2 ಅರಸುಗಳು 2:19 - ಪರಿಶುದ್ದ ಬೈಬಲ್19 ನಗರದ ಜನರು ಎಲೀಷನಿಗೆ, “ಸ್ವಾಮೀ, ಈ ನಗರವು ಒಳ್ಳೆಯ ಸ್ಥಳದಲ್ಲಿದೆಯೆಂಬುದನ್ನು ನೀನು ನೋಡುತ್ತಿರುವೆ. ಆದರೆ ನೀರು ತುಂಬಾ ಕೆಟ್ಟಿದೆ. ಆ ಕಾರಣದಿಂದಲೇ ಈ ಭೂಮಿಯಲ್ಲಿ ಬೆಳೆಗಳನ್ನು ಬೆಳೆಯಲಾಗುತ್ತಿಲ್ಲ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಯೆರಿಕೋವಿನ ಜನರು ಎಲೀಷನಿಗೆ, “ನಮ್ಮ ಒಡೆಯನಾದ ನಿನಗೆ ಗೊತ್ತಿರುವಂತೆ, ಈ ಊರು ಕಟ್ಟಲ್ಪಟ್ಟಿರುವ ಸ್ಥಳವು ಒಳ್ಳೆಯದಾಗಿದೆ. ಆದರೆ ನೀರು ಕೆಟ್ಟದ್ದಾಗಿರುವುದರಿಂದ ಬಂಜೆತನ ಉಂಟಾಗಿದೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಜೆರಿಕೋವಿನ ಜನರು ಎಲೀಷ, “ನಮ್ಮ ಒಡೆಯರಾದ ನಿಮಗೆ ಗೊತ್ತಿರುವಂತೆ ಈ ಊರು ಕಟ್ಟಿಸಿರುವ ಸ್ಥಳ ಚೆನ್ನಾಗಿದೆ. ಆದರೆ ನೀರು ಕೆಟ್ಟದ್ದು. ಆದುದರಿಂದ ಗರ್ಭಪಾತ ಹೆಚ್ಚು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಯೆರಿಕೋವಿನ ಜನರು ಎಲೀಷನಿಗೆ - ನಮ್ಮ ಒಡೆಯನಾದ ನಿನಗೆ ಗೊತ್ತಿರುವಂತೆ ಈ ಊರು ಕಟ್ಟಲ್ಪಟ್ಟಿರುವ ಸ್ಥಳವು ಒಳ್ಳೇದಾಗಿದೆ; ಆದರೆ ನೀರು ಕೆಟ್ಟದ್ದಾಗಿರುವದರಿಂದ ಬಂಜೆತನ ಹೆಚ್ಚು ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆಗ ಪಟ್ಟಣದ ಮನುಷ್ಯರು ಎಲೀಷನಿಗೆ, “ಈ ಪಟ್ಟಣದ ಸ್ಥಳವು ಒಳ್ಳೆಯದಾಗಿದೆ. ನಮ್ಮ ಯಜಮಾನನೇ, ನೋಡು ನಿನಗೆ ಕಾಣುವುದು. ಆದರೆ ನೋಡು ನೀರು ಕೆಟ್ಟದ್ದು, ಭೂಮಿ ಬಂಜೆಯಾದದ್ದು,” ಎಂದರು. ಅಧ್ಯಾಯವನ್ನು ನೋಡಿ |
ಅಹಾಬನ ಕಾಲದಲ್ಲಿ ಬೇತೇಲಿನ ಹೀಯೇಲನು ಜೆರಿಕೊ ಪಟ್ಟಣವನ್ನು ಮತ್ತೆ ನಿರ್ಮಿಸಿದನು. ಹೀಯೇಲನು ನಗರದಲ್ಲಿ ಈ ಕೆಲಸವನ್ನು ಮಾಡಲು ಆರಂಭಿಸಿದ ಕಾಲದಲ್ಲಿಯೇ ಅವನ ಹಿರಿಯ ಮಗನಾದ ಅಬೀರಾಮನು ಸತ್ತುಹೋದನು. ಹೀಯೇಲನು ನಗರದ ಬಾಗಿಲುಗಳನ್ನು ಕಟ್ಟಿಸಿದಾಗ, ಅವನ ಕಿರಿಯ ಮಗನಾದ ಸೆಗೂಬನು ಸತ್ತುಹೋದನು. ಯೆಹೋವನು ಹೇಳಿದಂತೆಯೇ ಇದು ಸಂಭವಿಸಿತು. ನೂನನ ಮಗನಾದ ಯೆಹೋಶುವನ ಮೂಲಕ ಯೆಹೋವನು ಇದನ್ನು ತಿಳಿಸಿದ್ದನು.