2 ಅರಸುಗಳು 2:3 - ಪರಿಶುದ್ದ ಬೈಬಲ್3 ಬೇತೇಲಿನಲ್ಲಿ ಪ್ರವಾದಿಗಳ ಗುಂಪೊಂದು ಎಲೀಷನ ಬಳಿಗೆ ಬಂದು, ಅವನಿಗೆ, “ಯೆಹೋವನು ಈ ದಿನ ನಿನ್ನ ಒಡೆಯನನ್ನು ನಿನ್ನಿಂದ ತೆಗೆದುಕೊಳ್ಳುತ್ತಾನೆಂಬುದು ನಿನಗೆ ತಿಳಿದಿದೆಯೇ?” ಎಂದು ಕೇಳಿದರು. ಎಲೀಷನು, “ಹೌದು, ನನಗೆ ಅದು ತಿಳಿದಿದೆ. ಅದರ ಬಗ್ಗೆ ಮಾತನಾಡಬೇಡಿ” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಬೇತೇಲಿನ ಪ್ರವಾದಿ ಮಂಡಳಿಯವರು ಎಲೀಷನನ್ನು ಎದುರುಗೊಂಡು ಅವನನ್ನು, “ಯೆಹೋವನು ಈ ಹೊತ್ತು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತೆಗೆದುಕೊಳ್ಳುವನೆಂಬುದು ನಿನಗೆ ಗೊತ್ತುಂಟೋ?” ಎಂದು ಕೇಳಿದರು. ಅದಕ್ಕೆ ಅವನು, “ಗೊತ್ತಿದೆ ನೀವು ಸುಮ್ಮನಿರಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಬೇತೇಲಿನ ಪ್ರವಾದಿಮಂಡಲಿಯವರು ಎಲೀಷನನ್ನು ಭೇಟಿಯಾದರು. “ಸರ್ವೇಶ್ವರ ಈ ದಿನ ನಿಮ್ಮ ಗುರುವನ್ನು ನಿಮ್ಮ ಬಳಿಯಿಂದ ಮೇಲಕ್ಕೆ ತೆಗೆದುಕೊಳ್ಳುವರೆಂಬುದು ನಿಮಗೆ ಗೊತ್ತೇ?” ಎಂದು ಕೇಳಿದರು. ಅದಕ್ಕೆ ಎಲೀಷನು, “ನನಗೆ ಗೊತ್ತಿದೆ; ಆದರೆ ನೀವು ಸುಮ್ಮನಿರಿ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ತರುವಾಯ ಅವರಿಬ್ಬರೂ ಬೇತೇಲಿಗೆ ಹೋದರು. ಬೇತೇಲಿನ ಪ್ರವಾದಿಮಂಡಲಿಯವರು ಎಲೀಷನನ್ನು ಎದುರುಗೊಂಡು ಅವನನ್ನು - ಯೆಹೋವನು ಈಹೊತ್ತು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ಮೇಲಕ್ಕೆ ತೆಗೆದುಕೊಳ್ಳುವನೆಂಬದು ನಿನಗೆ ಗೊತ್ತುಂಟೋ ಎಂದು ಕೇಳಿದರು. ಅದಕ್ಕೆ ಅವನು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಗ ಬೇತೇಲಿನಲ್ಲಿರುವ ಪ್ರವಾದಿಗಳ ಗುಂಪು ಎಲೀಷನ ಬಳಿಗೆ ಬಂದು ಅವನಿಗೆ, “ಇಂದು ಯೆಹೋವ ದೇವರು ನಿನ್ನ ಯಜಮಾನನನ್ನು ನಿನ್ನಿಂದ ತೆಗೆದುಕೊಳ್ಳುವರೆಂದು ತಿಳಿದಿದ್ದೀಯೋ?” ಎಂದರು. ಅದಕ್ಕವನು, “ಹೌದು, ನಾನು ಕೂಡಾ ಬಲ್ಲೆ, ಸುಮ್ಮನೆ ಇರಿ,” ಎಂದನು. ಅಧ್ಯಾಯವನ್ನು ನೋಡಿ |
ಒಂದು ದಿನ ಪ್ರವಾದಿಮಂಡಲಿಯವರಲ್ಲೊಬ್ಬನ ಪತ್ನಿಯು ಗೋಳಾಡುತ್ತಾ ಎಲೀಷನಲ್ಲಿಗೆ ಹೋಗಿ, “ನನ್ನ ಗಂಡನು ನಿನಗೆ ಸೇವಕನಂತಿದ್ದನು. ಈಗ ನನ್ನ ಗಂಡ ಸತ್ತಿದ್ದಾನೆ! ಅವನು ಯೆಹೋವನಲ್ಲಿ ಭಯಭಕ್ತಿ ಉಳ್ಳವನಾಗಿದ್ದದು ನಿನಗೆ ತಿಳಿದಿದೆ. ಆದರೆ ಅವನು ಒಬ್ಬ ಮನುಷ್ಯನಿಗೆ ಹಣವನ್ನು ಕೊಡಬೇಕಾಗಿದೆ. ಈಗ ಆ ಮನುಷ್ಯನು ನನ್ನ ಎರಡು ಗಂಡುಮಕ್ಕಳನ್ನು ತೆಗೆದುಕೊಂಡು ತನ್ನ ಗುಲಾಮರನ್ನಾಗಿ ಮಾಡಿಕೊಳ್ಳಲು ಬರುತ್ತಿದ್ದಾನೆ!” ಎಂದು ಹೇಳಿದಳು.
ಆಗ ಪೌಲನು ಹೀಗೆಂದನು: “ನಾನು ಯೆಹೂದ್ಯನು. ನಾನು ಹುಟ್ಟಿದ್ದು ಸಿಲಿಸಿಯ ದೇಶದ ತಾರ್ಸದಲ್ಲಿ. ಆದರೆ ನಾನು ಬೆಳೆದದ್ದು ಈ ಪಟ್ಟಣದಲ್ಲಿ. ನಾನು ಗಮಲಿಯೇಲನ ವಿದ್ಯಾರ್ಥಿಯಾಗಿದ್ದೆನು. ನಮ್ಮ ಪಿತೃಗಳ ಧರ್ಮಶಾಸ್ತ್ರದ ಬಗ್ಗೆ ಪ್ರತಿಯೊಂದನ್ನೂ ಅವನು ನನಗೆ ಬಹು ಸೂಕ್ಷ್ಮವಾಗಿ ಬೋಧಿಸಿದ್ದಾನೆ. ಇಂದು ಇಲ್ಲಿರುವ ನಿಮ್ಮೆಲ್ಲರಂತೆಯೇ ನಾನೂ ದೇವರ ಸೇವೆಯ ಬಗ್ಗೆ ಬಹಳ ಅಭಿಮಾನ ಉಳ್ಳವನಾಗಿದ್ದೆ.
ಒಂದು ಕಾಲದಲ್ಲಿ ಈಜೆಬೆಲಳು ಯೆಹೋವನ ಪ್ರವಾದಿಗಳನ್ನೆಲ್ಲ ಕೊಲ್ಲುತ್ತಿದ್ದಳು. ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ಕರೆದೊಯ್ದು, ಅವರನ್ನು ಗುಹೆಗಳಲ್ಲಿ ಅಡಗಿಸಿಟ್ಟನು. ಓಬದ್ಯನು ಐವತ್ತು ಮಂದಿ ಪ್ರವಾದಿಗಳನ್ನು ಒಂದು ಗುಹೆಯಲ್ಲಿಯೂ ಉಳಿದ ಐವತ್ತು ಮಂದಿ ಪ್ರವಾದಿಗಳನ್ನು ಮತ್ತೊಂದು ಗುಹೆಯಲ್ಲಿಯೂ ಇಟ್ಟನು. ಓಬದ್ಯನು ಅವರಿಗೆ ಆಹಾರವನ್ನೂ ನೀರನ್ನೂ ಒದಗಿಸುತ್ತಿದ್ದನು.)