Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 2:13 - ಪರಿಶುದ್ದ ಬೈಬಲ್‌

13 ಎಲೀಯನ ಮೇಲಂಗಿಯು ನೆಲದ ಮೇಲೆ ಬಿತ್ತು. ಎಲೀಷನು ಅದನ್ನು ಎತ್ತಿಕೊಂಡು ಜೋರ್ಡನ್ ನದಿ ತೀರಕ್ಕೆ ಬಂದನು. ಆ ಕಂಬಳಿಯಿಂದ ನೀರನ್ನು ಹೊಡೆದು, “ಎಲೀಯನ ದೇವರಾದ ಯೆಹೋವನು ಎಲ್ಲಿದ್ದಾನೆ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅನಂತರ ಅವನು ಮೇಲಿನಿಂದ ಬಿದ್ದ ಎಲೀಯನ ಕಂಬಳಿಯನ್ನು ತೆಗೆದುಕೊಂಡು ಯೊರ್ದನ್ ನದಿ ತೀರಕ್ಕೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅನಂತರ ಅವನು ಮೇಲಿನಿಂದ ಬಿದ್ದ ಎಲೀಯನ ಕಂಬಳಿಯನ್ನು ತೆಗೆದುಕೊಂಡು ಜೋರ್ಡನ್ ನದೀತೀರಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅನಂತರ ಅವನು ಮೇಲಣಿಂದ ಬಿದ್ದ ಎಲೀಯನ ಕಂಬಳಿಯನ್ನು ತೆಗೆದುಕೊಂಡು ಯೊರ್ದನ್ ನದೀ ತೀರಕ್ಕೆ ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಎಲೀಷನು ಎಲೀಯನಿಂದ ಬಿದ್ದ ಹೊದಿಕೆಯನ್ನು ಎತ್ತಿಕೊಂಡು, ಹಿಂದಕ್ಕೆ ಹೋಗಿ, ಯೊರ್ದನ್ ನದಿ ತೀರದಲ್ಲಿ ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 2:13
7 ತಿಳಿವುಗಳ ಹೋಲಿಕೆ  

ಎಲೀಯನು ಆ ಸ್ಥಳದಿಂದ ಹೊರಟು ಶಾಫಾಟನ ಮಗನಾದ ಎಲೀಷನನ್ನು ಕಂಡುಹಿಡಿಯಲು ಹೋದನು. ಎಲೀಷನು ಹನ್ನೆರಡು ಜೋಡಿ ಎತ್ತುಗಳನ್ನು ತಂದು ಭೂಮಿಯನ್ನು ಉಳುತ್ತಿದ್ದನು. ಎಲೀಯನು ಬಂದಾಗ ಎಲೀಷನು ಹನ್ನೆರಡನೆಯ ಜೋಡಿಯಿಂದ ತಾನಾಗಿ ಭೂಮಿಯನ್ನು ಉಳುತ್ತಿದ್ದನು. ಎಲೀಯನು ಎಲೀಷನ ಹತ್ತಿರಕ್ಕೆ ಹೋಗಿ ತನ್ನ ಮೇಲಂಗಿಯನ್ನು ಎಲೀಷನಿಗೆ ತೊಡಿಸಿದನು.


ರಾಜನಾದ ಸೊಲೊಮೋನನು ಏಚ್ಯೋನ್ಗೆಬೆರಿನಲ್ಲಿ ಹಡಗುಗಳನ್ನು ಸಹ ನಿರ್ಮಿಸಿದನು. ಈ ಪಟ್ಟಣವು ಎದೋಮ್ ದೇಶದಲ್ಲಿ ಕೆಂಪು ಸಮುದ್ರತೀರದ ಏಲೋತಿನ ಹತ್ತಿರದಲ್ಲಿದೆ.


ಎಲೀಯನು ತನ್ನ ಮೇಲಂಗಿಯನ್ನು ತೆಗೆದು ಅದರಿಂದ ನೀರನ್ನು ಹೊಡೆದನು. ಆಗ ನೀರು ಎರಡು ಭಾಗವಾಗಿ ಬಲಗಡೆಯಲ್ಲಿಯೂ ಎಡಗಡೆಯಲ್ಲಿಯೂ ನಿಂತುಕೊಂಡಿತು. ನಂತರ ಎಲೀಯ ಮತ್ತು ಎಲೀಷರು ಒಣನೆಲದ ಮೇಲೆ ನದಿಯನ್ನು ದಾಟಿದರು.


ಕೆಲವರನ್ನು ಕಲ್ಲೆಸೆದು ಕೊಂದರು, ಕೆಲವರನ್ನು ಅರ್ಧಕತ್ತರಿಸಿ ಎರಡು ಭಾಗ ಮಾಡಿದರು. ಕೆಲವರನ್ನು ಕತ್ತಿಗಳಿಂದ ಇರಿದುಕೊಂದರು. ಇವರಲ್ಲಿ ಕೆಲವರು ಕುರಿ ಮತ್ತು ಹೋತಗಳ ಚರ್ಮಗಳನ್ನು ತೊಟ್ಟುಕೊಂಡಿದ್ದರು; ಕೆಲವರು ಬಡವರಾಗಿದ್ದರು; ಹಿಂಸೆಗೆ ಒಳಗಾಗಿದ್ದರು ಮತ್ತು ಜನರ ಕ್ರೂರ ವರ್ತನೆಗೆ ಗುರಿಯಾಗಿದ್ದರು.


ಎಲೀಷನು ಅದನ್ನು ನೋಡಿ, “ನನ್ನ ತಂದೆಯೇ! ನನ್ನ ತಂದೆಯೇ! ಇಸ್ರೇಲಿಗೆ ರಥರಥಾಶ್ವಗಳೂ ಮತ್ತು ಅಶ್ವದಳವೂ ಆಗಿದ್ದವನೇ!” ಎಂದು ಕೂಗಿಕೊಂಡನು. ಎಲೀಷನು ಎಲೀಯನನ್ನು ಮತ್ತೆ ನೋಡಲಿಲ್ಲ. ಎಲೀಷನು ತನ್ನ ಬಟ್ಟೆಗಳನ್ನು ಹಿಡಿದುಕೊಂಡು, ತನ್ನ ದುಃಖವನ್ನು ತೋರ್ಪಡಿಸಲು ಅವುಗಳನ್ನು ಹರಿದು ತುಂಡುತುಂಡು ಮಾಡಿದನು.


ಎಲೀಷನು ನೀರನ್ನು ಹೊಡೆದಾಗ, ನೀರು ಎರಡು ಭಾಗವಾಗಿ ಬಲಗಡೆಯಲ್ಲೂ ಎಡಗಡೆಯಲ್ಲೂ ನಿಂತುಕೊಂಡಿತು! ಎಲೀಷನು ನದಿಯನ್ನು ದಾಟಿದನು.


ಸೌಲನು, “ಅವನ ರೂಪ ಹೇಗಿದೆ?” ಎಂದು ಕೇಳಿದನು. ಆ ಹೆಂಗಸು, “ಅವನು ನಿಲುವಂಗಿಯನ್ನು ಧರಿಸಿಕೊಂಡಿರುವ ಒಬ್ಬ ಮುದುಕನಂತಿದ್ದಾನೆ” ಎಂದು ಹೇಳಿದಳು. ಅವನೇ ಸಮುವೇಲನೆಂಬುದನ್ನು ಸೌಲನು ತಿಳಿದುಕೊಂಡು ಸಾಷ್ಟಾಂಗನಮಸ್ಕಾರ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು