Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 2:23 - ಪರಿಶುದ್ದ ಬೈಬಲ್‌

23 ಎಲೀಷನು ಆ ನಗರದಿಂದ ಬೇತೇಲಿಗೆ ಹೋದನು. ಎಲೀಷನು ನಗರದಿಂದ ಬೆಟ್ಟದ ಮೇಲಕ್ಕೆ ಹೋಗುತ್ತಿದ್ದಾಗ, ಕೆಲವು ಬಾಲಕರು ನಗರದ ಕಡೆಯಿಂದ ಇಳಿಯುತ್ತಿದ್ದರು. ಅವರು ಎಲೀಷನನ್ನು ಹಾಸ್ಯಮಾಡಿ, “ಮೇಲಕ್ಕೆ ಹೋಗು, ಬೋಳುತಲೆಯವನೇ, ಮೇಲಕ್ಕೆ ಹೋಗು, ಬೋಳುತಲೆಯವನೇ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಎಲೀಷನು ಅಲ್ಲಿಂದ ಬೇತೇಲಿಗೆ ಹೊರಟು ಅಲ್ಲಿನ ಗುಡ್ಡವನ್ನು ಹತ್ತುತ್ತಿರುವಾಗ, ಆ ಊರಿನ ಹುಡುಗರು ಹೊರಗೆ ಬಂದು, “ಬೋಳು ಮಂಡೆಯವನೇ ಏರಿ ಬಾ, ಬೋಳು ಮಂಡೆಯವನೇ ಏರಿ ಬಾ” ಎಂದು ಕೂಗಿ ಅವನನ್ನು ಪರಿಹಾಸ್ಯ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಎಲೀಷನು ಅಲ್ಲಿಂದ ಬೇತೇಲಿಗೆ ಹೊರಟನು. ಅಲ್ಲಿನ ಗುಡ್ಡವನ್ನು ಹತ್ತುತ್ತಿರುವಾಗ ಆ ಊರಿನ ಹುಡುಗರು ಹೊರಗೆ ಬಂದರು. “ಬೋಳು ತಲೆಯವನೇ, ಏರು; ಬೋಳುತಲೆಯವನೇ ಏರು,” ಎಂದು ಕೂಗಿ ಅವನನ್ನು ಅಣಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಎಲೀಷನು ಅಲ್ಲಿಂದ ಬೇತೇಲಿಗೆ ಹೊರಟು ಅಲ್ಲಿನ ಗುಡ್ಡವನ್ನು ಹತ್ತುತ್ತಿರುವಾಗ ಆ ಊರಿನ ಹುಡುಗರು ಹೊರಗೆ ಬಂದು - ಬೋಳಮಂಡೆಯವನೇ, ಏರು; ಬೋಳಮಂಡೆಯವನೇ, ಏರು ಎಂದು ಕೂಗಿ ಅವನನ್ನು ಪರಿಹಾಸ್ಯಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವನು ಆ ಸ್ಥಳವನ್ನು ಬಿಟ್ಟು ಬೇತೇಲಿಗೆ ಹೋದನು. ಅವನು ಮಾರ್ಗದಲ್ಲಿ ಏರಿ ಹೋಗುತ್ತಿರುವಾಗ, ಚಿಕ್ಕ ಹುಡುಗರು ಪಟ್ಟಣದಿಂದ ಹೊರಟುಬಂದು ಅವನನ್ನು ಹಾಸ್ಯಮಾಡಿ ಅವನಿಗೆ, “ಬೋಳು ತಲೆಯವನೇ, ಏರಿ ಹೋಗು; ಬೋಳು ತಲೆಯವನೇ, ಏರಿ ಹೋಗು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 2:23
34 ತಿಳಿವುಗಳ ಹೋಲಿಕೆ  

ಆದರೆ ಆತನ ಜನರು ಪ್ರವಾದಿಗಳನ್ನು ಹಾಸ್ಯಮಾಡಿದರು; ಅವರ ಮಾತುಗಳನ್ನು ಕೇಳಲು ನಿರಾಕರಿಸಿದರು; ದೇವರ ಸಂದೇಶವನ್ನು ದ್ವೇಷಿಸಿದರು. ಆಗ ದೇವರ ಕೋಪವು ಅವರ ಮೇಲೆ ಉರಿಯತೊಡಗಿತು. ಅದನ್ನು ನಿಲ್ಲಿಸಲು ಯಾರಿಗೂ ಸಾಧ್ಯವಾಗಲಿಲ್ಲ.


“ಈಗಲಾದರೋ, ನನಗಿಂತ ಚಿಕ್ಕವರೂ ನನ್ನನ್ನು ಗೇಲಿ ಮಾಡುತ್ತಾರೆ. ಅವರ ತಂದೆಗಳನ್ನು ನನ್ನ ಕುರಿಕಾಯುವ ನಾಯಿಗಳಿಗೂ ಯೋಗ್ಯರಲ್ಲವೆಂದು ತಳ್ಳಿಬಿಟ್ಟಿದ್ದೆನು.


ಚಿಕ್ಕಮಕ್ಕಳೂ ನನ್ನನ್ನು ಗೇಲಿ ಮಾಡುತ್ತಾರೆ; ನನ್ನನ್ನು ಕಂಡಾಗ ನಗುತ್ತಾರೆ.


ಕೆಡುಕರು ಜಂಬಕೊಚ್ಚಿಕೊಳ್ಳುತ್ತಾ ಒಳ್ಳೆಯವರ ಬಗ್ಗೆ ಸುಳ್ಳು ಹೇಳುವರು. ಅವರು ದುರಹಂಕಾರಿಗಳಾಗಿದ್ದಾರೆ; ಅವರ ಸುಳ್ಳುತುಟಿಗಳು ಮೌನಗೊಳ್ಳುತ್ತವೆ.


ಕೆಲವರು ಇತರರಿಂದ ಅಪಹಾಸ್ಯಕ್ಕೆ ಗುರಿಯಾದರು, ಪೆಟ್ಟುಗಳನ್ನು ಅನುಭವಿಸಿದರು, ಸೆರೆವಾಸದಲ್ಲಿದ್ದರು.


ಬೇತೇಲಿನಲ್ಲಿ ಇನ್ನು ನೀನು ಪ್ರವಾದಿಸುವದು ಬೇಡ. ಇದು ಯಾರೊಬ್ಬಾಮನ ಪವಿತ್ರಸ್ಥಳ. ಇದು ಇಸ್ರೇಲಿನ ದೇವಾಲಯ” ಎಂದು ಹೇಳಿದನು.


ಆದರೆ ಬೇತೇಲಿನಲ್ಲಿ ಹುಡುಕಬೇಡ, ಗಿಲ್ಗಾಲಿನಲ್ಲಿ ಕಾಲಿಡಬೇಡ. ಗಡಿಯನ್ನು ದಾಟಿ ಬೇರ್ಷೆಬಕ್ಕೆ ಹೋಗಬೇಡ. ಗಿಲ್ಗಾಲಿನ ಜನರು ಕೈದಿಗಳಂತೆ ತೆಗೆಯಲ್ಪಡುವರು. ಮತ್ತು ಬೇತೇಲ್ ನಾಶಮಾಡಲ್ಪಡುವದು.


ಯೆಹೋವನು ಹೀಗೆ ಹೇಳುತ್ತಾನೆ, “ಬೇತೇಲಿನಲ್ಲಿ ಪಾಪ ಮಾಡಿರಿ. ಗಿಲ್ಗಾಲಿಗೆ ಹೋಗಿ ಇನ್ನೂ ಹೆಚ್ಚಾಗಿ ಪಾಪ ಮಾಡಿರಿ. ನಿಮ್ಮ ಯಜ್ಞವನ್ನು ಮುಂಜಾನೆ ಸಮರ್ಪಿಸಿರಿ. ಮೂರು ದಿವಸಗಳ ಹಬ್ಬಕ್ಕೆ ನಿಮ್ಮ ಬೆಳೆಯ ಹತ್ತನೆಯ ಒಂದು ಭಾಗವನ್ನು ತೆಗೆದುಕೊಂಡು ಬನ್ನಿ.


ಇಸ್ರೇಲು ಪಾಪಮಾಡಿದೆ. ಅದಕ್ಕಾಗಿ ನಾನು ಅದನ್ನು ಶಿಕ್ಷಿಸುವೆನು. ಬೇತೇಲಿನಲ್ಲಿರುವ ವೇದಿಕೆಗಳನ್ನು ನಾನು ನಾಶಮಾಡುವೆನು. ವೇದಿಕೆಯ ಕೊಂಬುಗಳು ಮುರಿಯಲ್ಪಟ್ಟು ನೆಲದ ಮೇಲೆ ಬೀಳುವವು.


ಆ ದಿನದಲ್ಲಿ ಬೇತೇಲು ನಿನಗೆ ಆ ದುರ್ಗತಿಯನ್ನು ತರುವದು. ಯಾಕೆಂದರೆ ನೀನು ಅನೇಕ ಕೆಟ್ಟಕಾರ್ಯಗಳನ್ನು ಮಾಡಿರುವೆ. ಅದು ಪ್ರಾರಂಭವಾದಾಗ ಇಸ್ರೇಲಿನ ಅರಸನು ಸಂಪೂರ್ಣವಾಗಿ ನಾಶವಾಗುವನು.


ಸಮಾರ್ಯದ ಜನರು ಬೇತಾವೆನಿನಲ್ಲಿ ಬಸವನನ್ನು ಆರಾಧಿಸುತ್ತಾರೆ. ಆ ಜನರು ನಿಜವಾಗಿಯೂ ಅಳುವರು. ಅವರ ಪೂಜಾರಿಗಳೂ ಅಳುವರು, ಯಾಕೆಂದರೆ ಅವರ ಸುಂದರವಾದ ವಿಗ್ರಹವು ಇಲ್ಲವಾಗುವದು. ಅದು ಒಯ್ಯಲ್ಪಡುವುದು.


“ಇಸ್ರೇಲೇ, ನೀನು ಸೂಳೆಯಂತೆ ವರ್ತಿಸುತ್ತೀ. ಆದರೆ ಯೆಹೂದವನ್ನು ತಪ್ಪಿತಸ್ಥಳನ್ನಾಗಿ ಮಾಡಬೇಡ. ಗಿಲ್ಗಾಲಿಗಾಗಲಿ ಬೇತಾವೆನಿಗಾಗಲಿ ಹೋಗದಿರು. ಯೆಹೋವನ ಮೇಲೆ ಆಣೆ ಇಡಬೇಡ. ‘ಯೆಹೋವನಾಣೆ’ ಎಂದು ಹೇಳಬೇಡ.


ಯೆಹೂದದ ಜನರು ಹೀಗೆ ಮಾಡುತ್ತಿದ್ದಾರೆ; ಮಕ್ಕಳು ಸೌದೆಯನ್ನು ಆರಿಸುತ್ತಾರೆ. ತಂದೆಗಳು ಆ ಸೌಧೆಯಿಂದ ಬೆಂಕಿಯನ್ನು ಹೊತ್ತಿಸುತ್ತಾರೆ. ಹೆಂಗಸರು ಹಿಟ್ಟನ್ನು ನಾದಿ ಸ್ವರ್ಗದ ರಾಣಿಗಾಗಿ ಹೋಳಿಗೆಗಳನ್ನು ಮಾಡುತ್ತಾರೆ. ಈ ಯೆಹೂದದ ಜನರು ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ. ಅವರು ನನ್ನನ್ನು ರೇಗಿಸುವದಕ್ಕಾಗಿಯೇ ಹೀಗೆ ಮಾಡುತ್ತಾರೆ.


ಪ್ರಜೆಗಳು ಒಬ್ಬರಿಗೊಬ್ಬರು ವಿರೋಧಿಗಳಾಗುವರು; ಬಾಲಕರು ಹಿರಿಯರನ್ನು ಗೌರವಿಸರು. ಸಾಮಾನ್ಯರು ಗಣ್ಯವ್ಯಕ್ತಿಗಳನ್ನು ಸನ್ಮಾನಿಸರು.”


ಇಸ್ರೇಲ್ ದೇಶವು ಪಾಪದಿಂದ ತುಂಬಿಹೋಗಿದೆ; ಅವರ ಪಾಪವೇ ಅವರಿಗೆ ಭಾರವಾದ ಹೊರೆಯಾಗಿದೆ; ಅವರು ದುಷ್ಟಕುಟುಂಬಗಳ ಕೆಟ್ಟಮಕ್ಕಳಂತಿದ್ದಾರೆ. ಅವರು ಯೆಹೋವನನ್ನು ತ್ಯಜಿಸಿದ್ದಾರೆ; ಇಸ್ರೇಲಿನ ಪರಿಶುದ್ಧ ದೇವರನ್ನು ಅವಮಾನಪಡಿಸಿದ್ದಾರೆ; ಅವರು ಆತನನ್ನು ತೊರೆದು ಅಪರಿಚಿತನೋ ಎಂಬಂತೆ ಪರಿಗಣಿಸಿದ್ದಾರೆ.


ನಿಮ್ಮ ಕೋಪವು ನಿಮ್ಮನ್ನು ಹತೋಟಿಯಲ್ಲಿಡದಂತೆ ನೋಡಿಕೊಳ್ಳಿರಿ. ನಿಮ್ಮ ದೇಹವು ನಿಮ್ಮನ್ನು ಪಾಪಕ್ಕೆ ನಡೆಸದಂತೆ ನೋಡಿಕೊಳ್ಳಿರಿ. ಜನರು ಯೌವನಪ್ರಾಯದಲ್ಲಿರುವಾಗ, ಜೀವನದ ಆರಂಭದಲ್ಲಿಯೇ ಮೂಢಕಾರ್ಯಗಳನ್ನು ಮಾಡುವರು.


ಮಕ್ಕಳು ಮೂಢಕಾರ್ಯಗಳನ್ನು ಮಾಡುವರು. ನೀವು ಅವರನ್ನು ಶಿಕ್ಷಿಸಿದರೆ, ಅವುಗಳನ್ನು ಮಾಡಬಾರದೆಂದು ಅವರಿಗೆ ಗೊತ್ತಾಗುವುದು.


ಮಗನಿಗೆ ಬಾಲ್ಯದಲ್ಲಿಯೇ ಒಳ್ಳೆಯ ಮಾರ್ಗವನ್ನು ಉಪದೇಶಿಸು. ಅವನು ಬೆಳೆದು ದೊಡ್ಡವನಾದಾಗ ಅದೇ ರೀತಿಯಲ್ಲಿ ಜೀವಿಸುವನು.


ಬಾಲಕನೊಬ್ಬನು ಒಳ್ಳೆಯವನೋ ಕೆಟ್ಟವನೋ ಎಂಬುದು ಅವನ ನಡತೆಯಿಂದಲೇ ತೋರಿಬರುವುದು.


ಆದರೆ ನಾನು ಆಪತ್ತಿನಲ್ಲಿದ್ದಾಗ ಅವರು ನನ್ನನ್ನು ಗೇಲಿಮಾಡಿದರು, ಅವರು ನನ್ನ ನಿಜವಾದ ಸ್ನೇಹಿತರಲ್ಲ; ಅವರ ಪರಿಚಯವೂ ನನಗಿರಲಿಲ್ಲ. ಅವರು ನನ್ನ ಸುತ್ತಲೂ ಸೇರಿಬಂದು ನನ್ನ ಮೇಲೆ ಆಕ್ರಮಣ ಮಾಡಿದರು.


ಮೊದಲು, ಈಜಿಪ್ಟಿನ ಸೇವಕಿಯಾದ ಹಾಗರಳಲ್ಲಿ ಒಬ್ಬ ಮಗನು ಹುಟ್ಟಿದ್ದನು. ಅವನಿಗೂ ಅಬ್ರಹಾಮನು ತಂದೆಯಾಗಿದ್ದನು. ಆದರೆ ಆ ಮೊದಲನೆ ಮಗನು ಇಸಾಕನಿಗೆ ತೊಂದರೆ ಕೊಡುವುದನ್ನು ಸಾರಳು ಗಮನಿಸಿದಳು.


ಎಲೀಯ ಮತ್ತು ಎಲೀಷ ಒಟ್ಟಿಗೆ ನಡೆಯುತ್ತಾ ಮಾತನಾಡುತ್ತಿದ್ದರು. ಇದ್ದಕ್ಕಿದ್ದಂತೆ, ಕೆಲವು ಕುದುರೆಗಳು ಮತ್ತು ರಥಗಳು ಬಂದು ಎಲೀಯನನ್ನು ಎಲೀಷನಿಂದ ಬೇರ್ಪಡಿಸಿದವು. ಆ ಕುದುರೆಗಳು ಮತ್ತು ರಥಗಳು ಬೆಂಕಿಯಂತಿದ್ದವು! ನಂತರ ಎಲೀಯನು ಸುಂಟರ ಗಾಳಿಯಲ್ಲಿ ಪರಲೋಕಕ್ಕೆ ಏರಿಹೋದನು.


“ಒಬ್ಬ ಮನುಷ್ಯನ ತಲೆಕೂದಲು ಉದುರಿಹೋಗುತ್ತಿದ್ದರೆ ಅವನು ಶುದ್ಧನಾಗಿದ್ದಾನೆ. ಅವನು ಬೋಳುತಲೆಯವನಷ್ಟೆ.


ಆ ನೀರು ಶುದ್ಧವಾಯಿತು. ಇಂದು ಆ ನೀರು ಇನ್ನೂ ಶುದ್ಧವಾಗಿದೆ. ಎಲೀಷನು ಹೇಳಿದಂತೆಯೇ ಅದು ಸಂಭವಿಸಿತು.


ಯೆಹೋವನೇ, ನಾನು ನಿನ್ನಲ್ಲಿ ಪ್ರಾರ್ಥಿಸಿದೆನು. ಆದ್ದರಿಂದ ನಾನು ನಿರಾಶನಾಗುವುದಿಲ್ಲ. ಕೆಡುಕರಾದರೋ ನಿರಾಶರಾಗುವರು. ಅವರು ಮೌನವಾಗಿ ಸಮಾಧಿಗೆ ಹೋಗುವರು.


ಎಲೀಯನು ಎಲೀಷನಿಗೆ, “ದಯವಿಟ್ಟು ಇಲ್ಲಿಯೇ ಇರು; ಏಕೆಂದರೆ ಬೇತೇಲಿಗೆ ಹೋಗುವಂತೆ ಯೆಹೋವನು ನನಗೆ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಆದರೆ ಎಲೀಷನು, “ಯೆಹೋವನಾಣೆ, ನಿನ್ನಾಣೆ, ನಾನು ನಿನ್ನನ್ನು ಬಿಟ್ಟಿರುವುದಿಲ್ಲವೆಂದು ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು. ಇಬ್ಬರೂ ಬೇತೇಲಿಗೆ ಹೋದರು.


ಯೆಹೋವನೇ, ನೀನು ನನ್ನನ್ನು ಮರುಳುಗೊಳಿಸಿದೆ, ನಿಜವಾಗಿಯೂ ನಾನು ಮರುಳಾದೆನು, ನೀನು ನನಗಿಂತ ಬಲಿಷ್ಠನಾದುದರಿಂದ ಗೆದ್ದೆ. ನಾನೊಂದು ತಮಾಷೆಯಾಗಿದ್ದೇನೆ. ಹಗಲೆಲ್ಲ ಜನರು ನನ್ನನ್ನು ಕಂಡು ನಗುತ್ತಾರೆ. ನನ್ನನ್ನು ಗೇಲಿ ಮಾಡುತ್ತಾರೆ.


ನಾನು ಮಾತನಾಡಿದಾಗಲೆಲ್ಲ ಕೂಗಿಕೂಗಿ ಹೇಳುತ್ತೇನೆ. ನಾನು ಯಾವಾಗಲೂ ಹಿಂಸೆ ಮತ್ತು ವಿನಾಶದ ಬಗ್ಗೆ ಕೂಗಿಕೊಳ್ಳುತ್ತೇನೆ. ಯೆಹೋವನಿಂದ ಬಂದ ಸಂದೇಶದ ಬಗ್ಗೆ ಜನರಿಗೆ ಹೇಳುತ್ತೇನೆ. ಆದರೆ ಜನರು ಯಾವಾಗಲೂ ನನಗೆ ಅವಮಾನ ಮಾಡುತ್ತಾರೆ. ನನ್ನನ್ನು ಗೇಲಿ ಮಾಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು