Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 2:18 - ಪರಿಶುದ್ದ ಬೈಬಲ್‌

18 ಅವರು ಎಲೀಷನು ನೆಲೆಸಿದ್ದ ಜೆರಿಕೊವಿಗೆ ಹೋದರು. ಅವರು ಎಲೀಯನನ್ನು ಕಂಡುಹಿಡಿಯಲಾಗಲಿಲ್ಲವೆಂದು ಎಲೀಷನಿಗೆ ಹೇಳಿದರು. ಎಲೀಷನು ಅವರಿಗೆ, “ನಾನು ನಿಮಗೆ ಹೋಗಬೇಡವೆಂದು ಹೇಳಿದೆನಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇನ್ನೂ ಯೆರಿಕೋವಿನಲ್ಲೇ ಇದ್ದ ಎಲೀಷನ ಬಳಿಗೆ ಬಂದರು. ಎಲೀಷನು ಅವರಿಗೆ, ಹೋಗಬೇಡಿರಿ ಎಂದು ನಾನು ಹೇಳಲಿಲ್ಲವೋ? ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇನ್ನೂ ಜೆರಿಕೋವಿನಲ್ಲೇ ಇದ್ದ ಎಲೀಷನ ಬಳಿಗೆ ಅವರು ಬಂದರು. ಅವನು, “’ಹೋಗಬೇಡಿ,’ ಎಂದು ನಾನು ಹೇಳಲಿಲ್ಲವೇ?’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇನ್ನೂ ಯೆರಿಕೋವಿನಲ್ಲೇ ಇದ್ದ ಎಲೀಷನ ಬಳಿಗೆ ಬಂದರು; ಅವನು ಅವರಿಗೆ - ಹೋಗಬೇಡಿರೆಂದು ನಾನು ಹೇಳಲಿಲ್ಲವೋ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವನು ಯೆರಿಕೋವಿನಲ್ಲಿ ನಿಂತಿರುವಾಗ, ಅವರು ತಿರುಗಿ ಅವನ ಬಳಿಗೆ ಬಂದರು. ಆಗ ಅವನು ಅವರಿಗೆ, “ಹೋಗಬೇಡಿರೆಂದು ನಾನು ನಿಮಗೆ ಹೇಳಲಿಲ್ಲವೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 2:18
3 ತಿಳಿವುಗಳ ಹೋಲಿಕೆ  

ಎಲೀಷನು ಕಿರಿಕಿರಿಗೊಂಡು ಒಪ್ಪಿಕೊಳ್ಳುವವರೆಗೆ ಆ ಪ್ರವಾದಿಗಳ ಗುಂಪು ಅವನನ್ನು ಬೇಡಿಕೊಂಡರು. ನಂತರ ಎಲೀಷನು, “ಸರಿ, ಎಲೀಯನನ್ನು ಹುಡುಕಲು ಜನರನ್ನು ಕಳುಹಿಸಿ” ಎಂದು ಹೇಳಿದನು. ಪ್ರವಾದಿಗಳ ಗುಂಪು ಎಲೀಯನನ್ನು ಹುಡುಕಲು ಐವತ್ತು ಮಂದಿ ಜನರನ್ನು ಕಳುಹಿಸಿದರು. ಅವರು ಮೂರು ದಿನ ಹುಡುಕಿದರೂ ಎಲೀಯನನ್ನು ಕಂಡು ಹಿಡಿಯಲಾಗಲಿಲ್ಲ.


ನಗರದ ಜನರು ಎಲೀಷನಿಗೆ, “ಸ್ವಾಮೀ, ಈ ನಗರವು ಒಳ್ಳೆಯ ಸ್ಥಳದಲ್ಲಿದೆಯೆಂಬುದನ್ನು ನೀನು ನೋಡುತ್ತಿರುವೆ. ಆದರೆ ನೀರು ತುಂಬಾ ಕೆಟ್ಟಿದೆ. ಆ ಕಾರಣದಿಂದಲೇ ಈ ಭೂಮಿಯಲ್ಲಿ ಬೆಳೆಗಳನ್ನು ಬೆಳೆಯಲಾಗುತ್ತಿಲ್ಲ” ಎಂದು ಹೇಳಿದರು.


ಒಮ್ಮೆ ಯೇಸು ಜೆರಿಕೊ ಪಟ್ಟಣದ ಮೂಲಕ ಹೋಗುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು