Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 2:24 - ಪರಿಶುದ್ದ ಬೈಬಲ್‌

24 ಎಲೀಷನು ಹಿಂದಕ್ಕೆ ತಿರುಗಿ ಅವರನ್ನು ನೋಡಿ ಅವರಿಗೆ ಕೇಡಾಗುವಂತೆ ಯೆಹೋವನನ್ನು ಕೇಳಿಕೊಂಡನು. ಆಗ ಕಾಡಿನಿಂದ ಎರಡು ಕರಡಿಗಳು ಹೊರಗೆ ಬಂದು ಅವರ ಮೇಲೆರಗಿ ನಲವತ್ತೆರಡು ಮಂದಿ ಬಾಲಕರನ್ನು ಸೀಳಿಹಾಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವನು ಅವರ ಕಡೆಗೆ ತಿರುಗಿಕೊಂಡು ಯೆಹೋವನ ಹೆಸರಿನಲ್ಲಿ ಅವರನ್ನು ಶಪಿಸಿದನು. ಕೂಡಲೆ ಕಾಡಿನಿಂದ ಎರಡು ಹೆಣ್ಣು ಕರಡಿಗಳು ಬಂದು ಆ ಹುಡುಗರಲ್ಲಿ ನಲ್ವತ್ತೆರಡು ಮಂದಿಯನ್ನು ಹರಿದುಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಎಲೀಷನು ಅವರ ಕಡೆಗೆ ತಿರುಗಿ, ಸರ್ವೇಶ್ವರನ ಹೆಸರಿನಲ್ಲಿ ಅವರನ್ನು ಶಪಿಸಿದನು. ಕೂಡಲೆ ಕಾಡಿನಿಂದ ಎರಡು ಹೆಣ್ಣುಕರಡಿಗಳು ಬಂದು ಆ ಹುಡುಗರಲ್ಲಿ ನಾಲ್ವತ್ತೆರಡು ಮಂದಿಯನ್ನು ಸೀಳಿಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವನು ಅವರ ಕಡೆಗೆ ತಿರುಗಿಕೊಂಡು ಯೆಹೋವನ ಹೆಸರಿನಲ್ಲಿ ಅವರನ್ನು ಶಪಿಸಿದನು. ಕೂಡಲೆ ಕಾಡಿನಿಂದ ಎರಡು ಹೆಣ್ಣು ಕರಡಿಗಳು ಬಂದು ಆ ಹುಡುಗರಲ್ಲಿ ನಾಲ್ವತ್ತೆರಡು ಮಂದಿಯನ್ನು ಹರಿದುಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅವನು ಹಿಂದಿರುಗಿ ಅವರನ್ನು ನೋಡಿ, ಯೆಹೋವ ದೇವರ ಹೆಸರಿನಲ್ಲಿ ಅವರನ್ನು ಶಪಿಸಿದನು. ಆಗ ಅಡವಿಯಿಂದ ಎರಡು ಕರಡಿಗಳು ಹೊರಟು, ಅವರಲ್ಲಿ ನಾಲ್ವತ್ತೆರಡು ಹುಡುಗರನ್ನು ಸೀಳಿಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 2:24
28 ತಿಳಿವುಗಳ ಹೋಲಿಕೆ  

ಪೇತ್ರನು ಆಕೆಗೆ, “ನೀನು ಮತ್ತು ನಿನ್ನ ಗಂಡನು ಪ್ರಭುವಿನ ಆತ್ಮನನ್ನು ಪರೀಕ್ಷಿಸಲು ಒಪ್ಪಿಕೊಂಡಿದ್ದೇಕೆ? ಅಗೋ, ನಿನ್ನ ಗಂಡನನ್ನು ಹೂಳಿಟ್ಟ ಜನರು ಬಾಗಿಲ ಬಳಿಗೆ ಬಂದಿದ್ದಾರೆ! ಅವರು ನಿನ್ನನ್ನೂ ಅದೇರೀತಿ ಹೊತ್ತುಕೊಂಡು ಹೋಗುವರು” ಎಂದು ಹೇಳಿದನು.


ಅನನೀಯನು ಇದನ್ನು ಕೇಳಿದ ಕೂಡಲೇ ಕೆಳಗೆ ಬಿದ್ದು ಸತ್ತುಹೋದನು. ಕೆಲವು ಯೌವನಸ್ಥರು ಬಂದು ಅವನ ದೇಹವನ್ನು ಬಟ್ಟೆಯಲ್ಲಿ ಸುತ್ತಿದರು. ಅವರು ಅದನ್ನು ಹೊತ್ತುಕೊಂಡು ಹೋಗಿ ಸಮಾಧಿಮಾಡಿದರು. ಇದರ ಬಗ್ಗೆ ಕೇಳಿದ ಪ್ರತಿಯೊಬ್ಬರೂ ಭಯಭ್ರಾಂತರಾದರು.


ಆದರೆ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಿನ್ನ ಹೆಂಡತಿಯು ಪಟ್ಟಣದೊಳಗೆ ವೇಶ್ಯೆಯಾಗುವಳು. ನಿನ್ನ ಗಂಡು, ಹೆಣ್ಣುಮಕ್ಕಳು ಕತ್ತಿಯಿಂದ ಸಾಯುವರು. ಅನ್ಯರು ನಿನ್ನ ದೇಶವನ್ನು ಕಿತ್ತುಕೊಂಡು ತಮ್ಮೊಳಗೆ ಹಂಚಿಕೊಳ್ಳುವರು. ಮತ್ತು ನೀನು ಪರದೇಶದಲ್ಲಿ ಸಾಯುವೆ. ಇಸ್ರೇಲಿನ ಜನರು ಖಂಡಿತವಾಗಿಯೂ ಸೆರೆಹಿಡಿಯಲ್ಪಟ್ಟು ತಮ್ಮ ದೇಶದಿಂದ ಒಯ್ಯಲ್ಪಡುವರು.’”


ತನ್ನ ಮರಿಗಳನ್ನು ಕಳೆದುಕೊಂಡ ಕರಡಿಯಂತೆ ಅವರ ಮೇಲರಗಿ ಅವರನ್ನು ಗಾಯಗೊಳಿಸಿ ಅವರ ಎದೆಯನ್ನು ಸೀಳಿ ಬಿಡುವೆನು. ನಾನು ಸಿಂಹದಂತೆಯೂ ಕ್ರೂರ ಮೃಗದಂತೆಯೂ ಅವರನ್ನು ಸೀಳಿ ತಿಂದುಬಿಡುವೆನು.”


ಪೇತ್ರನು ಸಿಮೋನನಿಗೆ, “ನೀನೂ ನಾಶವಾಗು! ನಿನ್ನ ಹಣವೂ ನಾಶವಾಗಲಿ! ದೇವರ ವರವನ್ನು ಹಣದಿಂದ ಕೊಂಡುಕೊಳ್ಳಬಹುದೆಂದು ನೀನು ಭಾವಿಸಿದೆ.


ಪೇತ್ರನು ಆ ಮರವನ್ನು ಜ್ಞಾಪಿಸಿಕೊಂಡು, ಯೇಸುವಿಗೆ, “ಗುರುವೇ, ನೋಡು! ನಿನ್ನೆ ನೀನು ಶಪಿಸಿದ ಅಂಜೂರದ ಮರ ಒಣಗಿಹೋಗಿದೆ!” ಎಂದನು.


ಆದ್ದರಿಂದ ಯೇಸು ಆ ಮರಕ್ಕೆ, “ಇನ್ನು ಮೇಲೆ ನಿನ್ನ ಹಣ್ಣನ್ನು ಯಾರೂ ತಿನ್ನದಂತಾಗಲಿ” ಎಂದನು. ಯೇಸುವಿನ ಶಿಷ್ಯರಿಗೂ ಈ ಮಾತು ಕೇಳಿಸಿತು.


ಅವರ ಹೃದಯವನ್ನು ಕಠಿಣಗೊಳಿಸು! ಬಳಿಕ ಅವರನ್ನು ಶಪಿಸು!


ಅದಕ್ಕಾಗಿ ಯೆಹೋವನು ಹೀಗೆ ಹೇಳುತ್ತಾನೆ: ‘ಹನನ್ಯನೇ, ನಾನು ನಿನ್ನನ್ನು ಶೀಘ್ರದಲ್ಲಿ ಈ ಜಗತ್ತಿನಿಂದ ತೆಗೆದುಬಿಡುತ್ತೇನೆ. ನೀನು ಈ ವರ್ಷ ಮರಣಹೊಂದುವೆ. ಏಕೆಂದರೆ ನೀನು ಜನರನ್ನು ಯೆಹೋವನ ವಿರುದ್ಧ ತಿರುಗುವಂತೆ ಮಾಡಿದೆ.’”


ಆದ್ದರಿಂದ ಮೊದಲನೆಯ ಪ್ರವಾದಿಯು, “ಯೆಹೋವನ ಆಜ್ಞೆಗೆ ನೀನು ವಿಧೇಯನಾಗಲಿಲ್ಲ. ನೀನು ಈ ಸ್ಥಳವನ್ನು ಬಿಟ್ಟು ಹೊರಟಾಗ ನಿನ್ನನ್ನು ಒಂದು ಸಿಂಹವು ಕೊಂದುಹಾಕುತ್ತದೆ” ಎಂದು ಹೇಳಿದನು. ಎರಡನೆಯ ಪ್ರವಾದಿಯು ಆ ಸ್ಥಳವನ್ನು ಬಿಟ್ಟು ಹೊರಟಾಗ ಒಂದು ಸಿಂಹವು ಅವನನ್ನು ಕೊಂದುಹಾಕಿತು.


ಹಜಾಯೇಲನು ಕೆಟ್ಟವರಾದ ಅನೇಕ ಜನರನ್ನು ಕೊಲ್ಲುತ್ತಾನೆ. ಹಜಾಯೇಲನ ಖಡ್ಗದಿಂದ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುತ್ತಾನೆ. ಯೇಹುವಿನಿಂದ ತಪ್ಪಿಸಿಕೊಂಡ ಆ ಕೆಟ್ಟ ಜನರನ್ನೆಲ್ಲ ಎಲೀಷನು ಕೊಲ್ಲುತ್ತಾನೆ.


ಅವನು ತನ್ನ ಮನೆಗೆ ಹಿಂತಿರುಗಿ ಹೋಗುತ್ತಿರುವಾಗ ದಾರಿಯಲ್ಲಿ ಒಂದು ಸಿಂಹವು ಅವನ ಮೇಲೆರಗಿ ಅವನನ್ನು ಕೊಂದುಹಾಕಿತು. ಪ್ರವಾದಿಯ ದೇಹವು ರಸ್ತೆಯ ಮೇಲೆ ಬಿದ್ದಿತ್ತು. ಕತ್ತೆ ಮತ್ತು ಸಿಂಹವು ಆ ದೇಹದ ಹತ್ತಿರ ನಿಂತಿದ್ದವು.


ಅವನು ಮಾತನ್ನು ಮುಂದುವರಿಸಿ, “ನಿನ್ನ ತಂದೆಯು ಮತ್ತು ಅವನ ಜನರು ಶೂರರೆಂಬುದು ನಿನಗೆ ತಿಳಿದಿದೆ. ಕಾಡಿನಲ್ಲಿ ತನ್ನ ಮರಿಗಳನ್ನು ಕಳೆದುಕೊಂಡ ಕರಡಿಯಂತೆ ಅವರು ರೋಷವುಳ್ಳವರಾಗಿದ್ದಾರೆ. ನಿನ್ನ ತಂದೆಯು ಒಬ್ಬ ನುರಿತ ಹೋರಾಟಗಾರ. ಅವನು ಜನರೊಂದಿಗೆ ರಾತ್ರಿಯಲ್ಲಿ ಇರುವುದಿಲ್ಲ.


ದೇವರು ಶೆಕೆಮ್ ನಗರದ ಜನರನ್ನೂ ಸಹ ಅವರು ಮಾಡಿದ ದುಷ್ಕೃತ್ಯಗಳಿಗಾಗಿ ದಂಡಿಸಿದನು. ಹೀಗೆ ಯೆರುಬ್ಬಾಳನ (ಗಿದ್ಯೋನ) ಕಿರಿಯ ಮಗನಾದ ಯೋತಾಮನು ನುಡಿದಂತೆಯೇ ಆಯಿತು.


ನಿಮ್ಮ ದೇವರಾದ ಯೆಹೋವನೆಂಬ ನನಗೆ ಸಲ್ಲತಕ್ಕ ಗೌರವವನ್ನು ನೀವು ಬೇರೆಯವರಿಗೆ ಸಲ್ಲಿಸಿದರೆ ನಾನು ನಿಮ್ಮನ್ನು ದ್ವೇಷಿಸುತ್ತೇನೆ. ನನಗೆ ವಿರುದ್ಧವಾಗಿ ಪಾಪಮಾಡುವವರ ದೋಷಫಲವನ್ನು ಅವರ ಮೂರು ನಾಲ್ಕು ತಲೆಮಾರುಗಳವರೆಗೂ ಬರಮಾಡುವೆನು.


ಆದ್ದರಿಂದ ನೋಹನು, “ಕಾನಾನನು ತನ್ನ ಸಹೋದರರಿಗೆಲ್ಲಾ ಕೀಳಾದ ಗುಲಾಮನಾಗಿರಲಿ” ಎಂದು ಶಪಿಸಿದನು.


ನಿಮ್ಮಲ್ಲಿ ಕ್ರಿಸ್ತನಿಗೆ ವಿಧೇಯರಾಗದಿರುವ ಯಾರನ್ನೇ ಆಗಲಿ ಶಿಕ್ಷಿಸಲು ಸಿದ್ಧರಾಗಿದ್ದೇವೆ. ಆದರೆ ಮೊಟ್ಟಮೊದಲನೆಯದಾಗಿ, ನೀವು ಪೂರ್ಣ ವಿಧೇಯರಾಗಬೇಕೆಂದು ಅಪೇಕ್ಷಿಸುತ್ತೇವೆ.


ಬಲಹೀನರನ್ನು ಆಳುವ ಕೆಡುಕನು ಗರ್ಜಿಸುವ ಸಿಂಹದಂತಿರುವನು; ಮೇಲೆರಗಲಿರುವ ಕರಡಿಯಂತಿರುವನು.


ಮೂಢಕಾರ್ಯಗಳಲ್ಲಿ ನಿರತನಾಗಿರುವ ಮೂಢನನ್ನು ಭೇಟಿಯಾಗುವುದಕ್ಕಿಂತ ತನ್ನ ಮರಿಗಳನ್ನು ಕಳೆದುಕೊಂಡು ಕೋಪದಿಂದಿರುವ ತಾಯಿಕರಡಿಗೆ ಎದುರಾಗುವುದೇ ಮೇಲು.


ಆದರೆ ನೀವು ಮಾಡಿದ್ದು ಸರಿಯಾಗಿರದ ಪಕ್ಷದಲ್ಲಿ ಶೆಕೆಮಿನ ಹಿರಿಯರಾದ ನಿಮ್ಮನ್ನೂ ಮಿಲ್ಲೋ ಕೋಟೆಯವರನ್ನೂ ಅಬೀಮೆಲೆಕನು ನಾಶಮಾಡಲಿ. ಅಬೀಮೆಲೆಕನು ಕೂಡ ನಾಶಹೊಂದಲಿ” ಎಂದನು.


ಎಲೀಷನು ಬೇತೇಲನ್ನು ಬಿಟ್ಟು ಕಾರ್ಮೆಲ್ ಬೆಟ್ಟಕ್ಕೆ ಹೋದನು. ಅಲ್ಲಿಂದ ಎಲೀಷನು ಸಮಾರ್ಯಕ್ಕೆ ಹಿಂದಿರುಗಿ ಹೋದನು.


ನಿಮಗೆ ವಿರುದ್ಧವಾಗಿ ನಾನು ಕ್ರೂರ ಮೃಗಗಳನ್ನು ಕಳುಹಿಸುವೆನು. ಅವುಗಳು ನಿಮ್ಮ ಮಕ್ಕಳನ್ನು ತಿಂದು ಬಿಡುವವು; ನಿಮ್ಮ ಪಶುಗಳನ್ನು ನಾಶಮಾಡುವವು. ಅವು ನಿಮ್ಮಲ್ಲಿ ಅನೇಕ ಜನರನ್ನು ಕೊಲ್ಲುವವು. ದಾರಿಗಳು ಜನಸಂಚಾರವಿಲ್ಲದೆ ಬರಿದಾಗಿರುವವು.


ದುರಾಭಿಮಾನಿಯು ಶಿಕ್ಷೆಗೆ ಗುರಿಯಾಗಿ ದಂಡಿಸಲ್ಪಡುವನು; ಮೂಢನು ತನಗಾಗಿ ಕಾದಿರುವ ದಂಡನೆಯನ್ನು ಅನುಭವಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು