Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 2:25 - ಪರಿಶುದ್ದ ಬೈಬಲ್‌

25 ಎಲೀಷನು ಬೇತೇಲನ್ನು ಬಿಟ್ಟು ಕಾರ್ಮೆಲ್ ಬೆಟ್ಟಕ್ಕೆ ಹೋದನು. ಅಲ್ಲಿಂದ ಎಲೀಷನು ಸಮಾರ್ಯಕ್ಕೆ ಹಿಂದಿರುಗಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಎಲೀಷನು ಅಲ್ಲಿಂದ ಕರ್ಮೆಲ್ ಬೆಟ್ಟಕ್ಕೆ ಹೋಗಿ ಅನಂತರ ಸಮಾರ್ಯಕ್ಕೆ ಹಿಂದಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಎಲೀಷನು ಅಲ್ಲಿಂದ ಕಾರ್ಮೆಲ್ ಬೆಟ್ಟಕ್ಕೆ ಹೋಗಿ ಅನಂತರ ಸಮಾರಿಯಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಎಲೀಷನು ಅಲ್ಲಿಂದ ಕರ್ಮೆಲ್‍ಬೆಟ್ಟಕ್ಕೆ ಹೋಗಿ ಅನಂತರ ಸಮಾರ್ಯಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅವನು ಆ ಸ್ಥಳವನ್ನು ಬಿಟ್ಟು ಕರ್ಮೆಲ್ ಬೆಟ್ಟಕ್ಕೆ ಹೋದನು. ಅಲ್ಲಿಂದ ಸಮಾರ್ಯಕ್ಕೆ ಇಳಿದು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 2:25
6 ತಿಳಿವುಗಳ ಹೋಲಿಕೆ  

ಆ ಸ್ತ್ರೀಯು ದೇವಮನುಷ್ಯನನ್ನು ಕಾಣಲು ಕರ್ಮೆಲ್ ಪರ್ವತಕ್ಕೆ ಹೋದಳು. ಶೂನೇಮಿನ ಸ್ತ್ರೀಯು ದೂರದಿಂದ ಬರುತ್ತಿರುವುದನ್ನು ಕಂಡ ಎಲೀಷನು ತನ್ನ ಸೇವಕನಾದ ಗೇಹಜಿಗೆ, “ನೋಡು, ಶೂನೇಮ್ಯಳಾದ ಸ್ತ್ರೀಯು ಬರುತ್ತಿದ್ದಾಳೆ!


ರಾಜನಾದ ಅಹಾಬನು ಅನ್ನಪಾನಗಳನ್ನು ತೆಗೆದುಕೊಳ್ಳಲು ಹೋದನು. ಅದೇ ಸಮಯದಲ್ಲಿ ಎಲೀಯನು ಕರ್ಮೆಲ್ ಬೆಟ್ಟದ ತುದಿಗೆ ಹತ್ತಿದನು. ಎಲೀಯನು ಬೆಟ್ಟದ ತುದಿಯಲ್ಲಿ ಸಾಷ್ಟಾಂಗವೆರಗಿದನು. ಅವನು ತನ್ನ ಮೊಣಕಾಲುಗಳ ನಡುವೆ ತಲೆಯನ್ನು ಇಟ್ಟುಕೊಂಡನು.


ಆದರೆ ಯೆಹೋಷಾಫಾಟನು, “ಯೆಹೋವನ ಪ್ರವಾದಿಗಳಲ್ಲಿ ನಿಜವಾಗಿಯೂ ಯಾರಾದರೊಬ್ಬರು ಇಲ್ಲಿರಬೇಕು. ನಾವೇನು ಮಾಡಬೇಕೆಂದು ಯೆಹೋವನು ಹೇಳುತ್ತಾನೆ. ಅದಕ್ಕಾಗಿ ನಾವು ಆ ಪ್ರವಾದಿಯನ್ನು ಕೇಳೋಣ” ಎಂದು ಹೇಳಿದನು. ಇಸ್ರೇಲಿನ ರಾಜನ ಸೇವಕರಲ್ಲಿ ಒಬ್ಬನು, “ಶಾಫಾಟನ ಮಗನಾದ ಎಲೀಷನು ಇಲ್ಲಿಯೇ ಇದ್ದಾನೆ. ಎಲೀಷನು ಎಲೀಯನ ಸೇವಕನಾಗಿದ್ದನು” ಎಂದು ಹೇಳಿದನು.


ಅಲಮ್ಮೆಲೆಕ್, ಅಮಾದ್ ಮತ್ತು ಮಿಷಾಲ್. ಇದರ ಪಶ್ಚಿಮ ಮೇರೆಯು ಕರ್ಮೆಲ್ ಬೆಟ್ಟ ಮತ್ತು ಶೀಹೋರ್‌ಲಿಬ್ನತ್‌ವರೆಗೆ ಚಾಚಿಕೊಂಡಿತ್ತು.


ಅಹಜ್ಯನು ಎಲೀಯನ ಬಳಿಗೆ ಒಬ್ಬ ಸೇನಾಧಿಪತಿಯನ್ನು ಮತ್ತು ಐವತ್ತು ಮಂದಿ ಜನರನ್ನು ಕಳುಹಿಸಿದನು. ಸೇನಾಧಿಪತಿಯು ಎಲೀಯನ ಬಳಿಗೆ ಹೋದನು. ಆ ಸಮಯದಲ್ಲಿ ಎಲೀಯನು ಬೆಟ್ಟದ ತುದಿಯಲ್ಲಿ ಕುಳಿತಿದ್ದನು. ಆ ಸೇನಾಧಿಪತಿಯು ಎಲೀಯನಿಗೆ, “ದೇವಮನುಷ್ಯನೇ, ರಾಜನು ಹೇಳುತ್ತಾನೆ, ‘ಕೆಳಗಿಳಿದು ಬಾ’” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು