Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 2:2 - ಪರಿಶುದ್ದ ಬೈಬಲ್‌

2 ಎಲೀಯನು ಎಲೀಷನಿಗೆ, “ದಯವಿಟ್ಟು ಇಲ್ಲಿಯೇ ಇರು; ಏಕೆಂದರೆ ಬೇತೇಲಿಗೆ ಹೋಗುವಂತೆ ಯೆಹೋವನು ನನಗೆ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಆದರೆ ಎಲೀಷನು, “ಯೆಹೋವನಾಣೆ, ನಿನ್ನಾಣೆ, ನಾನು ನಿನ್ನನ್ನು ಬಿಟ್ಟಿರುವುದಿಲ್ಲವೆಂದು ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು. ಇಬ್ಬರೂ ಬೇತೇಲಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಎಲೀಯನು ಎಲೀಷನಿಗೆ, “ನೀನು ಇಲ್ಲೇ ಇರು, ಯೆಹೋವನು ನನಗೆ ಬೇತೇಲಿಗೆ ಹೋಗಬೇಕೆಂದು” ಆಜ್ಞಾಪಿಸಿದ್ದಾನೆ ಎನ್ನಲು, ಎಲೀಷನು, “ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ” ಎಂದು ಉತ್ತರಕೊಟ್ಟನು. ತರುವಾಯ ಅವರಿಬ್ಬರೂ ಬೇತೇಲಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ದಾರಿಯಲ್ಲಿ ಎಲೀಯನು ಎಲೀಷನಿಗೆ, “ದಯವಿಟ್ಟು ನೀನು ಇಲ್ಲೇ ಇರು; ಸರ್ವೇಶ್ವರ ನನಗೆ ಬೇತೇಲಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾರೆ,” ಎಂದನು. ಎಲೀಷನು, “ಸರ್ವೇಶ್ವರನ ಆಣೆ, ನಿಮ್ಮ ಜೀವದಾಣೆ, ನಾನು ನಿಮ್ಮನ್ನು ಬಿಟ್ಟಿರಲಾರೆ,” ಎಂದು ಉತ್ತರಕೊಟ್ಟನು. ಬಳಿಕ ಅವರಿಬ್ಬರೂ ಬೇತೇಲಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಗ ಎಲೀಯನು ಎಲೀಷನಿಗೆ - ದಯವಿಟ್ಟು ನೀನು ಇಲ್ಲೇ ಇರು; ಯೆಹೋವನು ನನಗೆ ಬೇತೇಲಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾನೆ ಅನ್ನಲು ಎಲೀಷನು - ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟುಹೋಗುವದಿಲ್ಲ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಎಲೀಯನು ಎಲೀಷನಿಗೆ, “ನೀನು ದಯಮಾಡಿ ಇಲ್ಲಿ ಇರು. ಯೆಹೋವ ದೇವರು ನನ್ನನ್ನು ಬೇತೇಲಿಗೆ ಕಳುಹಿಸುತ್ತಿದ್ದಾರೆ,” ಎಂದನು. ಅದಕ್ಕೆ ಎಲೀಷನು, “ಯೆಹೋವ ದೇವರ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವುದಿಲ್ಲ,” ಎಂದನು. ಹಾಗೆಯೇ ಅವರು ಬೇತೇಲಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 2:2
17 ತಿಳಿವುಗಳ ಹೋಲಿಕೆ  

ಎಲೀಯನು ಎಲೀಷನಿಗೆ, “ದಯವಿಟ್ಟು ಇಲ್ಲಿಯೇ ಇರು, ಏಕೆಂದರೆ ಯೆಹೋವನು ಜೋರ್ಡನ್ ನದಿಗೆ ಹೋಗುವಂತೆ ನನಗೆ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಎಲೀಷನು, “ಯೆಹೋವನಾಣೆ, ನಿನ್ನಾಣೆ, ನಾನು ನಿನ್ನನ್ನು ಬಿಟ್ಟಿರುವುದಿಲ್ಲವೆಂದು ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು. ಅವರಿಬ್ಬರೂ ಮುಂದೆ ಸಾಗಿದರು.


ಆದರೆ ಮಗುವಿನ ತಾಯಿಯು, “ಯೆಹೋವನಾಣೆ, ನಿನ್ನಾಣೆ, ನಿನ್ನನ್ನು ಬಿಟ್ಟು ನಾನು ಹೋಗುವುದಿಲ್ಲ” ಎಂದು ಹೇಳಿದಳು. ಎಲೀಷನು ಮೇಲೆದ್ದು ಶೂನೇಮಿನ ಆ ಸ್ತ್ರೀಯನ್ನು ಹಿಂಬಾಲಿಸಿದನು.


ಎಲೀಯನು ಎಲೀಷನಿಗೆ, “ದಯವಿಟ್ಟು ಇಲ್ಲಿಯೇ ಇರು, ಏಕೆಂದರೆ ಯೆಹೋವನು ಜೆರಿಕೊವಿಗೆ ಹೋಗುವಂತೆ ನನಗೆ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಆದರೆ ಎಲೀಷನು, “ಯೆಹೋವನಾಣೆ, ನಿನ್ನಾಣೆ, ನಾನು ನಿನ್ನನ್ನು ಬಿಟ್ಟಿರುವುದಿಲ್ಲವೆಂದು ಪ್ರಮಾಣ ಮಾಡುತ್ತೇನೆ!” ಎಂದು ಹೇಳಿದನು. ಇಬ್ಬರೂ ಜೆರಿಕೊವಿಗೆ ಹೋದರು.


ಹನ್ನಳು, “ಸ್ವಾಮೀ, ನನ್ನನ್ನು ಕ್ಷಮಿಸಿ. ನಿಮ್ಮ ಬಳಿ ನಿಂತಿರುವ ನಾನೇ ಅಂದು ಯೆಹೋವನಿಗೆ ಪ್ರಾರ್ಥನೆ ಮಾಡಿದವಳು. ನಾನು ಹೇಳುತ್ತಿರುವುದು ನಿಜವೆಂದು ಪ್ರಮಾಣ ಮಾಡುತ್ತೇನೆ.


ನೀನು ಹೀಗೆ ಮಾಡಿದರೆ ನನ್ನ ಹೆಸರಿನ ಮೇಲೆ ಪ್ರಮಾಣ ಮಾಡಲು ಶಕ್ತಳಾಗುವೆ. ‘ಹಾದು, ಯೆಹೋವನಾಣೆ’ ಎಂದು ಹೇಳಶಕ್ತಳಾಗುವೆ. ನೀನು ಆ ಪದಗಳನ್ನು ಸತ್ಯವಾಗಿಯೂ ಪ್ರಾಮಾಣಿಕವಾಗಿಯೂ ಸರಿಯಾಗಿ ಉಪಯೋಗಿಸಲು ಸಾಧ್ಯವಾಗುತ್ತದೆ. ನೀನು ಹೀಗೆ ಮಾಡಿದರೆ, ಎಲ್ಲಾ ಜನಾಂಗಗಳು ಯೆಹೋವನ ಆಶೀರ್ವಾದವನ್ನು ಪಡೆಯುತ್ತವೆ. ಆತನ ಕಾರ್ಯಗಳಿಗಾಗಿ ಆತನಿಗೆ ಸ್ತೋತ್ರ ಮಾಡುತ್ತವೆ.”


ರಾಜನಾದ ಯಾರೊಬ್ಬಾಮನು ಇಸ್ರೇಲರಿಗೆ ತನ್ನದೇ ಆದ ಹಬ್ಬದ ದಿನವನ್ನು ಆರಿಸಿಕೊಂಡನು. ಅದು ಎಂಟನೆಯ ತಿಂಗಳ ಹದಿನೈದನೆಯ ದಿವಸವಾಗಿತ್ತು. ಆ ಸಮಯದಲ್ಲಿ ಅವನು ತಾನು ನಿರ್ಮಿಸಿದ ಯಜ್ಞವೇದಿಕೆಯ ಮೇಲೆ ಯಜ್ಞಗಳನ್ನು ಮತ್ತು ಧೂಪವನ್ನು ಅರ್ಪಿಸಿದನು. ಇದು ಬೇತೇಲ್ ನಗರದಲ್ಲಿ ನಡೆಯಿತು.


ಮುಗ್ದಜನರನ್ನು ಕೊಂದು ಅಪರಾಧಿಯಾಗದಂತೆ ಯೆಹೋವನು ನಿನ್ನನ್ನು ಕಾಪಾಡಿದ್ದಾನೆ. ಯೆಹೋವನ ಆಣೆಯಾಗಿಯೂ ನಿನ್ನ ಆಣೆಯಾಗಿಯೂ ನಿನ್ನ ಶತ್ರುಗಳೂ ನಿನಗೆ ಕೇಡುಮಾಡುವವರೂ ನಾಬಾಲನಂತಾಗಲಿ.


ಆ ಸ್ಥಳದ ಹೆಸರು ಲೂಜ್. ಆದರೆ ಯಾಕೋಬನು ಅದಕ್ಕೆ ಬೇತೇಲ್ ಎಂದು ಹೆಸರಿಟ್ಟನು.


ಕ್ರಿಸ್ತನ ಶತ್ರುಗಳು ನಮ್ಮ ಗುಂಪಿನಲ್ಲೇ ಇದ್ದರು. ಅವರು ನಮ್ಮನ್ನು ಬಿಟ್ಟುಹೋದರು. ಅವರು ನಿಜವಾಗಿಯೂ ನಮ್ಮವರಾಗಿರಲಿಲ್ಲ. ಅವರು ನಿಜವಾಗಿಯೂ ನಮ್ಮ ಸಭೆಗೆ ಸೇರಿದವರಾಗಿದ್ದರೆ ನಮ್ಮೊಂದಿಗೆ ಇರುತ್ತಿದ್ದರು. ಆದರೆ ಅವರು ಹೊರಟುಹೋದರು. ಅವರು ನಿಜವಾಗಿಯೂ ನಮ್ಮವರಾಗಿರಲಿಲ್ಲ ಎಂಬುದನ್ನು ಇದೇ ತೋರ್ಪಡಿಸುತ್ತದೆ.


ರಾಜನಾದ ಯಾರೊಬ್ಬಾಮನು ಒಂದು ಬಂಗಾರದ ಕರುವನ್ನು ಬೇತೇಲಿನಲ್ಲಿರಿಸಿದನು; ಮತ್ತೊಂದು ಬಂಗಾರದ ಕರುವನ್ನು ದಾನ್ ನಗರದಲ್ಲಿರಿಸಿದನು.


ದಾವೀದನು ಗೊಲ್ಯಾತನೊಂದಿಗೆ ಯುದ್ಧಕ್ಕೆ ಹೊರಟಿದ್ದನ್ನು ಸೌಲನು ಗಮನಿಸುತ್ತಿದ್ದನು. ಸೌಲನು ತನ್ನ ಸೇನಾಧಿಪತಿಯಾದ ಅಬ್ನೇರನನ್ನು, “ಆ ಯುವಕನ ತಂದೆ ಯಾರು?” ಎಂದು ಪ್ರಶ್ನಿಸಿದನು. ಅಬ್ನೇರನು, “ಅರಸನೇ, ನಿನ್ನ ಜೀವದಾಣೆ, ಅವನು ಯಾರೋ ನನಗೆ ಗೊತ್ತಿಲ್ಲ” ಎಂದು ಉತ್ತರಕೊಟ್ಟನು.


ಬಳಿಕ ರಾಜನು ಈಗ ತಾನೇನು ಮಾಡಬೇಕೆಂದು ತನ್ನ ಸಲಹೆಗಾರರನ್ನು ಕೇಳಿದನು. ಅವರು ತಮ್ಮ ಸಲಹೆಯನ್ನು ಅವನಿಗೆ ನೀಡಿದರು. ಯಾರೊಬ್ಬಾಮನು ಎರಡು ಬಂಗಾರದ ಕರುಗಳನ್ನು ಮಾಡಿಸಿ ಜನರಿಗೆ, “ನೀವು ಆರಾಧಿಸಲು ಜೆರುಸಲೇಮಿಗೆ ಹೋಗಲೇಬಾರದು. ಇಸ್ರೇಲರೇ, ನಿಮ್ಮನ್ನು ಈಜಿಪ್ಟಿನಿಂದ ಹೊರತಂದ ದೇವರುಗಳು ಇಲ್ಲಿವೆ” ಎಂದು ಹೇಳಿದನು.


ಎಲೀಷನು ಆ ನಗರದಿಂದ ಬೇತೇಲಿಗೆ ಹೋದನು. ಎಲೀಷನು ನಗರದಿಂದ ಬೆಟ್ಟದ ಮೇಲಕ್ಕೆ ಹೋಗುತ್ತಿದ್ದಾಗ, ಕೆಲವು ಬಾಲಕರು ನಗರದ ಕಡೆಯಿಂದ ಇಳಿಯುತ್ತಿದ್ದರು. ಅವರು ಎಲೀಷನನ್ನು ಹಾಸ್ಯಮಾಡಿ, “ಮೇಲಕ್ಕೆ ಹೋಗು, ಬೋಳುತಲೆಯವನೇ, ಮೇಲಕ್ಕೆ ಹೋಗು, ಬೋಳುತಲೆಯವನೇ” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು