2 ಅರಸುಗಳು 2:4 - ಪರಿಶುದ್ದ ಬೈಬಲ್4 ಎಲೀಯನು ಎಲೀಷನಿಗೆ, “ದಯವಿಟ್ಟು ಇಲ್ಲಿಯೇ ಇರು, ಏಕೆಂದರೆ ಯೆಹೋವನು ಜೆರಿಕೊವಿಗೆ ಹೋಗುವಂತೆ ನನಗೆ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಆದರೆ ಎಲೀಷನು, “ಯೆಹೋವನಾಣೆ, ನಿನ್ನಾಣೆ, ನಾನು ನಿನ್ನನ್ನು ಬಿಟ್ಟಿರುವುದಿಲ್ಲವೆಂದು ಪ್ರಮಾಣ ಮಾಡುತ್ತೇನೆ!” ಎಂದು ಹೇಳಿದನು. ಇಬ್ಬರೂ ಜೆರಿಕೊವಿಗೆ ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆಗ ಎಲೀಯನು ಎಲೀಷನಿಗೆ, “ನೀನು ಇಲ್ಲೇ ಇರು, ಯೆಹೋವನು ನನಗೆ ಯೆರಿಕೋವಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಆದರೆ ಎಲೀಷನು, “ಯೆಹೋವನಾಣೆ, ನಿನ್ನ ಜೀವದಾಣೆ ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ” ಎಂದು ಉತ್ತರ ಕೊಟ್ಟನು. ಎಲೀಷನು ಅವನ ಜೊತೆಯಲ್ಲಿ ಯೆರಿಕೋವಿಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಎಲೀಯನು ಎಲೀಷನಿಗೆ, “ದಯವಿಟ್ಟು ಇಲ್ಲೇ ಇರು; ಸರ್ವೇಶ್ವರ ನನಗೆ ಜೆರಿಕೋವಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾರೆ,” ಎಂದು ಹೇಳಿದನು. ಆದರೆ ಎಲೀಷನು, “ಸರ್ವೇಶ್ವರನಾಣೆ, ನಿಮ್ಮ ಜೀವದಾಣೆ, ನಾನು ನಿಮ್ಮನ್ನು ಬಿಟ್ಟಿರುವುದಿಲ್ಲ,” ಎಂದು ಉತ್ತರಕೊಟ್ಟು ಅವನ ಜೊತೆಯಲ್ಲೇ ಜೆರಿಕೋವಿಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಗೊತ್ತುಂಟು, ಸುಮ್ಮನಿರ್ರಿ ಅಂದನು. ಎಲೀಯನು ಎಲೀಷನಿಗೆ - ದಯವಿಟ್ಟು ಇಲ್ಲೇ ಇರು; ಯೆಹೋವನು ನನಗೆ ಯೆರಿಕೋವಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾನೆ ಎಂದು ಹೇಳಿದನು. ಆದರೆ ಎಲೀಷನು - ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟುಹೋಗುವದಿಲ್ಲ ಎಂದು ಉತ್ತರಕೊಟ್ಟು ಅವನ ಜೊತೆಯಲ್ಲಿ ಯೆರಿಕೋವಿಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಗ ಎಲೀಯನು ಅವನಿಗೆ, “ಎಲೀಷನೇ, ನೀನು ದಯಮಾಡಿ ಇಲ್ಲೇ ಇರು. ಯೆಹೋವ ದೇವರು ನನ್ನನ್ನು ಯೆರಿಕೋವಿಗೆ ಕಳುಹಿಸುತ್ತಿದ್ದಾರೆ” ಎಂದನು. ಅದಕ್ಕವನು, “ಯೆಹೋವ ದೇವರ ಜೀವದಾಣೆ, ನನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವುದಿಲ್ಲ,” ಎಂದನು. ಹಾಗೆಯೇ ಅವರು ಯೆರಿಕೋವಿಗೆ ಬಂದರು. ಅಧ್ಯಾಯವನ್ನು ನೋಡಿ |
ಅಹಾಬನ ಕಾಲದಲ್ಲಿ ಬೇತೇಲಿನ ಹೀಯೇಲನು ಜೆರಿಕೊ ಪಟ್ಟಣವನ್ನು ಮತ್ತೆ ನಿರ್ಮಿಸಿದನು. ಹೀಯೇಲನು ನಗರದಲ್ಲಿ ಈ ಕೆಲಸವನ್ನು ಮಾಡಲು ಆರಂಭಿಸಿದ ಕಾಲದಲ್ಲಿಯೇ ಅವನ ಹಿರಿಯ ಮಗನಾದ ಅಬೀರಾಮನು ಸತ್ತುಹೋದನು. ಹೀಯೇಲನು ನಗರದ ಬಾಗಿಲುಗಳನ್ನು ಕಟ್ಟಿಸಿದಾಗ, ಅವನ ಕಿರಿಯ ಮಗನಾದ ಸೆಗೂಬನು ಸತ್ತುಹೋದನು. ಯೆಹೋವನು ಹೇಳಿದಂತೆಯೇ ಇದು ಸಂಭವಿಸಿತು. ನೂನನ ಮಗನಾದ ಯೆಹೋಶುವನ ಮೂಲಕ ಯೆಹೋವನು ಇದನ್ನು ತಿಳಿಸಿದ್ದನು.
ಬಾರ್ನಬನು ಒಳ್ಳೆಯ ಮನುಷ್ಯನಾಗಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು ಮತ್ತು ಪೂರ್ಣನಂಬಿಕೆಯುಳ್ಳವನಾಗಿದ್ದನು. ಬಾರ್ನಬನು ಅಂತಿಯೋಕ್ಯಕ್ಕೆ ಹೋದಾಗ, ದೇವರು ಆ ಜನರನ್ನು ಅಧಿಕವಾಗಿ ಆಶೀರ್ವದಿಸಿರುವುದನ್ನು ಕಂಡನು. ಇದರಿಂದ ಬಾರ್ನಬನಿಗೆ ತುಂಬಾ ಸಂತೋಷವಾಯಿತು. ಅಂತಿಯೋಕ್ಯದಲ್ಲಿದ್ದ ವಿಶ್ವಾಸಿಗಳನ್ನೆಲ್ಲ ಅವನು ಪ್ರೋತ್ಸಾಹಿಸಿದನು. ಅವನು ಅವರಿಗೆ, “ನಿಮ್ಮ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬೇಡಿ. ಪ್ರಭುವಿಗೆ ನಿಮ್ಮ ಪೂರ್ಣಹೃದಯಗಳಿಂದ ಯಾವಾಗಲೂ ವಿಧೇಯರಾಗಿರಿ” ಎಂದು ಹೇಳಿದನು. ಅನೇಕ ಜನರು ಪ್ರಭುವಾದ ಯೇಸುವಿನ ಹಿಂಬಾಲಕರಾದರು.