಸುಡಾನಿನ ರಾಜ ತಿರ್ಹಾಕನು ತನಗೆ ವಿರುದ್ಧವಾಗಿ ಹೊರಟಿದ್ದಾನೆ ಎಂಬ ಸುದ್ದಿ ಅಸ್ಸೀರಿಯದ ಅರಸನಿಗೆ ಮುಟ್ಟಿತು. ಆಗ ಅವನು ಜುದೇಯದ ಅರಸನಾದ ಹಿಜ್ಕೀಯನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅಷ್ಟರಲ್ಲಿ ಕೂಷಿನ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಹೊರಟಿದ್ದಾನೆಂಬ ಸುದ್ದಿಯನ್ನು ಕೇಳಿ ಯೆಹೂದದ ಅರಸನಾದ ಹಿಜ್ಕೀಯನ ಬಳಿಗೆ ತಿರಿಗಿ ದೂತರನ್ನು ಕಳುಹಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅಷ್ಟರಲ್ಲಿ ಕೂಷನ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಹೊರಟಿದ್ದಾನೆಂಬ ಸುದ್ದಿಯನ್ನು ಅಸ್ಸೀರಿಯದ ಅರಸನು ಕೇಳಿ, ಹಿಜ್ಕೀಯನ ಬಳಿಗೆ ತಿರಿಗಿ ದೂತರನ್ನು ಕಳುಹಿಸಿ ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 19:9
7 ತಿಳಿವುಗಳ ಹೋಲಿಕೆ  

ಆದರೆ ಸೌಲನ ಬಳಿಗೆ ಒಬ್ಬ ಸಂದೇಶಕನು ಬಂದು, “ಫಿಲಿಷ್ಟಿಯರು ನಮ್ಮನ್ನು ಆಕ್ರಮಣ ಮಾಡುತ್ತಿದ್ದಾರೆ, ಬೇಗ ಬಾ!” ಎಂದು ಹೇಳಿದನು.


ಅಶ್ಶೂರದ ರಾಜ ಜೆರುಸಲೇಮಿನಲ್ಲಿದ್ದ ರಾಜನಾದ ಹಿಜ್ಕೀಯನ ಬಳಿಗೆ ತನ್ನ ಮೂವರು ಮಹಾಸೇನಾಧಿಪತಿಗಳಾದ ತರ್ತಾನ್, ರಬ್ಸಾರೀಸ್, ರಬ್ಷಾಕೆ ಎಂಬವರನ್ನು ಮಹಾಸೈನ್ಯದೊಂದಿಗೆ ಕಳುಹಿಸಿದನು. ಅವರು ಲಾಕೀಷಿನಿಂದ ಜೆರುಸಲೇಮಿಗೆ ಹೋದರು. ಅವರು ಮೇಲಿನ ಕೆರೆಯ ನೀರಿನ ಕೊಳವೆಯ ಬಳಿ ನಿಂತರು. (ಮೇಲಿನ ಕೆರೆಯು ರಸ್ತೆಯ ಮೇಲೆ ದೋಭಿಘಾಟ್ ಬಳಿಯಿತ್ತು.)


ಅಶ್ಶೂರದ ರಾಜನು ಲಾಕೀಷನ್ನು ಬಿಟ್ಟುಹೋದನೆಂಬ ಸುದ್ದಿಯನ್ನು ಸೇನಾಧಿಪತಿಯು ಕೇಳಿ ಲಿಬ್ನಕ್ಕೆ ಹೋದಾಗ ರಾಜನು ಲಿಬ್ನದ ವಿರುದ್ಧ ಯುದ್ಧ ಮಾಡುತ್ತಿದ್ದನು.


ಯೆಹೂದದ ರಾಜನಾದ ಹಿಜ್ಕೀಯನಿಗೆ ಇದನ್ನು ಹೇಳಿ: “ನೀನು ನಂಬುವ ದೇವರು ನಿನ್ನನ್ನು ಮೋಸಗೊಳಿಸಲು ಅವಕಾಶ ನೀಡಬೇಡ. ಅಶ್ಶೂರದ ರಾಜ ಜೆರುಸಲೇಮನ್ನು ಸೋಲಿಸುವುದಿಲ್ಲ ಎಂಬ ನಿನ್ನ ದೇವರ ಮಾತನ್ನು ನಂಬಬೇಡ.


ಇಥಿಯೋಪ್ಯದ ನದಿಯ ದಡದಲ್ಲಿರುವ ಪ್ರಾಂತ್ಯಗಳನ್ನು ಗಮನಿಸಿರಿ. ಆ ಪ್ರಾಂತ್ಯವು ಕ್ರಿಮಿಕೀಟಗಳಿಂದ ತುಂಬಿದೆ. ಅವುಗಳ ರೆಕ್ಕೆಗಳ ಝೇಂಕಾರವನ್ನು ನೀವು ಕೇಳಬಹುದು.


ರಾಜನು ಆ ನಗರದಲ್ಲಿದ್ದ ಇಸ್ರೇಲಿನ ರಾಜನಾದ ಅಹಾಬನ ಬಳಿಗೆ ತನ್ನ ಸಂದೇಶಕರನ್ನು ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು