2 ಅರಸುಗಳು 2:14 - ಪರಿಶುದ್ದ ಬೈಬಲ್14 ಎಲೀಷನು ನೀರನ್ನು ಹೊಡೆದಾಗ, ನೀರು ಎರಡು ಭಾಗವಾಗಿ ಬಲಗಡೆಯಲ್ಲೂ ಎಡಗಡೆಯಲ್ಲೂ ನಿಂತುಕೊಂಡಿತು! ಎಲೀಷನು ನದಿಯನ್ನು ದಾಟಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 “ಎಲೀಯನ ದೇವರಾದ ಯೆಹೋವನೆಲ್ಲಿ?” ಎಂದು ಅಂದುಕೊಂಡು, ಆ ಕಂಬಳಿಯಿಂದ ನೀರನ್ನು ಹೊಡೆಯಲು ಅದು ಎರಡು ಭಾಗವಾಯಿತು. ಎಲೀಷನು ಹೊಳೆಯನ್ನು ದಾಟಿಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 “ಎಲೀಯನ ದೇವರಾದ ಸರ್ವೇಶ್ವರನೆಲ್ಲಿ?” ಎಂದುಕೊಂಡು ಆ ಕಂಬಳಿಯಿಂದ ನೀರನ್ನು ಹೊಡೆದನು. ಅದು ಇಬ್ಭಾಗ ಆಯಿತು. ಅವನು ದಾಟಿಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಎಲೀಯನ ದೇವರಾದ ಯೆಹೋವನೆಲ್ಲಿ ಅಂದುಕೊಂಡು ಆ ಕಂಬಳಿಯಿಂದ ನೀರನ್ನು ಹೊಡೆಯಲು ಅದು ಎರಡು ಭಾಗವಾಯಿತು; ಅವನು ದಾಟಿಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಎಲೀಯನಿಂದ ಬಿದ್ದ ಹೊದಿಕೆಯನ್ನು ತೆಗೆದುಕೊಂಡು ನೀರನ್ನು ಹೊಡೆದು, “ಎಲೀಯನ ದೇವರಾದ ಯೆಹೋವ ದೇವರು ಎಲ್ಲಿ?” ಎಂದನು. ಅವನು ಹಾಗೆ ನೀರನ್ನು ಹೊಡೆದ ತರುವಾಯ, ಅದು ಬಲಗಡೆಗೂ ಎಡಗಡೆಗೂ ವಿಭಾಗವಾದದ್ದರಿಂದ, ಎಲೀಷನು ದಾಟಿಹೋದನು. ಅಧ್ಯಾಯವನ್ನು ನೋಡಿ |
ಆಗ ಗಿದ್ಯೋನನು, “ಸ್ವಾಮೀ, ಯೆಹೋವನು ನಮ್ಮ ಸಂಗಡವಿದ್ದರೆ ನಮಗೆ ಇಷ್ಟೊಂದು ಕಷ್ಟಗಳೇಕೆ ಬರುತ್ತವೆ? ನಮ್ಮ ಪೂರ್ವಿಕರಿಗಾಗಿ ಆತನು ಬಹಳಷ್ಟು ಅದ್ಭುತಕಾರ್ಯಗಳನ್ನು ಮಾಡಿದ್ದನೆಂದು ನಾವು ಕೇಳಿದ್ದೇವೆ. ಆತನು ಅವರನ್ನು ಈಜಿಪ್ಟಿನಿಂದ ಹೊರಗೆ ಕರೆತಂದನೆಂದು ನಮ್ಮ ಪೂರ್ವಿಕರು ನಮಗೆ ಹೇಳಿದರು. ಆದರೆ ಈಗ ಯೆಹೋವನು ನಮ್ಮನ್ನು ಕೈಬಿಟ್ಟಿದ್ದಾನೆ; ಮಿದ್ಯಾನ್ಯರು ನಮ್ಮನ್ನು ಸೋಲಿಸುವಂತೆ ಮಾಡಿದ್ದಾನೆ” ಎಂದು ಹೇಳಿದನು.
ಎಲೀಷನು ಗೇಹಜಿಗೆ, “ಹೊರಡಲು ಸಿದ್ಧನಾಗು. ನನ್ನ ಕೋಲನ್ನು ತೆಗೆದುಕೊಂಡು ಹೋಗು. ಯಾರ ಹತ್ತಿರವಾಗಲಿ ಮಾತನಾಡಲು ನಿಲ್ಲದಿರು! ನೀನು ಯಾರನ್ನಾದರೂ ಸಂಧಿಸಿದರೆ ಅವನಿಗೆ, ‘ಕ್ಷೇಮವಾಗಿರುವೆಯಾ?’ ಎಂದು ಕೇಳದಿರು. ಯಾರಾದರೂ ನಿನ್ನನ್ನು ‘ಕ್ಷೇಮವಾಗಿರುವೆಯಾ?’ ಎಂದು ಕೇಳಿದರೆ, ಅವನಿಗೆ ಉತ್ತರಿಸದಿರು. ಹೀಗೆ ನೀನು ಹೋಗಿ, ನನ್ನ ಕೋಲನ್ನು ಮಗುವಿನ ಮುಖದ ಮೇಲೆ ಇಡು” ಎಂದು ಹೇಳಿದನು.
‘ಈಜಿಪ್ಟಿನಿಂದ ನಮ್ಮನ್ನು ಕರೆದುಕೊಂಡು ಬಂದ ಯೆಹೋವನು ಎಲ್ಲಿದ್ದಾನೆ? ಮರಳುಗಾಡಿನಿಂದ ನಮ್ಮನ್ನು ಕರೆದುಕೊಂಡು ಬಂದ ಯೆಹೋವನು ಎಲ್ಲಿದ್ದಾನೆ? ನಿರ್ಜನವಾದ ಬೆಟ್ಟಪ್ರದೇಶದಿಂದ ನಮ್ಮನ್ನು ತಂದ ಯೆಹೋವನು ಎಲ್ಲಿದ್ದಾನೆ? ಎಂದು ನಿಮ್ಮ ಪೂರ್ವಿಕರು ಸ್ಮರಿಸಲಿಲ್ಲ. ಯೆಹೋವನು ನಮ್ಮನ್ನು ಅಂಧಕಾರಮಯವಾದ ಮತ್ತು ಅಪಾಯಕಾರಿಯಾದ ಭೂಮಿಯಿಂದ ಕರೆದುತಂದನು. ಆ ಭೂಮಿಯ ಮಾರ್ಗವಾಗಿ ಯಾರೂ ಪ್ರಯಾಣ ಮಾಡುವುದಿಲ್ಲ. ಯಾರೂ ಆ ಭೂಮಿಯ ಮೇಲೆ ವಾಸ ಮಾಡುವದಿಲ್ಲ. ಈಗ ಆ ಯೆಹೋವನು ಎಲ್ಲಿದ್ದಾನೆ?’” ನಿಮ್ಮ ಪೂರ್ವಿಕರು ಆ ಪ್ರಶ್ನೆಗಳನ್ನು ಕೇಳಲೇ ಇಲ್ಲ.