2 ಅರಸುಗಳು 20:12 - ಪರಿಶುದ್ದ ಬೈಬಲ್12 ಆ ಸಮಯದಲ್ಲಿ, ಬಲದಾನನ ಮಗನಾದ ಬೆರೋದಕ ಬಲದಾನ ಎಂಬುವನು ಬಾಬಿಲೋನಿನ ರಾಜನಾಗಿದ್ದನು. ಅವನು ಹಿಜ್ಕೀಯನಿಗೆ ಪತ್ರಗಳನ್ನು ಮತ್ತು ಕಾಣಿಕೆಯನ್ನು ಕಳುಹಿಸಿದನು. ಹಿಜ್ಕೀಯನು ಅಸ್ವಸ್ಥನಾಗಿದ್ದಾನೆ ಎಂಬುದನ್ನು ಬೆರೋದಕ ಬಲದಾನನು ತಿಳಿದುಕೊಂಡದ್ದರಿಂದ ಹೀಗೆ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅದೇ ಕಾಲದಲ್ಲಿ ಬಲದಾನನ ಮಗನೂ, ಬಾಬೆಲಿನ ಅರಸನೂ ಆದ ಬೆರೋದಕಬಲದಾನ ಎಂಬುವವನು ಹಿಜ್ಕೀಯನು ಅಸ್ವಸ್ಥನಾಗಿದ್ದಾನೆಂದು ಕೇಳಿ, ದೂತರ ಮುಖಾಂತರವಾಗಿ ಅವನಿಗೆ ಪತ್ರವನ್ನೂ, ಬಹುಮಾನವನ್ನೂ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅದೇ ಕಾಲದಲ್ಲಿ ಬಲದಾನನ ಮಗನೂ ಬಾಬಿಲೋನಿಯದ ಅರಸನೂ ಆದ ಬೆರೋದಕ ಬಲದಾನ ಎಂಬವನು ಹಿಜ್ಕೀಯನು ಅಸ್ವಸ್ಥನಾಗಿದ್ದನೆಂದು ಕೇಳಿ ದೂತರ ಮುಖಾಂತರ ಅವನಿಗೆ ಪತ್ರವನ್ನೂ ಉಡುಗೊರೆಯನ್ನೂ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅದೇ ಕಾಲದಲ್ಲಿ ಬಲದಾನನ ಮಗನೂ ಬಾಬೆಲಿನ ಅರಸನೂ ಆದ ಬೆರೋದಕಬಲದಾನನೆಂಬವನು ಹಿಜ್ಕೀಯನು ಅಸ್ವಸ್ಥನಾಗಿದ್ದನೆಂದು ಕೇಳಿ ದೂತರ ಮುಖಾಂತರವಾಗಿ ಅವನಿಗೆ ಪತ್ರವನ್ನೂ ಬಹುಮಾನವನ್ನೂ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅದೇ ಕಾಲದಲ್ಲಿ ಬಲದಾನನ ಮಗನೂ, ಬಾಬಿಲೋನಿನ ಅರಸನೂ ಆದ ಮೆರೋದಕ್ ಬಲದಾನ್ ಎಂಬವನು, ಹಿಜ್ಕೀಯನು ಅಸ್ವಸ್ಥನಾಗಿದ್ದಾನೆಂದು ಕೇಳಿದ್ದರಿಂದ ಪತ್ರಗಳನ್ನೂ, ಉಡುಗೊರೆಗಳನ್ನೂ ಹಿಜ್ಕೀಯನ ಬಳಿಗೆ ಕಳುಹಿಸಿದನು. ಅಧ್ಯಾಯವನ್ನು ನೋಡಿ |
ಆಗ ತೋವಿಯು ತನ್ನ ಮಗನಾದ ಯೋರಾಮನನ್ನು ರಾಜನಾದ ದಾವೀದನ ಬಳಿಗೆ ಕಳುಹಿಸಿದನು. ದಾವೀದನು ಹದದೆಜೆರನ ವಿರುದ್ಧ ಹೋರಾಡಿ ಅವನನ್ನು ಸೋಲಿಸಿದ್ದಕ್ಕಾಗಿ ಯೋರಾಮನು ದಾವೀದನನ್ನು ಅಭಿನಂದಿಸಿದನು ಮತ್ತು ಆಶೀರ್ವದಿಸಿದನು. (ಈ ಮೊದಲು ಹದದೆಜೆರನು ತೋವಿಗೆ ವಿರುದ್ಧವಾಗಿ ಯುದ್ಧವನ್ನು ಮಾಡಿದನು.) ಯೋರಾಮನು ಚಿನ್ನ, ಬೆಳ್ಳಿ ಮತ್ತು ಹಿತ್ತಾಳೆಯಿಂದ ಮಾಡಿದ ವಸ್ತುಗಳನ್ನು ತಂದಿದ್ದನು.